ಸಚಿವ ರಿಜ್ವಾನ್ ಅರ್ಷದ್ 
ರಾಜ್ಯ

Ethanol ಮಿಶ್ರಣ ವಿವಾದ: ಗುಣಮಟ್ಟ ಪರೀಕ್ಷೆಗೆ ಸ್ವತಂತ್ರ ವ್ಯವಸ್ಥೆ ರೂಪಿಸಿ; ಕೇಂದ್ರ ಸರ್ಕಾರಕ್ಕೆ ಪತ್ರ ಬರೆದ ಸಚಿವ ರಿಜ್ವಾನ್ ಅರ್ಷದ್

ಇಷ್ಟು ದೊಡ್ಡ ಪ್ರಮಾಣದ ಬದಲಾವಣೆಯನ್ನು ಜಾರಿಗೆ ತರಲು ಇಂಧನ ಮೂಲಸೌಕರ್ಯ ಮತ್ತು ಎಥೆನಾಲ್ ಮಿಶ್ರಿತ ಇಂಧನಕ್ಕೆ ಹೊಂದಿಕೊಳ್ಳುವ ವಾಹನಗಳು ಸೇರಿದಂತೆ ಇಡೀ ವ್ಯವಸ್ಥೆ ಸಿದ್ಧವಾಗಿರಬೇಕು.

ಬೆಂಗಳೂರು: ಎಥೆನಾಲ್ ಮಿಶ್ರಣ ಕಾರ್ಯಕ್ರಮಕ್ಕೆ ಕರ್ನಾಟಕ ಸರ್ಕಾರ ವಿರೋಧ ವ್ಯಕ್ತಪಡಿಸುತ್ತಿಲ್ಲ. ಆದರೆ, ನಿಗದಿತ ಪ್ರಮಾಣಕ್ಕಿಂತ ಹೆಚ್ಚಿನ ಎಥೆನಾಲ್ ಮಿಶ್ರಣ ಮಾಡುವುದನ್ನು ವಿರೋಧಿಸುತ್ತಿದೆ ಎಂದು ಸಚಿವ ರಿಜ್ವಾನ್ ಅರ್ಷದ್ ಸ್ಪಷ್ಟಪಡಿಸಿದ್ದಾರೆ.

ಈ ಸಂಬಂಧ ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವ ಹರ್ದೀಪ್ ಸಿಂಗ್ ಪುರಿ ಅವರಿಗೆ ಬುಧವಾರ ಪತ್ರ ಬರೆದಿರುವ ಅವರು, ಎಥೆನಾಲ್ ಮಿಶ್ರಣ ಕಾರ್ಯಕ್ರಮವು ನಾಗರಿಕರ ಹಿತಾಸಕ್ತಿಗೆ ಧಕ್ಕೆ ತರುವಂತಿರಬಾರದು ಎಂದು ಹೇಳಿದ್ದಾರೆ.

ಇಷ್ಟು ದೊಡ್ಡ ಪ್ರಮಾಣದ ಬದಲಾವಣೆಯನ್ನು ಜಾರಿಗೆ ತರಲು ಇಂಧನ ಮೂಲಸೌಕರ್ಯ ಮತ್ತು ಎಥೆನಾಲ್ ಮಿಶ್ರಿತ ಇಂಧನಕ್ಕೆ ಹೊಂದಿಕೊಳ್ಳುವ ವಾಹನಗಳು ಸೇರಿದಂತೆ ಇಡೀ ವ್ಯವಸ್ಥೆ ಸಿದ್ಧವಾಗಿರಬೇಕು. ಇಂತಹ ಪರಿವರ್ತನೆಗೆ ಸಮಯ ಬೇಕಾಗುತ್ತದೆ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಕಳೆದ ಹಲವು ತಿಂಗಳುಗಳಿಂದ ರಾಜ್ಯದಾದ್ಯಂತ ವಾಹನ ಸವಾರರಿಂದ ಸಾಕಷ್ಟು ದೂರುಗಳು ಬಂದಿವೆ. ಎಥೆನಾಲ್ ಮಿಶ್ರಿತ ಪೆಟ್ರೋಲ್ ಬಳಕೆಯಿಂದ ವಾಹನಗಳ ಮೈಲೇಜ್ ಕಡಿಮೆಯಾಗುತ್ತಿದೆ, ಎಂಜಿನ್‌ಗಳು ಸರಿಯಾಗಿ ಕಾರ್ಯನಿರ್ವಹಿಸುತ್ತಿಲ್ಲ, ಹಳೆಯ ವಾಹನಗಳು ಹಾನಿಗೊಳಗಾಗುತ್ತಿವೆ ಹಾಗೂ ಹಣ ಪಾವತಿಸಿದ ಪ್ರಮಾಣಕ್ಕಿಂತ ಕಡಿಮೆ ಇಂಧನ ದೊರೆಯುತ್ತಿದೆ ಎಂಬ ದೂರುಗಳು ಕೇಳಿಬಂದಿವೆ ಎಂದು ತಿಳಿಸಿದ್ದಾರೆ.

ಇದೇ ವೇಳೆ ಕೇಂದ್ರ ಸರ್ಕಾರಕ್ಕೆ ರಿಜ್ವಾನ್ ಅರ್ಷದ್ ಅವರು ಕೆಲವು ಸಲಹೆ ಹಾಗೂ ಕ್ರಮಗಳನ್ನೂ ಸೂಚಿಸಿದ್ದು, ಅವುಗಳು ಇಂತಿವೆ...

  • ಪ್ರತಿಯೊಂದು ಪೆಟ್ರೋಲ್ ಬಂಕ್‌ನಲ್ಲೂ ಮಾರಾಟವಾಗುವ ಇಂಧನದಲ್ಲಿನ ಎಥೆನಾಲ್ ಮಿಶ್ರಣದ ನಿಖರ ಪ್ರಮಾಣವನ್ನು ಗ್ರಾಹಕರಿಗೆ ಕಾಣುವಂತೆ ಪ್ರದರ್ಶಿಸಬೇಕು.

  • ಕಡಿಮೆ ಪ್ರಮಾಣದ ಎಥೆನಾಲ್ ಮಿಶ್ರಣ ಹೊಂದಿರುವ ಪೆಟ್ರೋಲ್ ಖರೀದಿಸುವ ಆಯ್ಕೆಯನ್ನು ಗ್ರಾಹಕರಿಗೆ ನೀಡಬೇಕು. ಅಂತಹ ಇಂಧನವನ್ನು ಕೈಗೆಟುಕುವ ದರದಲ್ಲಿ ಲಭ್ಯವಾಗುವಂತೆ ಮಾಡಬೇಕು.

  • ಇಂಧನದ ಗುಣಮಟ್ಟವನ್ನು ಪರೀಕ್ಷಿಸಲು ರಾಷ್ಟ್ರೀಯ ಪ್ರಯೋಗಾಲಯ ಮಾನ್ಯತಾ ಮಂಡಳಿ (ಎನ್‌ಎಬಿಎಲ್) ಮಾನ್ಯತೆ ಪಡೆದ ಪ್ರಯೋಗಾಲಯಗಳ ಮೂಲಕ ಸ್ವತಂತ್ರ ಹಾಗೂ ತೃತೀಯ ಸಂಸ್ಥೆಯ ಪರೀಕ್ಷಾ ವ್ಯವಸ್ಥೆ ಜಾರಿಗೆ ತರಬೇಕು.

  • ನಿಗದಿತ ಮಿತಿಗಿಂತ ಹೆಚ್ಚಿನ ಎಥೆನಾಲ್ ಮಿಶ್ರಿತ ಪೆಟ್ರೋಲ್ ಬಳಕೆಯಿಂದ ವಾಹನಗಳಿಗೆ ಹಾನಿಯಾದರೆ ಗ್ರಾಹಕರಿಗೆ ಪರಿಹಾರ ನೀಡಲು ಇ-20 ಪರಿಹಾರ ನಿಧಿ ಸ್ಥಾಪಿಸಬೇಕು.

  • ಎಥೆನಾಲ್ ಮಿಶ್ರಣ ಕಾರ್ಯಕ್ರಮವನ್ನು ಜಾರಿಗೊಳಿಸುವಾಗ ಗ್ರಾಹಕರ ಹಿತಾಸಕ್ತಿ, ವಾಹನಗಳ ಸುರಕ್ಷತೆ ಮತ್ತು ಇಂಧನದ ಗುಣಮಟ್ಟಕ್ಕೆ ಆದ್ಯತೆ ನೀಡಬೇಕು ಎಂದು ಒತ್ತಾಯಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Arnab ಚಂಡಮಾರುತ ಸಂಕಷ್ಟದಲ್ಲಿ ನೆರವು; ಕರ್ನಾಟಕಕ್ಕೆ ಆಂಧ್ರ ಸಿಎಂ ಚಂದ್ರಬಾಬು ನಾಯ್ಡು ಧನ್ಯವಾದ; ಡಿಕೆಶಿ ಹೇಳಿದ್ದೇನು?

ಮನರೇಗಾ ಯೋಜನೆಯ ₹13.57 ಲಕ್ಷ ಗುಳುಂ; ಕೆಲಸ ಮಾಡದೆ ಸರ್ಕಾರಿ ಹಣ ಲೂಟಿ, ಇಬ್ಬರು ಆರೋಪಿಗಳಿಗೆ ಜೈಲು ಶಿಕ್ಷೆ!

Gold rate: ಭಾರಿ ಕುಸಿತದ ಬಳಿಕ ಚಿನ್ನದ ದರ ಮತ್ತೆ ಏರಿಕೆ; ಬೆಂಗಳೂರಿನಲ್ಲಿ 10 ಗ್ರಾಂ ಚಿನ್ನದ ದರ ಎಷ್ಟಿದೆ? ಬೆಳ್ಳಿ ಬೆಲೆಯಲ್ಲೂ ಬದಲಾವಣೆ, ಇಲ್ಲಿದೆ ಸಂಪೂರ್ಣ ಪಟ್ಟಿ!

ಮತದಾರರ ಹೆಸರು ಅಳಿಸಲು ಫಾರ್ಮ್-7 ದುರ್ಬಳಕೆ ಆರೋಪ; ಬಿಜೆಪಿ ಬೂತ್ ಏಜೆಂಟರಿಗೆ ಹೈಕೋರ್ಟ್ ರಿಲೀಫ್, FIRಗೆ ತಡೆ

Wellington Test: ಟಾಸ್ ಗೆದ್ದ ಭಾರತ ಬೌಲಿಂಗ್ ಆಯ್ಕೆ, ಬುಮ್ರಾ ಮಾರಕ ದಾಳಿಗೆ ತತ್ತರಿಸಿದ ಕಿವೀಸ್ 99/5