ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ರಾಜ್ಯ

ರೇಣುಕಾಸ್ವಾಮಿ ಕೊಲೆ ಪ್ರಕರಣ: ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಲು ದರ್ಶನ್‌ ಮನವಿ; ವಿಚಾರಣೆ ಮುಂದೂಡಿಕೆ

ಕೋರ್ಟ್ ಈಗಾಗಲೇ ಜೈಲಿನಲ್ಲಿಯೇ ಅಗತ್ಯ ಚಿಕಿತ್ಸೆ ಪಡೆಯಲು ಅನುಮತಿ ನೀಡಿದೆ. ಆದರೆ ಜೈಲಿನ ಆಸ್ಪತ್ರೆಯಲ್ಲಿ ಸೂಕ್ತ ಚಿಕಿತ್ಸೆ ದೊರೆಯುತ್ತಿಲ್ಲ ಎಂದು ಆರೋಪಿಸಿರುವ ದರ್ಶನ್, ವಿಶೇಷ ಸೌಲಭ್ಯವಿರುವ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಲು ಅವಕಾಶ ನೀಡುವಂತೆ ಮನವಿ ಮಾಡಿದ್ದಾರೆ.

ನಟ ದರ್ಶನ್‌ಗೆ ಮತ್ತೆ ಬೆನ್ನುನೋವು
Lingaraj Badiger
Updated On : 23 Nov 2026, 3:47 pm

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ನಟ ದರ್ಶನ್ ಅವರು ಬೆನ್ನು ನೋವಿನಿಂದ ಬಳಲುತ್ತಿದ್ದು, ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಲು ಅನುಮತಿ ಕೋರಿ ನ್ಯಾಯಾಲಯಕ್ಕೆ ಹೊಸದಾಗಿ ಅರ್ಜಿ ಸಲ್ಲಿಸಿದ್ದಾರೆ.

ಕೋರ್ಟ್ ಈಗಾಗಲೇ ಜೈಲಿನಲ್ಲಿಯೇ ಅಗತ್ಯ ಚಿಕಿತ್ಸೆ ಪಡೆಯಲು ಅನುಮತಿ ನೀಡಿದೆ. ಆದರೆ ಜೈಲಿನ ಆಸ್ಪತ್ರೆಯಲ್ಲಿ ಸೂಕ್ತ ಚಿಕಿತ್ಸೆ ದೊರೆಯುತ್ತಿಲ್ಲ ಎಂದು ಆರೋಪಿಸಿರುವ ದರ್ಶನ್, ವಿಶೇಷ ಸೌಲಭ್ಯವಿರುವ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಲು ಅವಕಾಶ ನೀಡುವಂತೆ ಮನವಿ ಮಾಡಿದ್ದಾರೆ.

ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಲು ಅನುಮತಿ ಕೋರಿ ದರ್ಶನ್ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನ ನ್ಯಾಯಾಲಯ ಬುಧವಾರಕ್ಕೆ ಮುಂದೂಡಿದೆ. ಎಸ್‌ಪಿಪಿ ಆಕ್ಷೇಪಣೆ ಸಲ್ಲಿಸಿದ ಬಳಿಕ ಅರ್ಜಿಯ ಕುರಿತು ಮುಂದಿನ ವಿಚಾರಣೆ ನಡೆಯಲಿದೆ.

Advertisement

Advertisement

Also Read

ರೇಣುಕಾಸ್ವಾಮಿ ಕೊಲೆ ಪ್ರಕರಣ: ದರ್ಶನ್ ಬೇಡಿಕೆಗೆ ಕೋರ್ಟ್ ಅಸ್ತು; ಆದರೆ ಷರತ್ತುಗಳು ಅನ್ವಯ!

ಜೈಲಿನಲ್ಲಿ ಈವರೆಗೆ ಕೇವಲ ಮೂರು ಬಾರಿ ಮಾತ್ರ ಫಿಸಿಯೋಥೆರಪಿ ಚಿಕಿತ್ಸೆ ನೀಡಲಾಗಿದೆ. ಇದರಿಂದ ತಮ್ಮ ನೋವು ಕಡಿಮೆಯಾಗಿಲ್ಲ. ಹೀಗಾಗಿ ಹೆಚ್ಚಿನ ಚಿಕಿತ್ಸೆಗಾಗಿ ಹೊರಗಿನ ಖಾಸಗಿ ಆಸ್ಪತ್ರೆಗೆ ತಮ್ಮನ್ನು ಸ್ಥಳಾಂತರಿಸಲು ಅನುಮತಿ ನೀಡಬೇಕು ಎಂದು ದರ್ಶನ್ ಪರ ವಕೀಲರು ನ್ಯಾಯಾಲಯಕ್ಕೆ ಮನವಿ ಮಾಡಿದ್ದಾರೆ.

ವಿಶೇಷ ಸೌಲಭ್ಯಗಳಿರುವ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಲು ಅವಕಾಶ ನೀಡುವಂತೆ ದರ್ಶನ್ ಪರ ವಕೀಲ ಹಷ್ಮತ್ ಪಾಷಾ ಅರ್ಜಿ ಸಲ್ಲಿಸಿದ್ದಾರೆ. ಅಲ್ಲದೆ, ಆರೋಗ್ಯದ ವಿಚಾರವಾಗಿರುವುದರಿಂದ ಅರ್ಜಿಯನ್ನ ತುರ್ತಾಗಿ ವಿಚಾರಣೆ ನಡೆಸುವಂತೆ ನ್ಯಾಯಾಲಯವನ್ನು ಕೋರಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement