ಮಂಗಳೂರು ವಿದ್ಯಾರ್ಥಿನಿ ಕಿಡ್ನಾಪ್ ಕೇಸ್‌ Online Desk
ರಾಜ್ಯ

ಮಂಗಳೂರು ವಿದ್ಯಾರ್ಥಿನಿ ಕಿಡ್ನಾಪ್ ಕೇಸ್‌ಗೆ ಟ್ವಿಸ್ಟ್: ಕೇರಳಂನಲ್ಲಿ ಪತ್ತೆಯಾದ ಯುವತಿಯಿಂದ ಪೊಲೀಸರ ಮುಂದೆ ಸ್ಫೋಟಕ ಹೇಳಿಕೆ!

ಮಂಗಳೂರಿನ ದೇರಳಕಟ್ಟೆಯ ಕಣಚೂರು ವೈದ್ಯಕೀಯ ಕಾಲೇಜು ಆವರಣದಿಂದ ಅಪಹರಣಕ್ಕೊಳಗಾಗಿದ್ದ ವೈದ್ಯಕೀಯ ವಿದ್ಯಾರ್ಥಿನಿಯನ್ನು ಪೊಲೀಸರು ಕೇರಳಂನ ಸಂಬಂಧಿಕರ ಮನೆಯಲ್ಲಿ ಪತ್ತೆ ಹಚ್ಚಿ ಸುರಕ್ಷಿತವಾಗಿ ರಕ್ಷಿಸಿದ್ದಾರೆ. ಆ ಕುರಿತ ವರದಿ ಇಲ್ಲಿದೆ:

ಮಂಗಳೂರು: ಮಂಗಳೂರಿನ ಖಾಸಗಿ ಮೆಡಿಕಲ್ ಕಾಲೇಜು ಆವರಣದಿಂದ ವೈದ್ಯಕೀಯ ವಿದ್ಯಾರ್ಥಿನಿಯನ್ನು ಥಾರ್ ವಾಹನದಲ್ಲಿ ಬಲವಂತವಾಗಿ ಕರೆದೊಯ್ದಿದ್ದ ಪ್ರಕರಣ ಇದೀಗ ತೀವ್ರ ತಿರುವು ಪಡೆದುಕೊಂಡಿದೆ. ಕೋಣಾಜೆ ಪೊಲೀಸರು ಕೇರಳಂನಲ್ಲಿ ವಿದ್ಯಾರ್ಥಿನಿಯನ್ನು ಪತ್ತೆಹಚ್ಚಿ ಹೇಳಿಕೆ ಪಡೆದಿದ್ದು, ಮನೆಯವರ ಜೊತೆ ಹೋಗಲು ತನಗೆ ಇಷ್ಟವಿಲ್ಲ ಎಂದು ಯುವತಿ ಸ್ಪಷ್ಟಪಡಿಸಿದ್ದಾಳೆ. ಆ ಕುರಿತ ವರದಿ ಇಲ್ಲಿದೆ:

ಏನಿದು ಪ್ರಕರಣ?

ಗುರುವಾರ (ನವೆಂಬರ್ 19) ಸಂಜೆ ಅಪಹರಣಕ್ಕೊಳಗಾಗಿದ್ದ ಯುವತಿ ದಕ್ಷಿಣ ಕನ್ನಡ ಜಿಲ್ಲೆಯ ಪುಂಜಾಲಕಟ್ಟೆ ಮೂಲದವರಾಗಿದ್ದು, ಮಂಗಳೂರಿನ ದೇರಳಕಟ್ಟೆಯ ಕಣಚೂರು ವೈದ್ಯಕೀಯ ಕಾಲೇಜಿನಲ್ಲಿ ಪ್ರಥಮ ವರ್ಷದ ಎಂಬಿಬಿಎಸ್ ವ್ಯಾಸಂಗ ಮಾಡುತ್ತಿದ್ದಾರೆ. ಈಕೆ ಮಂಗಳೂರಿನ ಮತ್ತೊಂದು ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ಓದುತ್ತಿರುವ ಅನ್ಯಕೋಮಿನ (ಹಿಂದೂ) ಯುವಕನನ್ನು ಪ್ರೀತಿಸುತ್ತಿದ್ದರು ಎನ್ನಲಾಗಿದೆ. ಈ ವಿಚಾರ ತಿಳಿದ ಯುವತಿಯ ಪೋಷಕರು ಮತ್ತು ಸಂಬಂಧಿಕರು ಕಾಲೇಜು ಆವರಣಕ್ಕೆ ಬಂದು, ಆಕೆಯ ಇಚ್ಛೆಗೆ ವಿರುದ್ಧವಾಗಿ ಬಲವಂತವಾಗಿ ಎಳೆದೊಯ್ದು ಮಹೀಂದ್ರಾ ಥಾರ್ ವಾಹನದಲ್ಲಿ ಕೂರಿಸಿಕೊಂಡು ಹೋಗಿದ್ದರು. ಈ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ತದನಂತರ ಕಾರ್ಯಾಚರಣೆ ನಡೆಸಿದ ಉಳ್ಳಾಲ ಪೊಲೀಸರು, ಕೇರಳಂನ ಸಂಬಂಧಿಕರ ಮನೆಯಲ್ಲಿ ಕೂಡಿಹಾಕಲಾಗಿದ್ದ ವಿದ್ಯಾರ್ಥಿನಿಯನ್ನು ಪತ್ತೆಹಚ್ಚಿ ಸುರಕ್ಷಿತವಾಗಿ ಮಂಗಳೂರಿಗೆ ಕರೆತಂದಿದ್ದಾರೆ.

ಅಪ್ಪ-ಅಮ್ಮನೊಂದಿಗೆ ಹೋಗೋಕೆ ಇಷ್ಟ ಇಲ್ಲ!

ಮುಂದುವರೆದು, ರಕ್ಷಣೆಯ ನಂತರ ಪೊಲೀಸರಿಗೆ ಹೇಳಿಕೆ ನೀಡಿರುವ ಯುವತಿ, "ನನಗೆ ಪೋಷಕರು ಅಥವಾ ಮನೆಯವರ ಜೊತೆ ಹೋಗಲು ಇಚ್ಛೆ ಇಲ್ಲ" ಎಂದು ಸ್ಪಷ್ಟಪಡಿಸಿದ್ದಾರೆ. ಮತ್ತೊಂದೆಡೆ, ಯುವತಿ ವಯಸ್ಕಳಾಗಿರುವುದರಿಂದ ತಾನು ಎಲ್ಲಿ ವಾಸಿಸಬೇಕು ಎಂದು ನಿರ್ಧರಿಸುವ ಸಂಪೂರ್ಣ ಕಾನೂನುಬದ್ಧ ಹಕ್ಕು ಆಕೆಗಿದೆ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ತಿಳಿಸಿದ್ದಾರೆ. ವೈದ್ಯಕೀಯ ತಪಾಸಣೆಯ ಬಳಿಕ ಆಕೆಯ ಇಚ್ಛೆಯ ಸ್ಥಳಕ್ಕೆ ಅಥವಾ ಸಾಂತ್ವನ ಕೇಂದ್ರಕ್ಕೆ ಪೊಲೀಸ್ ರಕ್ಷಣೆಯಲ್ಲಿ ಕಳುಹಿಸಲು ಕ್ರಮ ಕೈಗೊಳ್ಳಲಾಗಿದೆ.

ಏತನ್ಮಧ್ಯೆ, ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಭಾರತೀಯ ನ್ಯಾಯ ಸಂಹಿತೆ (BNS) ಸೆಕ್ಷನ್ 140(3) ಮತ್ತು 126ರ ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಠಾಣೆಗೆ ಕರೆತಂದು ವಿಚಾರಣೆ ನಡೆಸಲಾಗಿದ್ದು, 7 ವರ್ಷಕ್ಕಿಂತ ಕಡಿಮೆ ಶಿಕ್ಷೆಯಿರುವ ಅಪರಾಧವಾದ ಕಾರಣ ಬಿಎನ್‌ಎಸ್‌ಎಸ್ (BNSS) ಅಡಿಯಲ್ಲಿ ನೋಟಿಸ್ ಜಾರಿ ಮಾಡಲಾಗುತ್ತಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

1962ರ ಅವಮಾನಕ್ಕೆ ಕ್ಷಮೆ ಕೇಳುತ್ತಾ? 'ಬಡ ರಾಷ್ಟ್ರ'ವಾಗಿ ಕಾಂಗ್ರೆಸ್ ಏಕೆ ಇರಿಸಿತ್ತು; ಭಾರತವನ್ನು 'ಹಾವಾಡಿಗರ ದೇಶ' ಎಂದು ಏಕೆ ಕರೆಯಲಾಗುತ್ತಿತ್ತು?

ಪ್ರತ್ಯೇಕತಾವಾದಿ ಪನ್ನುನ್ ಹತ್ಯೆ ಸಂಚು ವಿಫಲ: ಭಾರತೀಯ ಮೂಲದ ನಿಖಿಲ್ ಗುಪ್ತಾಗೆ 19 ವರ್ಷ ಜೈಲು ಶಿಕ್ಷೆ

20 ವರ್ಷಗಳ ಹಿಂದೆಯೇ 'ಜಗತ್ತಿನ ಅತ್ಯಂತ ಸುಂದರ ಮಹಿಳೆ' ಸೋನಿಯಾ ಗಾಂಧಿ ಪಾತ್ರ ನಿರ್ವಹಿಸಬೇಕಿತ್ತು: ತೆರೆಕಾಣದ ಬಯೋಪಿಕ್, ಯಾರೀ ಸ್ನಿಗ್ಧ ಸುಂದರಿ?

ಶಾಸಕರ ಪಾರ್ಥೀವ ಶರೀರಕ್ಕೆ ಹೆಗಲು ಕೊಟ್ಟ ತಮಿಳುನಾಡು CM: ವಿ.ಎಸ್ ಬಾಬು ಶವಯಾತ್ರೆಯಲ್ಲಿ ಬರಿಗಾಲಿನಲ್ಲಿ ನಡೆದ ವಿಜಯ್!

ನಮ್ಮದೇ ಪಕ್ಷದ ಕೆಲವರಿಗೆ ಹುಚ್ಚು ನಾಯಿ ಕಚ್ಚಿದೆ: ಕಾಂಗ್ರೆಸ್ ಕಾರ್ಯಕರ್ತರು ಅವರನ್ನು ಮೆಂಟಲ್ ಆಸ್ಪತ್ರೆಗೆ ಸೇರಿಸ್ತಾರೆ; ಸಿಎಂ ರೇವಂತ್ ರೆಡ್ಡಿ ಆಕ್ರೋಶ