ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ರಾಜ್ಯ

ಹಾಸನ DC ವಿರುದ್ಧ ಭ್ರಷ್ಟಾಚಾರ ಆರೋಪ: ನೋಟಿಸ್ ನೀಡಲು ಮನೆಗೆ ಬಂದ ಪೊಲೀಸರಿಗೆ HDK ಫುಲ್ ಕ್ಲಾಸ್!

ಲತಾಕುಮಾರಿ ವಿರುದ್ಧ 'ಲಂಚದ ವಾಟ್ಸ್‌ಆ್ಯಪ್ ಚಾಟ್' ಬಿಡುಗಡೆ ಮಾಡಿದ್ದ ಕುಮಾರಸ್ವಾಮಿ ಅವರ ವಿರುದ್ಧ ಜಿಲ್ಲಾಧಿಕಾರಿ ಆಪ್ತ ಸಹಾಯಕ ಶಶಿಕಿರಣ್ ನೀಡಿದ್ದ ದೂರಿನ ಆಧಾರದ ಮೇಲೆ ಕೇಸ್ ದಾಖಲಿಸಲಾಗಿದೆ.

HD ಕುಮಾರಸ್ವಾಮಿ, ಹಾಸನ ಜಿಲ್ಲಾಧಿಕಾರಿ ಲತಾ ಕುಮಾರಿ
Lingaraj Badiger
Updated On : 24 Nov 2026, 4:45 pm

ಬೆಂಗಳೂರು: ಇತ್ತೀಚಿಗೆ ಹಾಸನ ಜಿಲ್ಲಾಧಿಕಾರಿ ಕೆಎಸ್ ಲತಾಕುಮಾರಿ ಅವರ ವಿರುದ್ಧ ಭ್ರಷ್ಟಾಚಾರದ ಗಂಭೀರ ಆರೋಪ ಮಾಡಿದ್ದ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರಿಗೆ ಪೊಲೀಸ್ ನೋಟಿಸ್ ನೀಡುವ ಮೂಲಕ ಪ್ರಕರಣಕ್ಕೆ ಹೊಸ ತಿರುವು ಪಡೆದುಕೊಂಡಿದೆ.

ಲತಾಕುಮಾರಿ ಅವರ ವಿರುದ್ಧ 'ಲಂಚದ ವಾಟ್ಸ್‌ಆ್ಯಪ್ ಚಾಟ್' ಬಿಡುಗಡೆ ಮಾಡಿದ್ದ ಕುಮಾರಸ್ವಾಮಿ ಅವರ ವಿರುದ್ಧ ಜಿಲ್ಲಾಧಿಕಾರಿ ಆಪ್ತ ಸಹಾಯಕ ಶಶಿಕಿರಣ್ ನೀಡಿದ್ದ ದೂರಿನ ಆಧಾರದ ಮೇಲೆ ಕೇಸ್ ದಾಖಲಿಸಲಾಗಿದೆ. ಅಲ್ಲದೆ ಸೈಬರ್ ಕಮಾಂಡ್ ಸೆಂಟರ್ ಪೊಲೀಸರು ಈ ಸಂಬಂಧ ಕೇಂದ್ರ ಸಚಿವ ಎಚ್​​​.ಡಿ. ಕುಮಾರಸ್ವಾಮಿ ಅವರಿಗೆ ನೋಟಿಸ್ ಜಾರಿ ಮಾಡಿದ್ದಾರೆಯ

ಇಂದು ಕುಮಾರಸ್ವಾಮಿ ಅವರ ನಿವಾಸಕ್ಕೆ ನೋಟಿಸ್ ಹಿಡಿದು ಬಂದಿದ್ದ ಹಾಸನ ಸೈಬರ್ ಕ್ರೈಮ್‌ ಪೊಲೀಸರಿಗೆ ಕುಮಾರಸ್ವಾಮಿ ಅವರು ತೀವ್ರ ತರಾಟೆಗೆ ತೆಗೆದುಕೊಂಡಿದ್ದು, ನೋಟಿಸ್ ಸ್ವೀಕರಿಸದೇ ವಾಪಸ್ ಕಳಿಸಿದ್ದಾರೆ.

Advertisement

Advertisement

ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಪಷ್ಟನೆ ನೀಡುವಂತೆ ಸೂಚಿಸಿ ಸೈಬರ್ ಕಮಾಂಡ್ ಸೆಂಟರ್‌ನಿಂದ ಕುಮಾರಸ್ವಾಮಿ ಅವರಿಗೆ ನೋಟಿಸ್ ಸಿದ್ಧಪಡಿಸಲಾಗಿತ್ತು. ಈ ನೋಟಿಸ್ ತಲುಪಿಸಲು ಹಾಸನ ಸೈಬರ್ ಪೊಲೀಸರು ಕೇಂದ್ರ ಸಚಿವ ಕುಮಾರಸ್ವಾಮಿ ಅವರ ನಿವಾಸಕ್ಕೆ ಆಗಮಿಸಿದ್ದರು. ಆದರೆ, ನೋಟಿಸ್ ಪಡೆಯಲು ನಿರಾಕರಿಸಿದ ಕುಮಾರಸ್ವಾಮಿ ಪೊಲೀಸರನ್ನು ವಾಪಸ್ ಕಳಿಸಿದ್ದಾರೆ.

Also Read

ಲಂಚದ WhatsApp ಚಾಟ್ ಪ್ರಕರಣ: ಕೇಂದ್ರ ಸಚಿವ ಹೆಚ್​​​.ಡಿ ಕುಮಾರಸ್ವಾಮಿಗೆ ಸೈಬರ್ ಕಮಾಂಡ್ ಸೆಂಟರ್‌ ನೋಟಿಸ್

ಪೊಲೀಸರಿಗೆ ಫುಲ್ ಕ್ಲಾಸ್

ಪೊಲೀಸರು ತಮಗೆ ನೋಟಿಸ್ ನೀಡಲು ಬಂದಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ ಕುಮಾರಸ್ವಾಮಿ ಅವರು, “ನಾನು ವಿರೋಧ ಪಕ್ಷದ ನಾಯಕನಾಗಿ ಏನು ಮಾತನಾಡಬೇಕೋ ಅದನ್ನು ಮಾತನಾಡಿದ್ದೇನೆ. ಸಾರ್ವಜನಿಕವಾಗಿ ಈ ರೀತಿ ಆರೋಪ ಮಾಡಿದವರ ವಿರುದ್ಧ ಇದೇ ರೀತಿ ಕ್ರಮ ತೆಗೆದುಕೊಂಡಿದ್ದೀರಾ?” ಎಂದು ಪೊಲೀಸರಿಗೆ ಪ್ರಶ್ನಿಸಿದ್ದಾರೆ.

ಅಲ್ಲದೆ, ತಕ್ಷಣವೇ ರಾಜ್ಯ ಪೊಲೀಸ್ ಮಹಾನಿರ್ದೇಶಕ(ಡಿಜಿಪಿ) ಸಲೀಂ ಅವರಿಗೆ ಕರೆ ಮಾಡಿ, ತಮಗೆ ನೋಟಿಸ್ ನೀಡಲು ಬಂದಿರುವ ಬಗ್ಗೆ ತಿಳಿಸಿದ್ದಾರೆ.

ಇನ್ನು ನೋಟಿಸ್‌ ವಿಚಾರವಾಗಿ ಕುಮಾರಸ್ವಾಮಿ ಅವರು ಮಾಧ್ಯಮಕ್ಕೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಕೇಂದ್ರ ಸಚಿವ ಸಂಪುಟ ಸಭೆ ನಡೆಯಲಿರುವ ಹಿನ್ನೆಲೆಯಲ್ಲಿ ಕುಮಾರಸ್ವಾಮಿ ಅವರು ದೆಹಲಿಗೆ ತೆರಳಿದ್ದು ಅಲ್ಲಿ ಪ್ರತಿಕ್ರಿಯೆ ನೀಡುವ ಸಾಧ್ಯತೆಯಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement