ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ರಾಜ್ಯ

'ಬಸವ ಮಂಟಪ' ಕೃತಿ ವಿವಾದ: ರವಿ ಹಂಜ್'ಗೆ ಬಂಧನ ಭೀತಿ: ನಿರೀಕ್ಷಣಾ ಜಾಮೀನು ಕೋರಿ ಅರ್ಜಿ; ಅದೇಶ ಕಾಯ್ದಿರಿಸಿದ ಕೋರ್ಟ್

ಬಂಧನ ಭೀತಿಯಲ್ಲಿರುವ ರವಿ ಹಂಜ್ ಅವರು ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದಾರೆ. ಅರ್ಜಿಯ ವಿಚಾರಣೆ ನಡೆಸಿದ 56ನೇ ಸಿಸಿಎಚ್ ನ್ಯಾಯಾಲಯ ಆದೇಶವನ್ನು ಕಾಯ್ದಿರಿಸಿದೆ.

ರವಿ ಹಂಜ್
Lingaraj Badiger
Updated On : 24 Nov 2026, 7:27 pm

ಬೆಂಗಳೂರು: 12ನೇ ಶತಮಾನದ ಸಮಾಜ ಸುಧಾರಕ ಬಸವಣ್ಣ ಹಾಗೂ ಅವರ ವಚನಗಳನ್ನು ಅವಮಾನಿಸಿದ ಆರೋಪ ಎದುರಿಸುತ್ತಿರುವ 'ಬಸವ ಮಂಟಪ' ಕೃತಿ ಲೇಖಕ, ಅನಿವಾಸಿ ಭಾರತೀಯ, ದಾವಣಗೆರೆ ಮೂಲದ ರವಿ ಹಂಜಗಿಮಠ್ (ರವಿ ಹಂಜ್) ಅವರಿಗೆ ಬಂಧನ ಭೀತಿ ಎದುರಾಗಿದೆ.

ಬಂಧನ ಭೀತಿಯಲ್ಲಿರುವ ರವಿ ಹಂಜ್ ಅವರು ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದಾರೆ. ಅರ್ಜಿಯ ವಿಚಾರಣೆ ನಡೆಸಿದ 56ನೇ ಸಿಸಿಎಚ್ ನ್ಯಾಯಾಲಯ ಆದೇಶವನ್ನು ಕಾಯ್ದಿರಿಸಿದೆ.

ರವಿ ಹಂಜ್ ಪರವಾಗಿ ಹಿರಿಯ ವಕೀಲ ಅರುಣ್ ಶ್ಯಾಮ್ ವಾದ ಮಂಡಿಸಿದ್ದು, ಎರಡು ವರ್ಷಗಳಿಂದ ಪತ್ರಿಕೆಯಲ್ಲಿ ಲೇಖನ ಪ್ರಕಟವಾಗುತ್ತಿತ್ತು. ಆಗ ಲೇಖನಗಳಿಗೆ ಯಾರು ಅಕ್ಷೇಪಣೆ ಸಲ್ಲಿಸಲಿರಲಿಲ್ಲ. ಈಗ ಅದೇ ಲೇಖನ ಪುಸ್ತಕ ಆದಾಗ ದೂರು ನೀಡಿದ್ದಾರೆ. ಇದು ರಾಜಕೀಯ ಪ್ರೇರಿತ ದೂರು ಎಂದು ವಾದಿಸಿದ್ದಾರೆ.

Advertisement

Advertisement

Also Read

'ಬಸವ ಮಂಟಪ' ಕೃತಿ ವಿವಾದ: FIR ರದ್ದು ಕೋರಿ ಹೈಕೋರ್ಟ್ ಮೆಟ್ಟಿಲೇರಿದ ರವಿ ಹಂಜ್

ಈ ವೇಳೆ ಯಾರು ಯಾರ ಬಗ್ಗೆ ಹೇಗಾದ್ರೂ ಪುಸ್ತಕ ಬರೆಯಬಹುದೇ, ಬೇರೆಯವರ ಭಾವನೆಗೆ ಧಕ್ಕೆ ತರಬಹುದೇ ಅಂತ ನ್ಯಾಯಾಧೀಶ ಮೋಹನ್ ಅವರು ಪ್ರಶ್ನೆ ಮಾಡಿದ್ದಾರೆ. ನಂತರ ಎರಡು ಕಡೆ ವಾದ ಆಲಿಸಿದ ಕೋರ್ಟ್, ಆದೇಶವನ್ನು ಕಾಯ್ದಿರಿಸಿದೆ.

ವಿವಾದಾತ್ಮಕ 'ಬಸವ ಮಂಟಪ' ಪುಸ್ತಕಕ್ಕೆ ಸಂಬಂಧಿಸಿದಂತೆ ರವಿ ಹಂಜ್ ಅವರ ವಿರುದ್ಧ ಬೆಂಗಳೂರು ಹಾಗೂ ಬೆಳಗಾವಿಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ. ತಮ್ಮ ದಾಖಲಾಗಿರುವ ಎಫ್ಐಆರ್ ರದ್ದುಗೊಳಿಸುವಂತೆ ಕೋರಿ ರವಿ ಹಂಜಿಗಿಮಠ್ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದು, ಅರ್ಜಿಯಲ್ಲಿ ದೂರುದಾರ ಅರವಿಂದ ಜತ್ತಿ ಮತ್ತು ಹೈಗ್ರೌಂಡ್ಸ್ ಠಾಣೆಯ ಪೊಲೀಸರನ್ನು ಪ್ರತಿವಾದಿಗಳನ್ನಾಗಿ ಮಾಡಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments