ಬಿ ವೈ ವಿಜಯೇಂದ್ರ  
ರಾಜ್ಯ

'ದುಂದುವೆಚ್ಚ ಮಾಡುವ ಸರ್ಕಾರಕ್ಕೆ ಆಶಾ ಕಾರ್ಯಕರ್ತೆಯರಿಗೆ ವರ್ಷಕ್ಕೆ 350 ಕೋಟಿ ರೂ. ಹೊರೆಯಾಗುತ್ತಿದೆ': ವಿಜಯೇಂದ್ರ ವಾಗ್ದಾಳಿ; Video

ರಾಜ್ಯದಲ್ಲಿ ಆರ್ಥಿಕ ಬಿಕ್ಕಟ್ಟು ಮತ್ತು ತೀವ್ರ ಬರ ಪರಿಸ್ಥಿತಿ ಎದುರಾಗಿದ್ದರೂ, ಮುಖ್ಯಮಂತ್ರಿ ಸ್ಥಾನ ಉಳಿಸಿಕೊಳ್ಳಲು ಹಾಗೂ ಪಕ್ಷದ ಕಾರ್ಯಕರ್ತರಿಗೆ ಅನುಕೂಲ ಮಾಡಿಕೊಡಲು ಕಾಂಗ್ರೆಸ್ ಸರ್ಕಾರ ದುಂದುವೆಚ್ಚದ ಘೋಷಣೆಗಳನ್ನು ಮಾಡುತ್ತಿದೆ ಮತ್ತು ಸಾರ್ವಜನಿಕರ ಹಣವನ್ನು ಖರ್ಚು ಮಾಡುತ್ತಿದೆ ಎಂದು ದೂರಿದರು.

ಆಶಾ ಕಾರ್ಯಕರ್ತೆಯರಿಗೆ ವಾರ್ಷಿಕ 350 ಕೋಟಿ ರೂ. ಅನುದಾನ ನೀಡಲು ಆರ್ಥಿಕ ಸಂಕಷ್ಟದ ನೆಪ ಹೇಳುತ್ತಿರುವ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರ, ರಾಜಕೀಯ ನೇಮಕಾತಿ ಮತ್ತು ಸಮಿತಿಗಳಿಗಾಗಿ ತೆರಿಗೆದಾರರ ಹಣವನ್ನು ದುರುಪಯೋಗಪಡಿಸಿಕೊಳ್ಳುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಆರೋಪಿಸಿದ್ದಾರೆ.

ರಾಜ್ಯದಲ್ಲಿ ಆರ್ಥಿಕ ಬಿಕ್ಕಟ್ಟು ಮತ್ತು ತೀವ್ರ ಬರ ಪರಿಸ್ಥಿತಿ ಎದುರಾಗಿದ್ದರೂ, ಮುಖ್ಯಮಂತ್ರಿ ಸ್ಥಾನ ಉಳಿಸಿಕೊಳ್ಳಲು ಹಾಗೂ ಪಕ್ಷದ ಕಾರ್ಯಕರ್ತರಿಗೆ ಅನುಕೂಲ ಮಾಡಿಕೊಡಲು ಕಾಂಗ್ರೆಸ್ ಸರ್ಕಾರ ದುಂದುವೆಚ್ಚದ ಘೋಷಣೆಗಳನ್ನು ಮಾಡುತ್ತಿದೆ ಮತ್ತು ಸಾರ್ವಜನಿಕರ ಹಣವನ್ನು ಖರ್ಚು ಮಾಡುತ್ತಿದೆ ಎಂದು ಅವರು ದೂರಿದರು.

ಆಶಾ ಕಾರ್ಯಕರ್ತೆಯರಿಗೆ ವಾರ್ಷಿಕ 350 ಕೋಟಿ ರೂ. ಮೀಸಲಿಡುವುದು ನಿಮಗೆ ಅಷ್ಟೊಂದು ಹೊರೆಯಾಗುತ್ತದೆಯೇ ಎಂದು ವಿಜಯೇಂದ್ರ ಶಿವಮೊಗ್ಗದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡುತ್ತಾ ಪ್ರಶ್ನಿಸಿದರು.

ಎಲ್ಲ ವಿಧಾನಸಭಾ ಕ್ಷೇತ್ರಗಳಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಗಳಿಗೆ ಸಚಿವ ಸಂಪುಟ ದರ್ಜೆಯ ಸ್ಥಾನಮಾನ ನೀಡಿ ಅಧ್ಯಕ್ಷರನ್ನು ನೇಮಕ ಮಾಡಿರುವುದನ್ನು ಅವರು ಟೀಕಿಸಿದರು. ಅಲ್ಲದೆ, ಭಾರತ್ ಜೋಡೋ ಅನುಷ್ಠಾನ ಸಮಿತಿಗಾಗಿ 35 ಕೋಟಿ ರೂ. ಮೀಸಲಿಟ್ಟಿರುವುದನ್ನೂ ಪ್ರಶ್ನಿಸಿದರು.

ಕಾಂಗ್ರೆಸ್ ಕಾರ್ಯಕರ್ತರಿಗೆ ಅನುಕೂಲ ಮಾಡಿಕೊಡಲು ಈ ಸಮಿತಿಗಳು ಮತ್ತು ನೇಮಕಾತಿಗಳನ್ನು ಬಳಸಿಕೊಳ್ಳಲಾಗುತ್ತಿದೆ. ಆದರೆ, ಶಾಸಕರ ಕ್ಷೇತ್ರಗಳಿಗೆ ಅಭಿವೃದ್ಧಿ ಅನುದಾನ ಬಿಡುಗಡೆ ಮಾಡಲು ಮತ್ತು ಬರಪೀಡಿತ ರೈತರಿಗೆ ಸಮರ್ಪಕ ಪರಿಹಾರ ಒದಗಿಸಲು ಸರ್ಕಾರ ವಿಫಲವಾಗಿದೆ ಎಂದು ಆರೋಪಿಸಿದರು.

ಸರ್ಕಾರದ ಆರ್ಥಿಕ ಆದ್ಯತೆಗಳನ್ನು ಪ್ರಶ್ನಿಸಿದ ವಿಜಯೇಂದ್ರ, ದಕ್ಷಿಣ ಕನ್ನಡ ಜಿಲ್ಲೆಗೆ 32,000 ಕೋಟಿ ರೂ. ಪ್ಯಾಕೇಜ್, ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಚುನಾವಣೆಗೂ ಮುನ್ನ ಬೆಂಗಳೂರಿಗೆ ಸಾವಿರಾರು ಕೋಟಿ ರೂ. ಮೊತ್ತದ ಯೋಜನೆಗಳು ಹಾಗೂ ರಸ್ತೆ ಅಭಿವೃದ್ಧಿಗೆ 16,000 ಕೋಟಿ ರೂ. ಘೋಷಿಸಿರುವುದನ್ನು ಉಲ್ಲೇಖಿಸಿದರು.

ಹಣ ಎಲ್ಲಿದೆ ಮುಖ್ಯಮಂತ್ರಿಗಳೇ? ಅದನ್ನು ಎಲ್ಲಿಂದ ತರುತ್ತೀರಿ? ಆಶಾ ಕಾರ್ಯಕರ್ತೆಯರಿಗೆ 350 ಕೋಟಿ ರೂ. ನೀಡಲು ತಮ್ಮ ಸರ್ಕಾರಕ್ಕೆ ಆರ್ಥಿಕ ಸಾಮರ್ಥ್ಯವಿಲ್ಲ ಎನ್ನುತ್ತೀರಿ. ಹಾಗಾದರೆ 16,000 ಕೋಟಿ ರೂ. ಹಣವನ್ನು ಎಲ್ಲಿಂದ ಸಂಗ್ರಹಿಸುತ್ತೀರಿ ಎಂದು ಪ್ರಶ್ನಿಸಿದರು.

ರಾಜ್ಯ ತೀವ್ರ ಬರ ಮತ್ತು ಆರ್ಥಿಕ ಸಂಕಷ್ಟ ಎದುರಿಸುತ್ತಿರುವ ಸಂದರ್ಭದಲ್ಲಿ ಮುಖ್ಯಮಂತ್ರಿ ಅಧಿಕೃತ ನಿವಾಸದ ನವೀಕರಣಕ್ಕೆ ಸುಮಾರು 100 ಕೋಟಿ ರೂ. ಖರ್ಚು ಮಾಡಿರುವ ವರದಿಗಳನ್ನೂ ಅವರು ಟೀಕಿಸಿದರು.

ಬೆಂಗಳೂರಿನಲ್ಲಿ ಆಶಾ ಕಾರ್ಯಕರ್ತೆಯರು ನಡೆಸುತ್ತಿರುವ ಪ್ರತಿಭಟನೆಯನ್ನು ಉಲ್ಲೇಖಿಸಿದ ವಿಜಯೇಂದ್ರ, ಅವರನ್ನು ಭೇಟಿಯಾದಾಗ ರಾಜ್ಯದ ಆರ್ಥಿಕ ಪರಿಸ್ಥಿತಿ ಉತ್ತಮವಾಗಿಲ್ಲ ಎಂದು ಮುಖ್ಯಮಂತ್ರಿ ಹೇಳಿದ್ದರು. ಆದರೆ, ಬಳಿಕ ಹಿರಿಯೂರಿಗೆ ಭೇಟಿ ನೀಡಿದ ಸಂದರ್ಭದಲ್ಲಿ ತಮ್ಮನ್ನು ಆಶಾ ಕಾರ್ಯಕರ್ತೆಯರ ಸಹೋದರ ಎಂದು ಬಣ್ಣಿಸಿಕೊಂಡಿದ್ದಾರೆ ಎಂದು ಟೀಕಿಸಿದರು.

ಹಿರಿಯೂರು ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಬಿಜೆಪಿ ಮತ್ತು ಜೆಡಿಎಸ್ ಪರಸ್ಪರ ಒಮ್ಮತದ ಮೂಲಕ ಜಂಟಿ ಅಭ್ಯರ್ಥಿಯನ್ನು ಕಣಕ್ಕಿಳಿಸಿ ಎನ್‌ಡಿಎ ಗೆಲುವಿಗೆ ಶ್ರಮಿಸಲಿವೆ ಎಂದು ವಿಜಯೇಂದ್ರ ತಿಳಿಸಿದರು.

“ಕೇಂದ್ರ ಸಚಿವ ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ ಮತ್ತು ನಮ್ಮ ಪಕ್ಷದ ಹಿರಿಯ ನಾಯಕರೊಂದಿಗೆ ಮಾತನಾಡಿದ್ದೇನೆ. ಎರಡೂ ಪಕ್ಷಗಳು ಪರಸ್ಪರ ಒಮ್ಮತದ ಮೂಲಕ ಒಬ್ಬ ಅಭ್ಯರ್ಥಿಯನ್ನು ಜಂಟಿಯಾಗಿ ಕಣಕ್ಕಿಳಿಸಲಿವೆ” ಎಂದು ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಹಿರಂಗವಾಗಿ ರಾಜಿನಾಮೆ ಪತ್ರ ಪ್ರದರ್ಶಿಸಿ ಸರ್ಕಾರದ ವಿರುದ್ಧ ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮ ಆಕ್ರೋಶ!

ನಿಶ್ಚಿತಾರ್ಥ ಮಾಡಿಕೊಂಡ Biggboss ಜೋಡಿ: ಉಂಗುರ ಬದಲಿಸಿಕೊಂಡ ಶಿಶಿರ್-ಐಶ್ವರ್ಯಾ!

ಸೋಲಿನ ಹತಾಶೆ; ನೀವು ನನಗೆ ಮತ ಕೊಟ್ಟಿಲ್ಲ, ನಾನು ನಿಮಗೆ ಲೈಟ್ ಕೊಡಲ್ಲ; ಬೀದಿದೀಪ ತೆರವುಗೊಳಿಸಿದ BJP ಅಭ್ಯರ್ಥಿ| video

ಟೆಸ್ಟ್ ಕ್ರಿಕೆಟ್‌ನಲ್ಲಿ ಭಾರತ ವಿಶ್ವದಾಖಲೆ.. ಈ ಸಾಧನೆ ಮಾಡಿದ ಜಗತ್ತಿನ ಮೊದಲ ತಂಡ!

ಇಸ್ರೇಲ್: ಅರಬ್ ಪಕ್ಷಗಳನ್ನು ಹೊರಗಿಟ್ಟು ನೆತನ್ಯಾಹು ಜೊತೆಗೆ ರಾಷ್ಟ್ರೀಯ ಒಕ್ಕೂಟ ಸರ್ಕಾರ ರಚನೆಗೆ ಐಸೆನ್‌ಕೋಟ್ ಮುಂದು; ಮಾತುಕತೆಗೆ ಆಹ್ವಾನ!