ರಕ್ಷಣಾ ಸಚಿವ ರಾಜನಾಥ್ ಸಿಂಗ್ online desk
ರಾಜ್ಯ

ಮತಪಟ್ಟಿ ಪರಿಷ್ಕರಣೆ ವಿವಾದಕ್ಕೆ ತಿರುಗೇಟು; ಕಲಬುರಗಿಯಲ್ಲಿ BJP ಪಾದಯಾತ್ರೆ: ರಕ್ಷಣಾ ಸಚಿವ ರಾಜನಾಥ್ ಸಿಂಗ್ ಭಾಗಿ..!

ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಬುಧವಾರ ಕಲಬುರಗಿಯಲ್ಲಿ ಬಿಜೆಪಿ ಹಮ್ಮಿಕೊಂಡಿರುವ ‘ಪ್ರಜಾಪ್ರಭುತ್ವ ಉಳಿಸಿ, ಅರಾಜಕತೆ ನಿರ್ಮೂಲನೆ ಮಾಡಿ’ ಎಂಬ ಘೋಷವಾಕ್ಯದ ಪಾದಯಾತ್ರೆಯಲ್ಲಿ ಭಾಗವಹಿಸಲಿದ್ದಾರೆ.

ಕಲಬುರಗಿ: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ವಿಚಾರವಾಗಿ ಪ್ರತಿಪಕ್ಷಗಳು ಮಾಡುತ್ತಿರುವ ಆರೋಪಗಳಿಗೆ ರಾಜಕೀಯವಾಗಿ ತಿರುಗೇಟು ನೀಡಲು ಬಿಜೆಪಿ ಸಜ್ಜಾಗಿದೆ.

ಇದರ ಭಾಗವಾಗಿ ಬುಧವಾರ ಕಲಬುರಗಿಯಲ್ಲಿ ‘ಪ್ರಜಾಪ್ರಭುತ್ವ ಉಳಿಸಿ, ಅರಾಜಕತೆ ನಿರ್ಮೂಲನೆ ಮಾಡಿ’ ಅಭಿಯಾನ ಆಯೋಜಿಸಲಾಗಿದ್ದು, ಪಾದಯಾತ್ರೆಯಲ್ಲಿ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಭಾಗವಹಿಸಲಿದ್ದಾರೆ ಎಂದು ಮಾಜಿ ವಿಧಾನ ಪರಿಷತ್ ಸದಸ್ಯ ಅರುಣ್ ಶಹಾಪುರ ತಿಳಿಸಿದ್ದಾರೆ.

ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಬುಧವಾರ ಕಲಬುರಗಿಯಲ್ಲಿ ಬಿಜೆಪಿ ಹಮ್ಮಿಕೊಂಡಿರುವ ‘ಪ್ರಜಾಪ್ರಭುತ್ವ ಉಳಿಸಿ, ಅರಾಜಕತೆ ನಿರ್ಮೂಲನೆ ಮಾಡಿ’ ಎಂಬ ಘೋಷವಾಕ್ಯದ ಪಾದಯಾತ್ರೆಯಲ್ಲಿ ಭಾಗವಹಿಸಲಿದ್ದಾರೆ ಎಂದು ಮಾಜಿ ವಿಧಾನ ಪರಿಷತ್ ಸದಸ್ಯ ಅರುಣ್ ಶಹಾಪುರ ಭಾನುವಾರ ತಿಳಿಸಿದ್ದಾರೆ.

ಕಲಬುರಗಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ವಿಚಾರವಾಗಿ ಕಾಂಗ್ರೆಸ್ ಹಾಗೂ ಅದರ ಮಿತ್ರಪಕ್ಷಗಳು ಮಾಡುತ್ತಿರುವ ಆರೋಪಗಳಿಗೆ ಪ್ರತಿಯಾಗಿ ಬಿಜೆಪಿ ಈ ಪಾದಯಾತ್ರೆ ಆಯೋಜಿಸುತ್ತಿದೆ ಎಂದು ಹೇಳಿದರು.

‘ಪ್ರಜಾಪ್ರಭುತ್ವ ಉಳಿಸಿ, ಅರಾಜಕತೆ ನಿರ್ಮೂಲನೆ ಮಾಡಿ’ ಎಂಬ ಅಭಿಯಾನದಡಿ ದೇಶಾದ್ಯಂತ 25 ಸ್ಥಳಗಳಲ್ಲಿ ಪಾದಯಾತ್ರೆಗಳನ್ನು ನಡೆಸಲು ಬಿಜೆಪಿ ನಿರ್ಧರಿಸಿದೆ. ಇದರ ಭಾಗವಾಗಿ ಬುಧವಾರ ಕಲಬುರಗಿಯಲ್ಲಿ ಪಾದಯಾತ್ರೆ ಹಾಗೂ ಸಾರ್ವಜನಿಕ ಸಭೆ ಆಯೋಜಿಸಲಾಗಿದೆ ಎಂದು ತಿಳಿಸಿದರು.

ಮಧ್ಯಾಹ್ನ 3 ಗಂಟೆಗೆ ನಗರದ ಗಂಜ್ ಪ್ರದೇಶದಲ್ಲಿರುವ ನಗರೇಶ್ವರ ಶಾಲೆಯಿಂದ ಪಾದಯಾತ್ರೆ ಆರಂಭವಾಗಿ ಜಗತ್ ವೃತ್ತದವರೆಗೆ ಸಾಗಲಿದೆ. ಈ ಮೆರವಣಿಗೆಯಲ್ಲಿ ಸುಮಾರು 15 ಸಾವಿರ ಪಕ್ಷದ ಕಾರ್ಯಕರ್ತರು ಭಾಗವಹಿಸುವ ನಿರೀಕ್ಷೆಯಿದೆ.

ಪಾದಯಾತ್ರೆ ಮುಕ್ತಾಯಗೊಂಡ ಬಳಿಕ ಜಗತ್ ವೃತ್ತದಲ್ಲಿ ಬೃಹತ್ ಸಾರ್ವಜನಿಕ ಸಭೆ ನಡೆಯಲಿದೆ. ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಸೇರಿದಂತೆ ರಾಜ್ಯಮಟ್ಟದ ನಾಯಕರು ಹಾಗೂ ವಿಭಾಗ ಮತ್ತು ಜಿಲ್ಲಾ ಮಟ್ಟದ ಮುಖಂಡರು ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದರು.

ಇದಲ್ಲದೆ, ರಾಜ್ಯದ ಪ್ರತಿಯೊಂದು ಜಿಲ್ಲಾ ಕೇಂದ್ರದಲ್ಲೂ ಬಿಜೆಪಿ ವತಿಯಿಂದ ಪಾದಯಾತ್ರೆಗಳನ್ನು ಆಯೋಜಿಸಲಾಗುವುದು ಎಂದು ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸಿಂಧೂ ಜಲ ಒಪ್ಪಂದದ ಬಗ್ಗೆ ಮಾತುಕತೆಗೆ ಭಾರತ ಆಹ್ವಾನಿಸಲಿ: ಪಾಕಿಸ್ತಾನ ಸಚಿವ ಮುಸಾದಿಕ್ ಮಲಿಕ್

Haryana: ಸೇನಾ ತರಬೇತಿ ವೇಳೆ ಭೀಕರ ದುರಂತ: ಟ್ಯಾಂಕ್ ಹರಿದು ಇಬ್ಬರು ಯೋಧರು ಸಾವು

Bisleri ನೀರು ಕೂಡ ಅಸುರಕ್ಷಿತ; ಅಪಾಯಕಾರಿ ರಾಸಾಯನಿಕಗಳಿದ್ದು ಕ್ಯಾನ್ಸರ್ ಕಾರಕ; ಕಾನೂನು ಕ್ರಮಕ್ಕೆ FSSAI ಅನುಮತಿ!

'ರಾಮಾಯಣ' ಸಂಗೀತಕ್ಕಾಗಿ 3 ವರ್ಷ ಮೀಸಲು; 10-12 ಸಿನಿಮಾಗಳ ಆಫರ್ ತಿರಸ್ಕರಿಸಿದ್ದೆ: ಎ.ಆರ್. ರೆಹಮಾನ್

ತಮಿಳುನಾಡಿನಲ್ಲಿ ಭೀಕರ ರಸ್ತೆ ಅಪಘಾತ: ಮರಕ್ಕೆ ಕಾರು ಡಿಕ್ಕಿ; 8 ಮಂದಿ ಸಾವು; ಸಿಎಂ ವಿಜಯ್ ಸಂತಾಪ!