ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ರಾಜ್ಯ

ಅಂಜಲಿ ಅಂಬಿಗೇರ ಕೊಲೆ: ಅಪರಾಧಿ ಗಿರೀಶ್​ಗೆ ಜೀವಾವಧಿ ಶಿಕ್ಷೆ, ₹45 ಸಾವಿರ ದಂಡ!

ಅಂಜಲಿ ಅಂಬಿಗೇರ ಕೊಲೆ ಪ್ರಕರಣ ಸಂಬಂಧ ಅಪರಾಧಿ ವಿಶ್ವನಾಥ ಅಲಿಯಾಸ್ ಗಿರೀಶ ಸಾವಂತ್‌ಗೆ ನಗರದ ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜೀವಾವಧಿ ಶಿಕ್ಷೆ ಹಾಗೂ ಒಟ್ಟು 45 ಸಾವಿರ ರೂ. ದಂಡ ವಿಧಿಸಿ ತೀರ್ಪು ನೀಡಿದೆ.

ಅಂಜಲಿ ಅಂಬಿಗೇರ, ಗಿರೀಶ ಸಾವಂತ್‌
Vishwanath S
Updated On : 25 Nov 2026, 8:46 pm

ಹುಬ್ಬಳ್ಳಿ: ಅಂಜಲಿ ಅಂಬಿಗೇರ ಕೊಲೆ ಪ್ರಕರಣ ಸಂಬಂಧ ಅಪರಾಧಿ ವಿಶ್ವನಾಥ ಅಲಿಯಾಸ್ ಗಿರೀಶ ಸಾವಂತ್‌ಗೆ ನಗರದ ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜೀವಾವಧಿ ಶಿಕ್ಷೆ ಹಾಗೂ ಒಟ್ಟು 45 ಸಾವಿರ ರೂ. ದಂಡ ವಿಧಿಸಿ ತೀರ್ಪು ನೀಡಿದೆ.

ವೀರಾಪುರ ಓಣಿಯ ಕರಿಯಮ್ಮನ ದೇವಸ್ಥಾನದ ಬಳಿ ವಾಸವಿದ್ದ 20 ವರ್ಷದ ಅಂಜಲಿಯನ್ನು ಪ್ರೀತಿಸುತ್ತಿದ್ದ ಗಿರೀಶ್, 2024ರ ಮೇ 15ರಂದು ಆಕೆಯ ಮನೆಗೆ ನುಗ್ಗಿ ಚಾಕುವಿನಿಂದ ಇರಿದು ಕೊಲೆ ಮಾಡಿದ್ದನು. ಪ್ರಕರಣದ ವಿಚಾರಣೆ ನಡೆಸಿದ ಹುಬ್ಬಳ್ಳಿಯ ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ಪಲ್ಲವಿ ಬಿ.ಆರ್. ಅವರು ತೀರ್ಪು ನೀಡಿದ್ದಾರೆ.

Also Read

ಬೆಂಗಳೂರು: ಆಸ್ತಿ ವಿಚಾರವಾಗಿ ಗಲಾಟೆ; ಬ್ಯಾಟ್ ನಿಂದ ತಂಗಿಯನ್ನು ಹೊಡೆದುಕೊಂದ ಲಾಯರ್; ಮಕ್ಕಳು ಅನಾಥ!

45 ಸಾವಿರ ರೂ. ದಂಡದ ಮೊತ್ತದಲ್ಲಿ 43 ಸಾವಿರ ರೂ.ಗಳನ್ನು ಸಂತ್ರಸ್ತೆ ಅಂಜಲಿಯ ಸಹೋದರಿ ಯಶೋದಾಗೆ ಪರಿಹಾರವಾಗಿ ನೀಡಬೇಕು ಹಾಗೂ ಉಳಿದ ಎರಡು ಸಾವಿರ ರೂ.ಗಳನ್ನು ಸರ್ಕಾರಕ್ಕೆ ಜಮಾ ಮಾಡಬೇಕು ಎಂದು ನ್ಯಾಯಾಲಯ ಆದೇಶಿಸಿದೆ.

Advertisement

Advertisement

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement