ಮಹಾದೇವಪ್ಪ ಮತ್ತು ಸುನೀಲ್ ಬೋಸ್ 
ರಾಜ್ಯ

ಸಂವಿಧಾನ ದಿನಾಚರಣೆ ಸಿದ್ಧತೆ: ಅಂತರ ಕಾಯ್ದುಕೊಂಡ ಮಹಾದೇವಪ್ಪ; ಸಿದ್ದರಾಮಯ್ಯ ಸಭೆಗೆ ತಂದೆ- ಮಗ ಗೈರು!

ರಾಜ್ಯ ಸರ್ಕಾರದ ವತಿಯಿಂದ ಹಮ್ಮಿಕೊಂಡಿರುವ ಸಂವಿಧಾನ ದಿನಾಚರಣೆ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಪೂರ್ವ ಸಿದ್ಧತೆಗಳ ಕುರಿತು ಚರ್ಚಿಸಲು ಮೈಸೂರಿನ ಖಾಸಗಿ ಹೋಟೆಲ್‌ನಲ್ಲಿ ಬುಧವಾರ ರಾತ್ರಿ ಕಾಂಗ್ರೆಸ್ ನಾಯಕರ ಸಭೆ ಆಯೋಜಿಸಲಾಗಿತ್ತು.

ಮೈಸೂರು: ಮೈಸೂರಿನಲ್ಲಿ ಆಪ್ತರ ನಡುವಿನ ಮುನಿಸು ಮುಂದುವರಿದಂತೆ ಕಾಣುತ್ತಿದ್ದು, ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಡೆದ ಮಹತ್ವದ ಪೂರ್ವಭಾವಿ ಸಭೆಗೆ ಅವರ ಪರಮಾಪ್ತ ಡಾ. ಹೆಚ್.ಸಿ. ಮಹದೇವಪ್ಪ ಅವರು ಗೈರಾಗುವ ಮೂಲಕ ಮತ್ತೊಮ್ಮೆ ಅಂತರ ಕಾಯ್ದುಕೊಂಡಿದ್ದಾರೆ.

ನವೆಂಬರ್ 26ರಂದು ಮೈಸೂರಿನಲ್ಲಿ ರಾಜ್ಯ ಸರ್ಕಾರದ ವತಿಯಿಂದ ಹಮ್ಮಿಕೊಂಡಿರುವ ಸಂವಿಧಾನ ದಿನಾಚರಣೆ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಪೂರ್ವ ಸಿದ್ಧತೆಗಳ ಕುರಿತು ಚರ್ಚಿಸಲು ಮೈಸೂರಿನ ಖಾಸಗಿ ಹೋಟೆಲ್‌ನಲ್ಲಿ ಬುಧವಾರ ರಾತ್ರಿ ಕಾಂಗ್ರೆಸ್ ನಾಯಕರ ಸಭೆ ಆಯೋಜಿಸಲಾಗಿತ್ತು.

ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಡೆದ ಈ ಮಹತ್ವದ ಸಭೆಯಲ್ಲಿ ಸಚಿವರಾದ ಪಿ.ಎಂ. ನರೇಂದ್ರಸ್ವಾಮಿ, ಎನ್. ಚೆಲುವರಾಯಸ್ವಾಮಿ, ಶಾಸಕರಾದ ಯತೀಂದ್ರ ಸಿದ್ದರಾಮಯ್ಯ, ಕೆ.ಎಂ. ಶಿವಲಿಂಗೇಗೌಡ, ಗಣಿಗ ರವಿ, ರಮೇಶ್ ಬಂಡಿಸಿಡ್ಡೆಗೌಡ, ವಿಧಾನ ಪರಿಷತ್ ಸದಸ್ಯರಾದ ತಿಮ್ಮಯ್ಯ, ಶಿವಕುಮಾರ್ ಸೇರಿದಂತೆ ಹಲವು ಸ್ಥಳೀಯ ಕಾಂಗ್ರೆಸ್ ಮುಖಂಡರು ಭಾಗವಹಿಸಿ ಕಾರ್ಯಕ್ರಮದ ರೂಪುರೇಷೆಗಳ ಬಗ್ಗೆ ಚರ್ಚಿಸಿದರು.

ಜಿಲ್ಲೆಯವರೇ ಆದ, ಶಾಸಕರಾದ ಡಾ.ಎಚ್‌.ಸಿ. ಮಹದೇವಪ್ಪ, ತನ್ವೀರ್‌ ಸೇಠ್, ಕೆ.ವೆಂಕಟೇಶ್ ಮೊದಲಾದ ನಾಯಕರು ಪಾಲ್ಗೊಂಡಿಲ್ಲದಿರುವುದು ಚರ್ಚೆಗೆ ಗ್ರಾಸವಾಗಿದೆ. ದಲಿತ ನಾಯಕ ಮಹದೇವಪ್ಪ ಅವರು ಸಿದ್ದರಾಮಯ್ಯ ಅವರೊಂದಿಗೆ ಮತ್ತೆ ಅಂತರ ಕಾಯ್ದುಕೊಂಡಿರುವುದು ಕಂಡುಬಂತು.

‘ಸಂವಿಧಾನ ರಕ್ಷಣೆಯ ಜಾಗೃತಿ ಕಾರ್ಯಕ್ರಮ ಇದಾಗಿರುವುದರಿಂದ ನಮ್ಮೆಲ್ಲ ಶಾಸಕರು, ಮಾಜಿ ಶಾಸಕರು ಹಾಗೂ ಪಕ್ಷದ ಮುಖಂಡರು ಕಾರ್ಯಕ್ರಮವನ್ನು ಗಂಭೀರವಾಗಿ ಪರಿಗಣಿಸಬೇಕು. ಹೆಚ್ಚಿನ ಜನರು ಭಾಗವಹಿಸುವಂತೆ ಮಾಡಬೇಕು ಎಂದು ಸಿದ್ದರಾಮಯ್ಯ ನಿರ್ದೇಶಿಸಿದರು’ ಎಂದು ತಿಳಿದು ಬಂದಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ದೆಹಲಿ ವಿಮಾನ ನಿಲ್ದಾಣದಲ್ಲಿ ಆಗಂತುಕನ ಆತಂಕ: ಟಿಕೆಟ್ ಇಲ್ಲ, ದಾಖಲೆಗಳೂ ಇಲ್ಲ, ಬಲವಂತವಾಗಿ ನುಗ್ಗಲು ಯತ್ನಿಸಿದವ CISF ವಶಕ್ಕೆ! Video

Arnab ಚಂಡಮಾರುತ ಸಂಕಷ್ಟದಲ್ಲಿ ನೆರವು; ಕರ್ನಾಟಕಕ್ಕೆ ಆಂಧ್ರ ಸಿಎಂ ಚಂದ್ರಬಾಬು ನಾಯ್ಡು ಧನ್ಯವಾದ; ಡಿಕೆಶಿ ಹೇಳಿದ್ದೇನು?

Wellington Test: ಸಂಕಷ್ಟದಲ್ಲಿದ್ದ ನ್ಯೂಜಿಲೆಂಡ್ ಫಿಲಿಪ್ಸ್-ನಿಕೋಲ್ಸ್ ಆಸರೆ, ಮೊದಲ ದಿನದಾಟದ ಅಂತ್ಯಕ್ಕೆ NZ 243/5

ತಮಿಳುನಾಡಿನಲ್ಲಿ ಅಮಾನವೀಯ ಘಟನೆ; ಪಾಠ ಕೇಳದಿದ್ದಕ್ಕೆ 3 ವರ್ಷದ ಬಾಲಕನ ಕೈಕಟ್ಟಿ, ಹಾಳೆಯಲ್ಲಿ ಸುತ್ತಿದ ಶಿಕ್ಷಕಿ!

ದೇವಾಲಯದ ಹುಂಡಿ ತುಂಬಿದರೂ ಅರ್ಚಕರ ಹೊಟ್ಟೆ ತುಂಬುತ್ತಿಲ್ಲ; ಹಾಲು, ತುಪ್ಪ, ಅಕ್ಕಿ ಬೆಲೆ ಏರಿಕೆ, ವೇತನ ಹೆಚ್ಚಳ, ವಿಮೆಗೆ ಆಗ್ರಹ!