ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ರಾಜ್ಯ

ದಿಢೀರ್ ಮಳೆಗೆ ಬೆಂಗಳೂರು ಕೂಲ್ ಕೂಲ್: ವಾಹನ ಸವಾರರ ಪರದಾಟ!

ಬೆಂಗಳೂರಿನಲ್ಲಿ ಇಂದು ಸಂಜೆ ದಿಢೀರ್ ಮಳೆಯಾಗಿದ್ದು ನಗರದಾದ್ಯಂತ ವಾತಾವರಣ ತಂಪಾಗಿದೆ. ಇಂದು ನಗರದ ಹಲವು ಭಾಗಗಳಲ್ಲಿ ಮಳೆಯಾಗಿದೆ. ವಿಧಾನಸೌಧ, ಶಿವಾಜಿನಗರ, ರಿಚ್ ಮಂಡ್ ಸರ್ಕಲ್ ಸೇರಿದಂತೆ ಹಲವು ಪ್ರದೇಶಗಳಲ್ಲಿ ಮಳೆಯಾಗಿದೆ.

ಸಂಗ್ರಹ ಚಿತ್ರ
Vishwanath S
Updated On : 24 Nov 2026, 6:51 pm

ಬೆಂಗಳೂರು: ಬೆಂಗಳೂರಿನಲ್ಲಿ ಇಂದು ಸಂಜೆ ದಿಢೀರ್ ಮಳೆಯಾಗಿದ್ದು ನಗರದಾದ್ಯಂತ ವಾತಾವರಣ ತಂಪಾಗಿದೆ. ಇಂದು ನಗರದ ಹಲವು ಭಾಗಗಳಲ್ಲಿ ಮಳೆಯಾಗಿದೆ. ವಿಧಾನಸೌಧ, ಶಿವಾಜಿನಗರ, ರಿಚ್ ಮಂಡ್ ಸರ್ಕಲ್ ಸೇರಿದಂತೆ ಹಲವು ಪ್ರದೇಶಗಳಲ್ಲಿ ಮಳೆ ಸುರಿದಿದ್ದು ದಿಢೀರ್ ಮಳೆಯಿಂದಾಗಿ ವಾಹನ ಸವಾರರು ಪರದಾಡುವಂತಾಗಿದೆ.

ಬೆಳಗ್ಗಿನಿಂದಲೇ ನಗರದಾದ್ಯಂತ ಮೋಡ ಕವಿದ ವಾತಾವರಣವಿತ್ತು. ಸಂಜೆಯಾಗುತ್ತಿದ್ದಂತೆಯೇ ಏಕಾಏಕಿ ಮಳೆಯಾಗಿದೆ. ಹೀಗಾಗಿ ಮನೆಗಳಿಗೆ ವಾಪಸಾಗುತ್ತಿದ್ದ ಬೈಕ್ ಸವಾರರು ಕೆಲಕಾಲ ಪರದಾಡುವಂತಾಯಿತು. ಪ್ರಮುಖ ಜಂಕ್ಷನ್‌ಗಳಲ್ಲಿ ಮಳೆಯಿಂದಾಗಿ ಸಂಚಾರ ದಟ್ಟಣೆಯಲ್ಲಿ ವ್ಯತ್ಯಯವಾಯಿತು.

Also Read

ತಾಪಮಾನ ಕುಸಿತ: ಕರ್ನಾಟಕದ ರೈತರ ಮೊಗದಲ್ಲಿ ಮಂದಹಾಸ; ಹಿಂಗಾರು ಬೆಳೆಗಳಿಗೆ ಬಂತು ಜೀವಕಳೆ!

ದಕ್ಷಿಣ ಒಳನಾಡಿನ ಮೇಲೆ ಉಂಟಾಗಿರುವ ಮೇಲ್ಮೈ ಸುಳಿಗಾಳಿ ಮತ್ತು ಪೂರ್ವ ಮಾರುತಗಳ ಪ್ರಭಾವದಿಂದ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಸೇರಿದಂತೆ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣ ಮುಂದುವರೆಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯ (IMD) ಎಚ್ಚರಿಕೆ ನೀಡಿತ್ತು.

Advertisement

Advertisement

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments