ವಿನಯ್ ಕುಲಕರ್ಣಿ ಜಾಮೀನು ರದ್ದು; ವಕೀಲರು ಹೇಳಿದ್ದಿಷ್ಟು.. Video
ವಿನಯ್ ಕುಲಕರ್ಣಿ ಸೇರಿದಂತೆ ಪ್ರಕರಣದ 12 ಮಂದಿ ಆರೋಪಿಗಳು ಎರಡು ವಾರಗಳೊಳಗೆ ಜೈಲು ಅಧಿಕಾರಿಗಳ ಮುಂದೆ ಶರಣಾಗುವಂತೆ ಸೂಚಿಸಿದೆ.
ನವದೆಹಲಿ: ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕ ವಿನಯ್ ಕುಲಕರ್ಣಿ ಅವರಿಗೆ ನೀಡಲಾಗಿದ್ದ ಜಾಮೀನನ್ನು ಸುಪ್ರೀಂ ಕೋರ್ಟ್ ರದ್ದುಪಡಿಸಿದೆ. ಕರ್ನಾಟಕ ಹೈಕೋರ್ಟ್ ನೀಡಿದ್ದ ಆದೇಶವನ್ನು ರದ್ದುಗೊಳಿಸಿರುವ ಸರ್ವೋಚ್ಚ ನ್ಯಾಯಾಲಯ, ಕುಲಕರ್ಣಿ ಸೇರಿದಂತೆ ಪ್ರಕರಣದ 12 ಮಂದಿ ಆರೋಪಿಗಳು ಎರಡು ವಾರಗಳೊಳಗೆ ಜೈಲು ಅಧಿಕಾರಿಗಳ ಮುಂದೆ ಶರಣಾಗುವಂತೆ ಸೂಚಿಸಿದೆ.
ಯೋಗೇಶ್ ಗೌಡ ಅವರ ಸೋದರ ಗುರುನಾಥ ಗೌಡ ಪರ ವಕೀಲ ವಿಕಾಸ್ ಜೈನ್, ಇದು ಯೋಗೇಶ್‌ಗೌಡ ಗೌಡರ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದ ವಿಚಾರ. ಅವರ ಕುಟುಂಬ ನ್ಯಾಯಕ್ಕಾಗಿ ಕಾಯುತ್ತಿದೆ. ಆ ಸಮಯದಲ್ಲಿ ಅವರು ಜನಪ್ರತಿನಿಧಿಯಾಗಿ ಪಂಚಾಯತ್ ಸದಸ್ಯರಾಗಿದ್ದರು. ಜಿಮ್‌ನ ಹೊರಗೆ ರಸ್ತೆಯಲ್ಲಿ ಅವರನ್ನು ಕೊಲೆ ಮಾಡಲಾಗಿತ್ತು. ಕಳೆದ 10 ವರ್ಷಗಳಿಂದ ಅವರ ಕುಟುಂಬ ನ್ಯಾಯಕ್ಕಾಗಿ ಕಾಯುತ್ತಿದೆ ಎಂದರು.
ಹೈಕೋರ್ಟ್ ಆದೇಶವನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿ, ಆರೋಪಿಗಳು 14 ದಿನಗಳೊಳಗೆ ಶರಣಾಗುವಂತೆ ನಿರ್ದೇಶನ ನೀಡಿದೆ. ನ್ಯಾಯಾಲಯವು ಸದ್ಯ ಎರಡು ಸಾಲಿನ ಪ್ರಮುಖ ಆದೇಶವನ್ನು ಪ್ರಕಟಿಸಿದ್ದು, ವಿವರವಾದ ತೀರ್ಪಿನ ಪ್ರತಿ ಇನ್ನಷ್ಟೇ ಬಿಡುಗಡೆಯಾಗಬೇಕಿದೆ ಎಂದರು.
ವಿಚಾರಣಾ ನ್ಯಾಯಾಲಯವು ಕೊಲೆ ಪ್ರಕರಣದಲ್ಲಿ ಅವರನ್ನು ದೋಷಿ ಎಂದು ಘೋಷಿಸಿ ಶಿಕ್ಷೆ ವಿಧಿಸಿತ್ತು. ಶಾಸಕ ವಿನಯ್ ಕುಲಕರ್ಣಿ ಸೇರಿದಂತೆ ಎಲ್ಲ ಆರೋಪಿಗಳು ಹೈಕೋರ್ಟ್‌ನಲ್ಲಿ ಈ ಆದೇಶವನ್ನು ಪ್ರಶ್ನಿಸಿದ್ದರು. ಮಧ್ಯಂತರ ಪರಿಹಾರವಾಗಿ ಕರ್ನಾಟಕ ಹೈಕೋರ್ಟ್ ಅವರಿಗೆ ಜಾಮೀನು ನೀಡಿದ್ದಲ್ಲದೆ, ಶಿಕ್ಷೆಗೆ ತಡೆಯನ್ನೂ ವಿಧಿಸಿತ್ತು.