ಆಶಾ ಕಾರ್ಯಕರ್ತೆಯರ ಬೇಡಿಕೆಯಲ್ಲಿ ಏನೂ ತಪ್ಪಿಲ್ಲ: ಸಚಿವ ನರೇಂದ್ರಸ್ವಾಮಿ ಹಗುರ ಹೇಳಿಕೆಗೆ ರಮ್ಯಾ ಆಕ್ಷೇಪ
ವೇತನ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕಳೆದೊಂದು ವಾರದಿಂದ ಫ್ರೀಡಂ ಪಾರ್ಕ್ನಲ್ಲಿ ಸಾವಿರರೂ ಆಶಾ ಕಾರ್ಯಕರ್ತೆಯರು ನಡೆಸುತ್ತಿರುವ ಹೋರಾಟಕ್ಕೆ ನಟಿ ಹಾಗೂ ಮಾಜಿ ಸಂಸದೆ ರಮ್ಯಾ ಬೆಂಬಲ ಸೂಚಿಸಿದ್ದಾರೆ.
ಬೆಂಗಳೂರು: ವೇತನ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕಳೆದೊಂದು ವಾರದಿಂದ ಫ್ರೀಡಂ ಪಾರ್ಕ್ನಲ್ಲಿ ಸಾವಿರರೂ ಆಶಾ ಕಾರ್ಯಕರ್ತೆಯರು ನಡೆಸುತ್ತಿರುವ ಹೋರಾಟಕ್ಕೆ ನಟಿ ಹಾಗೂ ಮಾಜಿ ಸಂಸದೆ ರಮ್ಯಾ ಬೆಂಬಲ ಸೂಚಿಸಿದ್ದಾರೆ. ಈ ವೇಳೆ ಮಾತನಾಡಿದ ಅವರು, ಸರ್ಕಾರ ಖಂಡಿತಾ ಬೇಡಿಕೆಗಳನ್ನು ಈಡೇರಿಸಲಿದೆ ಎಂದು ಭರವಸೆ ನೀಡಿದರು.
ಕರ್ನಾಟಕದಲ್ಲಿ ಕೇವಲ 7 ಸಾವಿರ ರೂಪಾಯಿ ನೀಡಲಾಗುತ್ತಿದ್ದು ಇದು ತುಂಬಾ ಕಡಿಮೆ. ಕಾರ್ಯಕರ್ತೆಯರ ಬೇಡಿಕೆಗಳಲ್ಲಿ ಯಾವುದೇ ತಪ್ಪಿಲ್ಲ. ಇನ್ನು ಪಕ್ಕದ ಕೇರಳಂ ಆಶಾ ಕಾರ್ಯಕರ್ತೆಯರಿಗೆ ಈಗಾಗಲೇ 12 ಸಾವಿರದಿಂದ 13 ಸಾವಿರ ರೂಪಾಯಿವರೆಗೆ ಗೌರವಧನ ನೀಡುತ್ತಿದೆ ಎಂದರು.
ಮಳೆ, ಚಳಿ, ಬಿಸಿಲು ಏನೇ ಇರಲಿ ನೀವೆಲ್ಲ ಇಲ್ಲಿ ಪ್ರತಿಭಟನೆ ನಡೆಸುತ್ತಿದ್ದೀರಾ. ಇದು ಹೆಣ್ಣು ಮಕ್ಕಳಲ್ಲಿ ಇರುವ ಶಕ್ತಿ. ಆದರೂ ನನಗೆ ಬೇಸರ ಆಗುತ್ತಿದೆ. ಕಳೆದ ವಾರ ನಾನು ಆರೋಗ್ಯ ಸಚಿವ ಯುಟಿ ಖಾದರ್ ಅವರನ್ನು ಭೇಟಿ ಮಾಡಿದ್ದೆ. ಆಶಾ ಕಾರ್ಯಕರ್ತೆಯರೇ ನಮ್ಮ ಸಾರ್ವಜನಿಕ ಆರೋಗ್ಯದ ಬೆನ್ನೆಲುಬು ಅಂತ ಅವರು ಹೇಳಿದರು. ನಮ್ಮ ಸರ್ಕಾರ ಖಂಡಿತಾ ನಿಮ್ಮ ಬೇಡಿಕೆಯನ್ನು ಪೂರೈಸುತ್ತದೆ ಎಂಬ ನಂಬಿಕೆ ನನಗಿದೆ. ನನ್ನ ಕೈಯಲ್ಲಿ ಆದಷ್ಟು ಪ್ರಯತ್ನ ಮಾಡುತ್ತೇನೆ ಎಂದು ರಮ್ಯಾ ಹೇಳಿದ್ದಾರೆ.
ಇದೇ ವೇಳೆ, ಆಶಾ ಕಾರ್ಯಕರ್ತೆಯರ ಬೇಡಿಕೆಗಳ ಕುರಿತು ಸಚಿವ ನರೇಂದ್ರಸ್ವಾಮಿ ಹಗುರವ ಹೇಳಿಕೆಗೆ ರಮ್ಯಾ ತೀವ್ರ ಆಕ್ಷೇಪ ವ್ಯಕ್ತಪಡಿಸಿದರು. ಆಶಾ ಕಾರ್ಯಕರ್ತೆಯರು ಕೇಳಿದ ತಕ್ಷಣ ಕಂಠಿ ಹಾರ ಕೊಡುವಷ್ಟು ಸರ್ಕಾರ ಸದೃಢವಾಗಿಲ್ಲ ಎಂಬ ಅರ್ಥದಲ್ಲಿ ಸಚಿವರು ನೀಡಿರುವ ಹೇಳಿಕೆ ಸರಿಯಲ್ಲ. ಇಂತಹ ಹೇಳಿಕೆಗಳನ್ನು ನೀಡಬಾರದಿತ್ತು ಎಂದು ರಮ್ಯಾ ಅಸಮಾಧಾನ ವ್ಯಕ್ತಪಡಿಸಿದರು.
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.