ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ರಾಜ್ಯ

ಸೌಜನ್ಯ ಪ್ರಕರಣ ಮರುತನಿಖೆ ಚುರುಕು; ದಾಖಲೆಗಳೊಂದಿಗೆ SIT ಮುಂದೆ ಹಾಜರಾದ ಗಿರೀಶ್ ಮಟ್ಟಣ್ಣನವರ್..!

ಹಲವು ವರ್ಷಗಳಿಂದ ಸೌಜನ್ಯ ಪರವಾಗಿ ಹೋರಾಟ ನಡೆಸುತ್ತಿರುವ ಅವರು, ಪ್ರಕರಣಕ್ಕೆ ಸಂಬಂಧಿಸಿದಂತೆ ತಮ್ಮಲ್ಲಿರುವ ಮಾಹಿತಿ ಮತ್ತು ದಾಖಲೆಗಳನ್ನು ಅಧಿಕಾರಿಗಳಿಗೆ ಒದಗಿಸುವ ಸಾಧ್ಯತೆಯಿದೆ.

ಗಿರೀಶ್ ಮಟ್ಟಣ್ಣನವರ್ — online desk
Manjula VN
Updated On : 23 Nov 2026, 1:05 pm

ಮಂಗಳೂರು: ಧರ್ಮಸ್ಥಳದ ಸೌಜನ್ಯ ಪ್ರಕರಣದ ಮರುತನಿಖೆಯನ್ನು ವಿಶೇಷ ತನಿಖಾ ತಂಡ (ಎಸ್‌ಐಟಿ) ಚುರುಕುಗೊಳಿಸಿದೆ.

ಈ ಹಿನ್ನೆಲೆಯಲ್ಲಿ ಸೌಜನ್ಯ ಪರ ಹೋರಾಟಗಾರ ಗಿರೀಶ್ ಮಟ್ಟಣ್ಣನವರ್ ಅವರು ಮಂಗಳೂರಿನಲ್ಲಿರುವ ಎಸ್‌ಐಟಿ ಕಚೇರಿಗೆ ದಾಖಲೆಗಳ ಬ್ಯಾಗ್‌ ಸಮೇತ ಆಗಮಿಸಿದ್ದಾರೆ.

ಸೌಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ತಮ್ಮ ಬಳಿ ಇರುವ ದಾಖಲೆಗಳು ಮತ್ತು ಸಾಕ್ಷ್ಯಾಧಾರಗಳನ್ನು ತನಿಖಾಧಿಕಾರಿಗಳಿಗೆ ಸಲ್ಲಿಸುವಂತೆ ಸೂಚಿಸಲಾಗಿತ್ತು.

Advertisement

Advertisement

ಅದರಂತೆ ಗಿರೀಶ್ ಮಟ್ಟಣ್ಣನವರ್ ಹಲವು ಕಡತಗಳು ಹಾಗೂ ಪತ್ರಿಕಾ ವರದಿಗಳನ್ನು ಸಂಗ್ರಹಿಸಿಕೊಂಡು ಎಸ್‌ಐಟಿ ಕಚೇರಿಗೆ ಬಂದಿದ್ದಾರೆ.

ಹಲವು ವರ್ಷಗಳಿಂದ ಸೌಜನ್ಯ ಪರವಾಗಿ ಹೋರಾಟ ನಡೆಸುತ್ತಿರುವ ಅವರು, ಪ್ರಕರಣಕ್ಕೆ ಸಂಬಂಧಿಸಿದಂತೆ ತಮ್ಮಲ್ಲಿರುವ ಮಾಹಿತಿ ಮತ್ತು ದಾಖಲೆಗಳನ್ನು ಅಧಿಕಾರಿಗಳಿಗೆ ಒದಗಿಸುವ ಸಾಧ್ಯತೆಯಿದೆ.

ಇದೇ ವೇಳೆ, ಪ್ರಕರಣಕ್ಕೆ ಸಂಬಂಧಿಸಿದಂತೆ ಮಹೇಶ್ ಶೆಟ್ಟಿ ತಿಮರೋಡಿ ಅವರಿಗೂ ಎಸ್‌ಐಟಿ ವಿಚಾರಣೆಗೆ ಹಾಜರಾಗುವಂತೆ ಬುಲಾವ್ ನೀಡಿದೆ ಎಂದು ತಿಳಿದುಬಂದಿದೆ.

Also Read

ಸೌಜನ್ಯಾ ಅತ್ಯಾಚಾರ-ಕೊಲೆ ಪ್ರಕರಣ: SIT ನೂತನ ಮುಖ್ಯಸ್ಥರಾಗಿ ಚೇತನ್ ಸಿಂಗ್ ರಾಥೋಡ್ ನೇಮಕ..!

ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಬಹುಚರ್ಚಿತ ಬುರುಡೆ ಪ್ರಕರಣದ ತನಿಖೆಯನ್ನು ರದ್ದುಗೊಳಿಸುವಂತೆ ಕೋರಿ ಗಿರೀಶ್ ಮಟ್ಟಣ್ಣನವರ್ ಸಲ್ಲಿಸಿದ್ದ ರಿಟ್ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ಇತ್ತೀಚೆಗೆ ವಜಾಗೊಳಿಸಿತ್ತು. ಕ್ರೈಂ ನಂಬರ್ 39/2026ರ ಪ್ರಕರಣದ ತನಿಖೆಗೆ ತಡೆ ನೀಡುವಂತೆ ಅವರು ನ್ಯಾಯಾಲಯದ ಮೊರೆ ಹೋಗಿದ್ದರು.

ಧರ್ಮಸ್ಥಳ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸಾವಿರಾರು ಶವಗಳನ್ನು ಹೂಳಲಾಗಿದೆ ಎಂದು ಮುಸುಕುಧಾರಿ ವ್ಯಕ್ತಿಯೊಬ್ಬರು ನೀಡಿದ್ದ ಹೇಳಿಕೆಯ ಆಧಾರದ ಮೇಲೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಅಪರಿಚಿತ ವ್ಯಕ್ತಿಗಳ ವಿರುದ್ಧ ಪ್ರಕರಣ ದಾಖಲಾಗಿತ್ತು.

ಈ ಆರೋಪ ರಾಜ್ಯಾದ್ಯಂತ ಭಾರಿ ಚರ್ಚೆಗೆ ಕಾರಣವಾಗಿತ್ತು. ಪ್ರಕರಣದ ಗಂಭೀರತೆಯನ್ನು ಪರಿಗಣಿಸಿದ ರಾಜ್ಯ ಸರ್ಕಾರ ಸಮಗ್ರ ತನಿಖೆಗಾಗಿ ವಿಶೇಷ ತನಿಖಾ ತಂಡವನ್ನು ರಚಿಸಿತ್ತು.

ತನಿಖೆ ಕೈಗೆತ್ತಿಕೊಂಡ ಎಸ್‌ಐಟಿ ಅಧಿಕಾರಿಗಳು ಮುಸುಕುಧಾರಿ ವ್ಯಕ್ತಿಯ ಹೇಳಿಕೆಗಳು, ಪತ್ತೆಯಾಗಿದ್ದ ತಲೆಬುರುಡೆ ಹಾಗೂ ಇತರ ಸಾಕ್ಷ್ಯಗಳ ಮೂಲ ಮತ್ತು ಘಟನೆಗಳ ಹಿನ್ನೆಲೆಯನ್ನು ಪರಿಶೀಲಿಸಿದ್ದರು. ಈ ವೇಳೆ ಮೂಲ ದೂರುದಾರ ಚಿನ್ನಯ್ಯ ನೀಡಿದ್ದ ಹೇಳಿಕೆಗಳಲ್ಲಿ ಮಹತ್ವದ ಬದಲಾವಣೆಗಳು ಕಂಡುಬಂದಿದ್ದವು ಎಂದು ವರದಿಯಾಗಿದೆ.

ಧರ್ಮಸ್ಥಳದಲ್ಲಿ ಸಾವಿರಾರು ಶವಗಳನ್ನು ಹೂಳಲಾಗಿದೆ ಎಂಬ ಆರೋಪದ ಹಿಂದೆ ವ್ಯವಸ್ಥಿತ ಷಡ್ಯಂತ್ರ ನಡೆದಿರುವುದು ತನಿಖೆಯಲ್ಲಿ ಬೆಳಕಿಗೆ ಬಂದಿದೆ ಎಂದು ಎಸ್‌ಐಟಿ ನ್ಯಾಯಾಲಯಕ್ಕೆ ಸಲ್ಲಿಸಿದ ವರದಿಯಲ್ಲಿ ಉಲ್ಲೇಖಿಸಿತ್ತು.

ಈ ಸಂಬಂಧ ಚಿನ್ನಯ್ಯ ಅಲಿಯಾಸ್ ಚಿನ್ನ, ಮಹೇಶ್ ಶೆಟ್ಟಿ ತಿಮರೋಡಿ, ಗಿರೀಶ್ ಮಟ್ಟಣ್ಣ, ಜಯಂತ್ ಟಿ., ವಿಠಲ ಗೌಡ ಮತ್ತು ಸುಜಾತಾ ಭಟ್ ಸೇರಿದಂತೆ ಆರು ಮಂದಿಯ ವಿರುದ್ಧ ಸುಳ್ಳು ಸಾಕ್ಷ್ಯ ಸೃಷ್ಟಿ, ನಕಲಿ ದಾಖಲೆಗಳ ತಯಾರಿಕೆ ಸೇರಿದಂತೆ ವಿವಿಧ ಅಪರಾಧಗಳಿಗೆ ಸಂಬಂಧಿಸಿದ ಗಂಭೀರ ಆರೋಪಗಳನ್ನು ವರದಿಯಲ್ಲಿ ಪ್ರಸ್ತಾಪಿಸಲಾಗಿತ್ತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments