ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ರಾಜ್ಯ

ಆಶಾ ಕಾರ್ಯಕರ್ತೆಯರ ಬೇಡಿಕೆ ನ್ಯಾಯಸಮ್ಮತವಾಗಿದೆ; ಸರ್ಕಾರ ಏಕೆ ಗಮನಹರಿಸುತ್ತಿಲ್ಲ: H D ಕುಮಾರಸ್ವಾಮಿ; Video

ಈ ಹೋರಾಟ ಕೇವಲ ಸರ್ಕಾರದ ವಿರುದ್ಧದ ಪ್ರತಿಭಟನೆಯಲ್ಲ. ಇದು ಕಾರ್ಯಕರ್ತೆಯರು ಎದುರಿಸುತ್ತಿರುವ ಸಂಕಷ್ಟಗಳು ಹಾಗೂ ಅವರು ಮಾಡುತ್ತಿರುವ ಕಠಿಣ ಪರಿಶ್ರಮವನ್ನು ಪ್ರತಿಬಿಂಬಿಸುತ್ತದೆ ಎಂದು ಹೇಳಿದರು.

ಹೆಚ್ ಡಿ ಕುಮಾರಸ್ವಾಮಿ
Sumana Upadhyaya
Updated On : 24 Nov 2026, 7:57 am

ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಆಶಾ ಕಾರ್ಯಕರ್ತೆಯರ ಪ್ರತಿಭಟನೆಗೆ ಬೆಂಬಲ ವ್ಯಕ್ತಪಡಿಸಿದ್ದಾರೆ. ಅವರ ಬೇಡಿಕೆಗಳು ನ್ಯಾಯಸಮ್ಮತವಾಗಿವೆ, ಕಾರ್ಯಕರ್ತೆಯರ ಸಮಸ್ಯೆಗಳನ್ನು ಪರಿಹರಿಸುವಂತೆ ರಾಜ್ಯ ಸರ್ಕಾರವನ್ನು ಒತ್ತಾಯಿಸಿದರು.

ನಿನ್ನೆ ಬೆಂಗಳೂರಿನಲ್ಲಿ, ಆರ್ಥಿಕ ನೆರವು ಹಾಗೂ ಉತ್ತಮ ಗೌರವಧನ ನೀಡುವಂತೆ ಆಗ್ರಹಿಸಿ ಆಶಾ ಕಾರ್ಯಕರ್ತೆಯರು ನಡೆಸುತ್ತಿರುವ ಪ್ರತಿಭಟನೆ ಕುರಿತು ಸುದ್ದಿಗಾರರ ಪ್ರಶ್ನೆಗೆ ಕುಮಾರಸ್ವಾಮಿ ಉತ್ತರಿಸಿದರು.

ಈ ಹೋರಾಟ ಕೇವಲ ಸರ್ಕಾರದ ವಿರುದ್ಧದ ಪ್ರತಿಭಟನೆಯಲ್ಲ. ಇದು ಕಾರ್ಯಕರ್ತೆಯರು ಎದುರಿಸುತ್ತಿರುವ ಸಂಕಷ್ಟಗಳು ಹಾಗೂ ಅವರು ಮಾಡುತ್ತಿರುವ ಕಠಿಣ ಪರಿಶ್ರಮವನ್ನು ಪ್ರತಿಬಿಂಬಿಸುತ್ತದೆ ಎಂದು ಹೇಳಿದರು.

Advertisement

Advertisement

Also Read

ಫ್ರೀಡಂ ಪಾರ್ಕ್‌ನಲ್ಲಿ 7ನೇ ದಿನಕ್ಕೆ ಕಾಲಿಟ್ಟ ಧರಣಿ; "ಆಶಾ" ಅನಾರೋಗ್ಯ: 17 ಕಾರ್ಯಕರ್ತೆಯರು ಆಸ್ಪತ್ರೆಗೆ ದಾಖಲು

ಆಶಾ ಕಾರ್ಯಕರ್ತೆಯರು ಮುಂದಿಟ್ಟಿರುವ ಬೇಡಿಕೆಗಳು ನ್ಯಾಯಸಮ್ಮತವಾಗಿದ್ದು, ರಾಜ್ಯ ಸರ್ಕಾರ ಅವುಗಳನ್ನು ಗಂಭೀರವಾಗಿ ಪರಿಗಣಿಸಬೇಕು ಎಂದು ತಿಳಿಸಿದರು.

ಕಾರ್ಯಕರ್ತೆಯರು ವಾರದಿಂದ ಪ್ರತಿಭಟನೆ ನಡೆಸುತ್ತಿದ್ದರೂ ಸಮಸ್ಯೆ ಬಗೆಹರಿಸುವಲ್ಲಿ ಸರ್ಕಾರ ವಿಫಲವಾಗಿದೆ ಎಂದು ಕುಮಾರಸ್ವಾಮಿ ಟೀಕಿಸಿದರು. ಅವರ ಬೇಡಿಕೆಗಳ ಬಗ್ಗೆ ನಿರ್ಧಾರ ಕೈಗೊಳ್ಳಲು ಸರ್ಕಾರ ವಿಳಂಬ ಮಾಡುತ್ತಿರುವಾಗ ಸಾರ್ವಜನಿಕರ ಹಣವನ್ನು ಖರ್ಚು ಮಾಡುತ್ತಿರುವುದೇಕೆ ಎಂದು ಪ್ರಶ್ನಿಸಿದರು.

ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಆಶಾ ಕಾರ್ಯಕರ್ತೆಯರು ಅಹೋರಾತ್ರಿ ಅನಿರ್ದಿಷ್ಟಾವಧಿ ಪ್ರತಿಭಟನೆ ನಡೆಸುತ್ತಿದ್ದು ಇಂದು 8ನೇ ದಿನಕ್ಕೆ ಕಾಲಿಟ್ಟಿದೆ. 15 ಸಾವಿರ ರೂಪಾಯಿ ನಿಗದಿತ ಮಾಸಿಕ ಗೌರವಧನ ಹಾಗೂ ರಾಜ್ಯ ಸರ್ಕಾರದಿಂದ ಲಿಖಿತ ಭರವಸೆ ಸಿಗುವವರೆಗೆ ಹೋರಾಟ ನಿಲ್ಲಿಸುವುದಿಲ್ಲ ಎಂದು ಪಟ್ಟು ಹಿಡಿದಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments