ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ರಾಜ್ಯ

ರಾಜ್ಯದ ಎಲ್ಲಾ ಜಿಲ್ಲೆಗಳಿಗೂ 'ಹೃದಯಜ್ಯೋತಿ ಯೋಜನೆ' ವಿಸ್ತರಣೆ: ಆರೋಗ್ಯ ಸಚಿವ U T ಖಾದರ್

ತುರ್ತು ಹೃದಯ ಚಿಕಿತ್ಸೆಯನ್ನು ಒದಗಿಸುವ ಡಾ. ಪುನೀತ್ ರಾಜ್‌ಕುಮಾರ್ ಹೃದಯಜ್ಯೋತಿ ಯೋಜನೆಯು ಪ್ರಸ್ತುತ ರಾಜ್ಯದ 86 ಜಿಲ್ಲಾ ಮತ್ತು ತಾಲೂಕು ಕೇಂದ್ರಗಳಲ್ಲಿ ಕಾರ್ಯನಿರ್ವಹಿಸುತ್ತಿದೆ.

ಯು ಟಿ ಖಾದರ್
Sumana Upadhyaya
Updated On : 25 Nov 2026, 9:56 am

ಮಂಗಳೂರು: ಆರೋಗ್ಯ ಕ್ಷೇತ್ರದಲ್ಲಿ ಹಲವು ಮಹತ್ವದ ಉಪಕ್ರಮಗಳನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು.ಟಿ. ಖಾದರ್ ಪ್ರಕಟಿಸಿದ್ದಾರೆ. ಡಾ. ಪುನೀತ್ ರಾಜ್‌ಕುಮಾರ್ ಹೃದಯಜ್ಯೋತಿ ಯೋಜನೆಯನ್ನು ಎಲ್ಲ ಜಿಲ್ಲಾ ಮತ್ತು ತಾಲೂಕು ಕೇಂದ್ರಗಳಿಗೆ ವಿಸ್ತರಿಸುವುದು, ಬಿಪಿಎಲ್ ಕುಟುಂಬಗಳಿಗೆ ಉಚಿತ ಕೀಮೋಥೆರಪಿ ಡೇ ಕೇರ್ ಕೇಂದ್ರಗಳ ಸ್ಥಾಪನೆ, ಕೃತಕ ಬುದ್ಧಿಮತ್ತೆ (AI) ಆಧಾರಿತ ಸ್ತನ ಕ್ಯಾನ್ಸರ್ ತಪಾಸಣೆ ಹಾಗೂ ಸರ್ಕಾರಿ ಆಸ್ಪತ್ರೆಗಳಲ್ಲಿ ಡಯಾಲಿಸಿಸ್ ಸೇವೆಗಳನ್ನು ಸುಧಾರಿಸುವುದು ಈ ಉಪಕ್ರಮಗಳಲ್ಲಿ ಸೇರಿವೆ.

ನಿನ್ನೆ ಮಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಯು ಟಿ ಖಾದರ್, ತುರ್ತು ಹೃದಯ ಚಿಕಿತ್ಸೆಯನ್ನು ಒದಗಿಸುವ ಡಾ. ಪುನೀತ್ ರಾಜ್‌ಕುಮಾರ್ ಹೃದಯಜ್ಯೋತಿ ಯೋಜನೆಯು ಪ್ರಸ್ತುತ ರಾಜ್ಯದ 86 ಜಿಲ್ಲಾ ಮತ್ತು ತಾಲೂಕು ಕೇಂದ್ರಗಳಲ್ಲಿ ಕಾರ್ಯನಿರ್ವಹಿಸುತ್ತಿದೆ.

Also Read

ಆರೋಗ್ಯ ಇಲಾಖೆಯಿಂದ ವಿಶೇಷ ತಪಾಸಣಾ ಅಭಿಯಾನ; 112 ಪ್ಯಾಕೇಜ್ಡ್ ಡ್ರಿಂಕಿಂಗ್ ವಾಟರ್ ಘಟಕಗಳ ಪರಿಶೀಲನೆ

ಈ ಯೋಜನೆಯಡಿ ಇದುವರೆಗೆ 14.96 ಲಕ್ಷ ಇಸಿಜಿ ಪರೀಕ್ಷೆಗಳನ್ನು ನಡೆಸಲಾಗಿದ್ದು, 22,579 ಮಂದಿಯಲ್ಲಿ ಎಸ್‌ಟಿ ಎಲಿವೇಷನ್ ಮಯೋಕಾರ್ಡಿಯಲ್ ಇನ್‌ಫಾರ್ಕ್ಷನ್ (STEMI) ಪ್ರಕರಣಗಳನ್ನು ಪತ್ತೆಹಚ್ಚಲಾಗಿದೆ. ಇದರಿಂದ ಸಕಾಲದಲ್ಲಿ ಚಿಕಿತ್ಸೆ ನೀಡಲು ಸಾಧ್ಯವಾಗಿದೆ ಎಂದು ಹೇಳಿದರು.

Advertisement

Advertisement

ಯೋಜನೆಯಡಿ ಹೃದಯಾಘಾತದ ತುರ್ತು ಲಕ್ಷಣಗಳಿರುವ ರೋಗಿಗಳಿಗೆ ಸಮೀಪದ ತಾಲೂಕು ಆಸ್ಪತ್ರೆಯಲ್ಲಿ ಇಸಿಜಿ ಪರೀಕ್ಷೆ ನಡೆಸಲಾಗುತ್ತದೆ. ಹೃದಯಾಘಾತದ ಸೂಚನೆ ನೀಡುವ ಅಸಹಜತೆಗಳು ಪತ್ತೆಯಾದರೆ, ತಕ್ಷಣವೇ ಜೀವ ರಕ್ಷಕ ಔಷಧಗಳನ್ನು ನೀಡಿ, ಆಂಜಿಯೋಪ್ಲಾಸ್ಟಿ ಅಥವಾ ಇತರ ಸುಧಾರಿತ ಹೃದಯ ಚಿಕಿತ್ಸೆಗಳಿಗಾಗಿ ಜಿಲ್ಲಾ ಆಸ್ಪತ್ರೆಗೆ ಸ್ಥಳಾಂತರಿಸಲಾಗುತ್ತದೆ.

ತುರ್ತು ಹೃದಯ ಚಿಕಿತ್ಸೆಯ ಸೌಲಭ್ಯವನ್ನು ಮತ್ತಷ್ಟು ಜನರಿಗೆ ತಲುಪಿಸುವ ಉದ್ದೇಶದಿಂದ ಎಲ್ಲಾ ಜಿಲ್ಲಾ ಮತ್ತು ತಾಲೂಕು ಕೇಂದ್ರಗಳಿಗೂ ಈ ಯೋಜನೆಯನ್ನು ವಿಸ್ತರಿಸಲು ಸರ್ಕಾರ ನಿರ್ಧರಿಸಿದೆ ಎಂದು ತಿಳಿಸಿದರು.

Also Read

ಅಡುಗೆ ಎಣ್ಣೆ ಮರುಬಳಕೆ ಆರೋಗ್ಯಕ್ಕೆ ಅಪಾಯಕಾರಿ; ತಡೆಯುವ ಉದ್ದೇಶದಿಂದ ಹೊಸ App ಬಿಡುಗಡೆ: ಸಚಿವ ಯು.ಟಿ ಖಾದರ್; Video

ಮುಂದಿನ ಮೂರು ತಿಂಗಳೊಳಗೆ ಪ್ರತಿ ಜಿಲ್ಲಾ ಆಸ್ಪತ್ರೆಯಲ್ಲೂ ಕೀಮೋಥೆರಪಿ ಡೇ ಕೇರ್ ಕೇಂದ್ರಗಳನ್ನು ಸ್ಥಾಪಿಸಲಾಗುವುದು. ನಂತರ ಈ ಸೌಲಭ್ಯವನ್ನು ತಾಲೂಕು ಆಸ್ಪತ್ರೆಗಳಿಗೂ ವಿಸ್ತರಿಸಲಾಗುವುದು ಎಂದು ಖಾದರ್ ಘೋಷಿಸಿದರು. ಬಿಪಿಎಲ್ ಕುಟುಂಬಗಳಿಗೆ ಸೇರಿದ ರೋಗಿಗಳಿಗೆ ಈ ಕೀಮೋಥೆರಪಿ ಸೇವೆಗಳನ್ನು ಉಚಿತವಾಗಿ ಒದಗಿಸಲಾಗುವುದು ಎಂದರು.

ಕುಸುಮ ಸಂಜೀವಿನಿ ಯೋಜನೆಯಡಿ ಬಿಪಿಎಲ್ ಕುಟುಂಬಗಳ ಹಿಮೋಫಿಲಿಯಾ ರೋಗಿಗಳಿಗೆ ಪ್ರತಿ ತಿಂಗಳು ಮುನ್ನೆಚ್ಚರಿಕಾ ಚುಚ್ಚುಮದ್ದುಗಳನ್ನು ನೀಡಲು ಸರ್ಕಾರ ನಿರ್ಧರಿಸಿದೆ ಎಂದು ಸಚಿವರು ತಿಳಿಸಿದರು.

ಪ್ರಸ್ತುತ ರಕ್ತಸ್ರಾವ ಆರಂಭವಾದ ಬಳಿಕವಷ್ಟೇ ರೋಗಿಗಳಿಗೆ ದುಬಾರಿ ಬೆಲೆಯ ಏಳರಿಂದ ಎಂಟು ಚುಚ್ಚುಮದ್ದುಗಳನ್ನು ನೀಡಲಾಗುತ್ತಿದೆ. ಆದರೆ, ಇನ್ನು ಮುಂದೆ ಮುನ್ನೆಚ್ಚರಿಕಾ ಕ್ರಮವಾಗಿ ಪ್ರತಿ ತಿಂಗಳು ಚುಚ್ಚುಮದ್ದು ನೀಡುವ ವ್ಯವಸ್ಥೆ ಜಾರಿಗೆ ತರಲಾಗುವುದು ಎಂದು ಹೇಳಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement