ಬೆಂಗಳೂರು: ರಾಜ್ಯ ಸರ್ಕಾರವು ಖಾಲಿ ಇರುವ ವಿವಿಧ ನಿಗಮ-ಮಂಡಳಿಗಳು ಹಾಗೂ ಆಯಕಟ್ಟಿನ ಹುದ್ದೆಗಳನ್ನು ಭರ್ತಿ ಮಾಡಲು ಮುಂದಾಗಿದ್ದು, ನೂತನ ಅಧ್ಯಕ್ಷರು ಹಾಗೂ ಪದಾಧಿಕಾರಿಗಳ ನೇಮಕಾತಿ ಪಟ್ಟಿಯನ್ನು ಪ್ರಕಟಿಸಿದೆ.
ಈ ಪಟ್ಟಿಯಲ್ಲಿ 12 ಶಾಸಕರು ಹಾಗೂ ಮೂವರು ಪಕ್ಷದ ಕಾರ್ಯಕರ್ತರಿಗೆ ವಿವಿಧ ನಿಗಮ-ಮಂಡಳಿಗಳ ಅಧ್ಯಕ್ಷ ಸ್ಥಾನದ ಹೊಣೆಗಾರಿಕೆ ನೀಡಲಾಗಿದೆ.
ಇದರೊಂದಿಗೆ ಸರ್ಕಾರದ ಪ್ರಮುಖ ಹುದ್ದೆಗಳಿಗೂ ನೇಮಕಾತಿ ಮಾಡಲಾಗಿದ್ದು, ಶಾಸಕ ಬೇಳೂರು ಗೋಪಾಲಕೃಷ್ಣ ಅವರನ್ನು ಸರ್ಕಾರಿ ಮುಖ್ಯ ಸಚೇತಕರನ್ನಾಗಿ, ಮಾಜಿ ಸಚಿವ ತನ್ವೀರ್ ಸೇಠ್ ಅವರನ್ನು ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಯನ್ನಾಗಿ ಹಾಗೂ ಮಂಜುನಾಥ್ ಭಂಡಾರಿ ಅವರನ್ನು ವಿಧಾನ ಪರಿಷತ್ ಮುಖ್ಯ ಸಚೇತಕರನ್ನಾಗಿ ನೇಮಕ ಮಾಡಲಾಗಿದೆ.
ಪಕ್ಷದ ನಿಷ್ಠಾವಂತ ಶಾಸಕರು ಹಾಗೂ ಕಾರ್ಯಕರ್ತರಿಗೆ ಅಧಿಕಾರ ಹಂಚಿಕೆ ಮಾಡುವ ಮೂಲಕ ಸರ್ಕಾರವು ಆಡಳಿತ ಯಂತ್ರಕ್ಕೆ ಮತ್ತಷ್ಟು ಚುರುಕು ಮುಟ್ಟಿಸುವ ಪ್ರಯತ್ನ ನಡೆಸಿದೆ.
ವಿವಿಧ ನಿಗಮ ಮತ್ತು ಮಂಡಳಿಗಳಿಗೆ ಕೆಳಕಂಡ ಶಾಸಕರು, ನಾಯಕರನ್ನು ಅಧ್ಯಕ್ಷರನ್ನಾಗಿ ಮಾಡುವ ಪ್ರಸ್ತಾವನೆಯನ್ನು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅಂಗೀಕರಿಸಿದ್ದಾರೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ವೇಣುಗೋಪಾಲ್ ತಿಳಿಸಿದ್ದಾರೆ.
ಯಾರಿಗೆ ಯಾವ ಸ್ಥಾನ?
ಬಿ. ಶಿವಣ್ಣ: ಅಧ್ಯಕ್ಷ, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ
ಕೆ. ಷಡಕ್ಷರಿ: ಅಧ್ಯಕ್ಷ, ಕರ್ನಾಟಕ ರಾಜ್ಯ ಖನಿಜ ನಿಗಮ ನಿಯಮಿತ
ಪಿ.ಎಂ. ಅಶೋಕ್: ಅಧ್ಯಕ್ಷ, ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ
ಆರ್. ಕೃಷ್ಣಮೂರ್ತಿ: ಅಧ್ಯಕ್ಷ, ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ
ಹಂಪನಗೌಡ ಬಾದರ್ಲಿ: ಅಧ್ಯಕ್ಷ, ಕರ್ನಾಟಕ ರಾಜ್ಯ ಉಗ್ರಾಣ ನಿಗಮ
ಡಿ.ಜಿ. ಶಾಂತನ ಗೌಡ: ಅಧ್ಯಕ್ಷ, ಬೆಂಗಳೂರು ಘನತ್ಯಾಜ್ಯ ನಿರ್ವಹಣಾ ನಿಯಮಿತ
ಜಿ.ಎಚ್. ಶ್ರೀನಿವಾಸ್: ಅಧ್ಯಕ್ಷ, ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮ
ಮಹಾಂತೇಶ್ ಕೌಜಲಗಿ: ಅಧ್ಯಕ್ಷ, ಕರ್ನಾಟಕ ರಸ್ತೆ ಅಭಿವೃದ್ಧಿ ನಿಗಮ
ಎಸ್.ಎನ್. ಸುಬ್ಬಾರೆಡ್ಡಿ: ಅಧ್ಯಕ್ಷ, ಮೈಸೂರು ಸೇಲ್ಸ್ ಇಂಟರ್ನ್ಯಾಷನಲ್ ಲಿಮಿಟೆಡ್
ಬೇಳೂರು ಗೋಪಾಲಕೃಷ್ಣ: ಮುಖ್ಯ ಸಚೇತಕ, ವಿಧಾನಸಭೆ
ತನ್ವೀರ್ ಸೇಠ್: ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ
ಎನ್.ಎಚ್. ಕೋನರಡ್ಡಿ: ಅಧ್ಯಕ್ಷ, ಕರ್ನಾಟಕ ಕೃಷಿ ಬೆಲೆ ಆಯೋಗ
ಬಸನಗೌಡ ದದ್ದಲ್: ಅಧ್ಯಕ್ಷ, ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ
ಮಂಜುನಾಥ ಬಂಡಾರಿ: ಮುಖ್ಯ ಸಚೇತಕ, ವಿಧಾನ ಪರಿಷತ್ತು
ಅಲ್ಲಮಪ್ರಭು ಪಾಟೀಲ್: ಅಧ್ಯಕ್ಷ, ಕರ್ನಾಟಕ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮ ನಿಯಮಿತ
ಶ್ಯಾಮ ನಾಟೇಕರ್: ಅಧ್ಯಕ್ಷ, ಕರ್ನಾಟಕ ಮಸಾಲೆ ಪದಾರ್ಥಗಳ ಅಭಿವೃದ್ಧಿ ಮಂಡಳಿ
ಎಚ್.ಸಿ. ಲಲಿತ್ ರಾಘವ್: ಅಧ್ಯಕ್ಷ, ಕರ್ನಾಟಕ ವಿದ್ಯುತ್ ನಿಗಮ ನಿಯಮಿತ
ಸುಭಾಷ್ ರಾಥೋಡ್: ಅಧ್ಯಕ್ಷ, ಕರ್ನಾಟಕ ತಾಂಡಾ ಅಭಿವೃದ್ಧಿ ನಿಗಮ