ಲಂಚದ WhatsApp ಚಾಟ್ ಪ್ರಕರಣ: ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿಗೆ ಸೈಬರ್ ಕಮಾಂಡ್ ಸೆಂಟರ್ ನೋಟಿಸ್
'ಲಂಚದ ವಾಟ್ಸ್ಆ್ಯಪ್ ಚಾಟ್' ಪ್ರಕರಣ ಸಂಬಂಧ ಹಾಸನ ಜಿಲ್ಲಾಧಿಕಾರಿ ಲತಾಕುಮಾರಿ ಅವರ ಆಪ್ತ ಸಹಾಯಕ ನೀಡಿದ್ದ ದೂರಿನ ಆಧಾರದ ಮೇಲೆ ಸೈಬರ್ ಕಮಾಂಡ್ ಸೆಂಟರ್ ಪೊಲೀಸರು ಕುಮಾರಸ್ವಾಮಿಗೆ ನೋಟಿಸ್ ನೀಡಿದ್ದಾರೆ.
ಬೆಂಗಳೂರು: ಹಾಸನ ಜಿಲ್ಲಾಧಿಕಾರಿ ಕಚೇರಿಯ 'ಲಂಚದ ವಾಟ್ಸ್ಆ್ಯಪ್ ಚಾಟ್' ಪ್ರಕರಣ ಇದೀಗ ಹೊಸ ತಿರುವು ಪಡೆದುಕೊಂಡಿದೆ. ಹಾಸನ ಜಿಲ್ಲಾಧಿಕಾರಿ ಕೆ.ಎಸ್. ಲತಾಕುಮಾರಿ ಅವರ ಆಪ್ತ ಸಹಾಯಕ ಶಶಿಕಿರಣ್ ನೀಡಿದ್ದ ದೂರಿನ ಆಧಾರದ ಮೇಲೆ ಸೈಬರ್ ಕಮಾಂಡ್ ಸೆಂಟರ್ ಪೊಲೀಸರು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿಗೆ ನೋಟಿಸ್ ಜಾರಿಗೊಳಿಸಿದ್ದಾರೆ.
ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು, ಕಳೆದ ನವೆಂಬರ್ 8ರಂದು ಹಾಸನದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಹಾಸನ ಜಿಲ್ಲಾಡಳಿತದಲ್ಲಿ ಭಾರಿ ಭ್ರಷ್ಟಾಚಾರ ನಡೆಯುತ್ತಿದೆ ಎಂದು ಗಂಭೀರ ಆರೋಪ ಮಾಡಿದ್ದರು. ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಂ. ಶಿವಲಿಂಗೇಗೌಡ ಅವರು ಹಾಸನ ಜಿಲ್ಲಾಧಿಕಾರಿ ಕೆ.ಎಸ್. ಲತಾಕುಮಾರಿ ಅವರಿಂದ 75 ಲಕ್ಷ ರೂ. ಲಂಚ ಪಡೆದಿದ್ದಾರೆ ಎಂದು ಕುಮಾರಸ್ವಾಮಿ ಆರೋಪಿಸಿದ್ದರು.
ಜಿಲ್ಲಾಧಿಕಾರಿ ಕೆ.ಎಸ್. ಲತಾಕುಮಾರಿ ಆಪ್ತ ಸಹಾಯಕ ಶಶಿಕಿರಣ್ ಹಾಗೂ ಮಧ್ಯವರ್ತಿಯೊಬ್ಬರ ನಡುವೆ ನಡೆದಿದೆ ಎನ್ನಲಾದ ವಾಟ್ಸ್ಆ್ಯಪ್ ಚಾಟ್ ಸ್ಕ್ರೀನ್ಶಾಟ್ಗಳನ್ನು ಮಾಧ್ಯಮಗಳ ಮುಂದೆ ಓದಿ ಬಹಿರಂಗಪಡಿಸಿದ್ದರು. ತಮಗೆ ಬಂದಿರುವ ಈ ಚಾಟ್ ಬಗ್ಗೆ ಸರ್ಕಾರ ತನಿಖೆ ನಡೆಸಿ ಕ್ರಮ ಕೈಗೊಳ್ಳಲಿ ಎಂದು ಅವರು ಆಗ್ರಹಿಸಿದ್ದರು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.