ಕುಮಾರಕೃಪಾ ಗೆಸ್ಟ್‌ಹೌಸ್‌ಗೆ 'ಗಂಗಾ' ಎಂದು ನಾಮಕರಣ 
ರಾಜ್ಯ

ಪಕ್ಷಾತೀತ ರಾಜಕೀಯ ನಾಯಕರ ಸಮಾಗಮಕ್ಕೆ 'ಗಂಗಾ' ಸಜ್ಜು; ಶಾಸಕರು, ಸಂಸದರು, ಪರಿಷತ್ ಸದಸ್ಯರಿಗೆ ಡಿಕೆಶಿ ಭರ್ಜರಿ ಔತಣ..!

ಸುಮಾರು 160 ವರ್ಷಗಳಷ್ಟು ಹಳೆಯದಾದ ಪಾರಂಪರಿಕ ಕಟ್ಟಡವಾಗಿರುವ 'ಕುಮಾರಕೃಪ'ವನ್ನು ನವೀಕರಿಸಿ ಮುಖ್ಯಮಂತ್ರಿಗಳ ಅಧಿಕೃತ ನಿವಾಸವನ್ನಾಗಿ ರೂಪಿಸಲಾಗಿದೆ. ಇದೀಗ ಅದಕ್ಕೆ 'ಗಂಗಾ' ಎಂದು ಮರುನಾಮಕರಣ ಮಾಡಲಾಗಿದೆ.

ಬೆಂಗಳೂರು: ನೂತನ ಅಧಿಕೃತ ನಿವಾಸ 'ಗಂಗಾ'ದಲ್ಲಿ ಗೃಹಪ್ರವೇಶದ ಧಾರ್ಮಿಕ ವಿಧಿವಿಧಾನಗಳನ್ನು ನೆರವೇರಿಸಿದ ಮೂರು ದಿನಗಳ ಬಳಿಕ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಗುರುವಾರ ಸುಮಾರು 500 ರಾಜಕೀಯ ನಾಯಕರಿಗೆ ಭೋಜನಕೂಟ ಆಯೋಜಿಸಿದ್ದಾರೆ.

ಸಚಿವರು, ಶಾಸಕರು, ವಿಧಾನ ಪರಿಷತ್ ಸದಸ್ಯರು, ಸಂಸದರು ಹಾಗೂ ಕಾಂಗ್ರೆಸ್‌ನ ಹಿರಿಯ ನಾಯಕರು ಸೇರಿದಂತೆ ವಿವಿಧ ಪಕ್ಷಗಳ ಪ್ರಮುಖರು ಈ ಔತಣಕೂಟದಲ್ಲಿ ಭಾಗವಹಿಸಲಿದ್ದಾರೆ.

ಪಕ್ಷಾತೀತವಾಗಿ ರಾಜ್ಯದ ಎಲ್ಲ 224 ಶಾಸಕರು ಮತ್ತು 70 ವಿಧಾನ ಪರಿಷತ್ ಸದಸ್ಯರಿಗೆ ಆಹ್ವಾನ ನೀಡಲಾಗಿದೆ. ರಾಜ್ಯಸಭಾ ಸದಸ್ಯರು ಸೇರಿದಂತೆ 41 ಸಂಸದರು, 2023ರ ವಿಧಾನಸಭೆ ಮತ್ತು 2024ರ ಲೋಕಸಭೆ ಚುನಾವಣೆಯಲ್ಲಿ ಸೋಲು ಕಂಡ ಕಾಂಗ್ರೆಸ್ ಅಭ್ಯರ್ಥಿಗಳು, ಪಕ್ಷದ 30 ಹಿರಿಯ ನಾಯಕರು, ವಿವಿಧ ಮಂಡಳಿ ಮತ್ತು ನಿಗಮಗಳ 30 ಅಧ್ಯಕ್ಷರು ಸೇರಿದಂತೆ ಇತರ ಗಣ್ಯರು ಅತಿಥಿಗಳ ಪಟ್ಟಿಯಲ್ಲಿದ್ದಾರೆ.

ಸುಮಾರು 160 ವರ್ಷಗಳಷ್ಟು ಹಳೆಯದಾದ ಪಾರಂಪರಿಕ ಕಟ್ಟಡವಾಗಿರುವ 'ಕುಮಾರಕೃಪ'ವನ್ನು ನವೀಕರಿಸಿ ಮುಖ್ಯಮಂತ್ರಿಗಳ ಅಧಿಕೃತ ನಿವಾಸವನ್ನಾಗಿ ರೂಪಿಸಲಾಗಿದೆ. ಇದೀಗ ಅದಕ್ಕೆ 'ಗಂಗಾ' ಎಂದು ಮರುನಾಮಕರಣ ಮಾಡಲಾಗಿದೆ.

ಕಳೆದ ಸೋಮವಾರ ಕಾರ್ತಿಕ ಸೋಮವಾರದ ಶುಭ ಸಂದರ್ಭದಲ್ಲಿ ನಿವಾಸದಲ್ಲಿ ಗೃಹಪ್ರವೇಶದ ಪೂಜಾ ಕಾರ್ಯಕ್ರಮ ನೆರವೇರಿಸಲಾಗಿತ್ತು. ಶಿವಕುಮಾರ್ ಅವರು ಹೋಮ ಸೇರಿದಂತೆ ಧಾರ್ಮಿಕ ವಿಧಿವಿಧಾನಗಳಲ್ಲಿ ಪಾಲ್ಗೊಂಡಿದ್ದರು. ಬಳಿಕ ಕಾಂಗ್ರೆಸ್ ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರ ಆತ್ಮಕಥನ 'ಬಿಲಾಂಗಿಂಗ್: ಎ ಜರ್ನಿ ಆಫ್ ಲವ್' ಕೃತಿಯ ಅಧಿಕೃತ ಬಿಡುಗಡೆ ಕಾರ್ಯಕ್ರಮದಲ್ಲಿ ಭಾಗವಹಿಸಲು ನವದೆಹಲಿಗೆ ತೆರಳಿದ್ದರು.

ಕುಟುಂಬದ ಸದಸ್ಯರು, ಜ್ಯೋತಿಷಿಗಳು ಹಾಗೂ ಆಪ್ತರ ಸಣ್ಣ ಗುಂಪಿನ ಸಮ್ಮುಖದಲ್ಲಿ ಗೃಹಪ್ರವೇಶದ ಪೂಜೆ ನೆರವೇರಿಸಲಾಗಿತ್ತು ಎಂದು ಮೂಲಗಳು ತಿಳಿಸಿವೆ.

ಮುಂದಿನ ಎರಡು ವಾರಗಳಲ್ಲಿ ಮುಖ್ಯಮಂತ್ರಿ ಶಿವಕುಮಾರ್ ಕುಟುಂಬ ಸಮೇತ 'ಗಂಗಾ' ನಿವಾಸಕ್ಕೆ ಸ್ಥಳಾಂತರಗೊಳ್ಳುವ ನಿರೀಕ್ಷೆಯಿದೆ. ಸದ್ಯ ಕಟ್ಟಡದ ನವೀಕರಣ ಹಾಗೂ ಇತರ ಕಾಮಗಾರಿಗಳು ಮುಂದುವರಿದಿವೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Arnab ಚಂಡಮಾರುತ ಸಂಕಷ್ಟದಲ್ಲಿ ನೆರವು; ಕರ್ನಾಟಕಕ್ಕೆ ಆಂಧ್ರ ಸಿಎಂ ಚಂದ್ರಬಾಬು ನಾಯ್ಡು ಧನ್ಯವಾದ; ಡಿಕೆಶಿ ಹೇಳಿದ್ದೇನು?

ಮನರೇಗಾ ಯೋಜನೆಯ ₹13.57 ಲಕ್ಷ ಗುಳುಂ; ಕೆಲಸ ಮಾಡದೆ ಸರ್ಕಾರಿ ಹಣ ಲೂಟಿ, ಇಬ್ಬರು ಆರೋಪಿಗಳಿಗೆ ಜೈಲು ಶಿಕ್ಷೆ!

Gold rate: ಭಾರಿ ಕುಸಿತದ ಬಳಿಕ ಚಿನ್ನದ ದರ ಮತ್ತೆ ಏರಿಕೆ; ಬೆಂಗಳೂರಿನಲ್ಲಿ 10 ಗ್ರಾಂ ಚಿನ್ನದ ದರ ಎಷ್ಟಿದೆ? ಬೆಳ್ಳಿ ಬೆಲೆಯಲ್ಲೂ ಬದಲಾವಣೆ, ಇಲ್ಲಿದೆ ಸಂಪೂರ್ಣ ಪಟ್ಟಿ!

ಮತದಾರರ ಹೆಸರು ಅಳಿಸಲು ಫಾರ್ಮ್-7 ದುರ್ಬಳಕೆ ಆರೋಪ; ಬಿಜೆಪಿ ಬೂತ್ ಏಜೆಂಟರಿಗೆ ಹೈಕೋರ್ಟ್ ರಿಲೀಫ್, FIRಗೆ ತಡೆ

Wellington Test: ಟಾಸ್ ಗೆದ್ದ ಭಾರತ ಬೌಲಿಂಗ್ ಆಯ್ಕೆ, ಬುಮ್ರಾ ಮಾರಕ ದಾಳಿಗೆ ತತ್ತರಿಸಿದ ಕಿವೀಸ್ 99/5