ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ರಾಜ್ಯ

ವಿನಯ್ ಕುಲಕರ್ಣಿ ಜಾಮೀನು ರದ್ದು ಸಂತೋಷ ತಂದಿದೆ: ಸಾಮಾಜಿಕ ಹೋರಾಟಗಾರ ಬಸವರಾಜ ಕೊರವರ

ವಿನಯ್ ಕುಲಕರ್ಣಿ ಹಾಗೂ ಪ್ರಕರಣದ ಇತರ ಆರೋಪಿಗಳು ಎರಡು ವಾರಗಳ ಒಳಗಾಗಿ ನ್ಯಾಯಾಲಯದ ಮುಂದೆ ಶರಣಾಗುವಂತೆ ಸುಪ್ರೀಂ ಕೋರ್ಟ್ ಆದೇಶಿಸಿದೆ.

ಯೋಗೇಶ್ ಗೌಡ, ವಿನಯ್ ಕುಲಕರ್ಣಿ(ಸಂಗ್ರಹ ಚಿತ್ರ)
Sumana Upadhyaya
Updated On : 25 Nov 2026, 1:28 pm

2016ರಲ್ಲಿ ಧಾರವಾಡದ ಬಿಜೆಪಿ ಜಿಲ್ಲಾ ಪಂಚಾಯತ್ ಸದಸ್ಯ ಯೋಗೇಶ್ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಮಾಜಿ ಸಚಿವ ಹಾಗೂ ಶಾಸಕ ಕಾಂಗ್ರೆಸ್ ನಾಯಕ ವಿನಯ್ ಕುಲಕರ್ಣಿ ಅವರ ಜಾಮೀನನ್ನು ಸುಪ್ರೀಂ ಕೋರ್ಟ್ ಇಂದು ಬುಧವಾರ ರದ್ದುಗೊಳಿಸಿದೆ.

ನ್ಯಾಯಮೂರ್ತಿ ಪ್ರಶಾಂತ್ ಕುಮಾರ್ ಮಿಶ್ರಾ ಮತ್ತು ನ್ಯಾಯಮೂರ್ತಿ ಎಸ್. ಚಂದ್ರಶೇಖರ್ ಅವರನ್ನೊಳಗೊಂಡ ಸುಪ್ರೀಂ ಕೋರ್ಟ್ ದ್ವಿಸದಸ್ಯ ಪೀಠವು, ವಿನಯ್ ಕುಲಕರ್ಣಿ ಅವರ ಶಿಕ್ಷೆಗೆ ತಡೆಯಾಜ್ಞೆ ನೀಡಿ ಜಾಮೀನು ಮಂಜೂರು ಮಾಡಿದ್ದ ಕರ್ನಾಟಕ ಹೈಕೋರ್ಟ್ ಆದೇಶವನ್ನು ರದ್ದುಪಡಿಸಿದೆ.

ವಿನಯ್ ಕುಲಕರ್ಣಿ ಹಾಗೂ ಪ್ರಕರಣದ ಇತರ ಆರೋಪಿಗಳು ಎರಡು ವಾರಗಳ ಒಳಗಾಗಿ ನ್ಯಾಯಾಲಯದ ಮುಂದೆ ಶರಣಾಗುವಂತೆ ಸುಪ್ರೀಂ ಕೋರ್ಟ್ ಆದೇಶಿಸಿದೆ.

Advertisement

Advertisement

ಕಳೆದ ಏಪ್ರಿಲ್‌ನಲ್ಲಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ವಿನಯ್ ಕುಲಕರ್ಣಿ ಅವರಿಗೆ ಜೀವಾವಧಿ ಶಿಕ್ಷೆ ವಿಧಿಸಿತ್ತು. ಕಳೆದ ಜುಲೈ 31ರಂದು ಹೈಕೋರ್ಟ್ ಈ ಶಿಕ್ಷೆಗೆ ತಡೆಯಾಜ್ಞೆ ನೀಡಿ ಜಾಮೀನು ನೀಡಿತ್ತು. ಇದನ್ನು ಪ್ರಶ್ನಿಸಿ ಸಿಬಿಐ (CBI) ಮತ್ತು ಮೃತ ಯೋಗೇಶ್ ಗೌಡ ಅವರ ಸಹೋದರ ಗುರುನಾಥ್ ಗೌಡ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದರು.

Also Read

ಯೋಗೀಶ್ ಗೌಡ ಹತ್ಯೆ ಪ್ರಕರಣ: ವಿನಯ್‌ ಕುಲಕರ್ಣಿ ಜಾಮೀನು ರದ್ದು, ಮತ್ತೆ ಜೈಲೇ ಗತಿ! Video

ಇಂದು ಸುಪ್ರೀಂ ಕೋರ್ಟ್ ತೀರ್ಪು ಹೊರಬರುತ್ತಿದ್ದಂತೆ ಧಾರವಾಡದಲ್ಲಿ ಮಾಧ್ಯಮ ಪ್ರತಿನಿಧಿಗಳಿಗೆ ಪ್ರತಿಕ್ರಿಯಿಸಿದ ಸಾಮಾಜಿಕ ಹೋರಾಟಗಾರ ಬಸವರಾಜ ಕೊರವರ, ಸುಪ್ರೀಂ ಕೋರ್ಟ್ ಆದೇಶವನ್ನು ಸ್ವಾಗತಿಸಿದ್ದಾರೆ.

ಭಾರತದ ನ್ಯಾಯಾಂಗ ವ್ಯವಸ್ಥೆಯ ಮೇಲೆ ನಂಬಿಕೆ ಇಟ್ಟಿದ್ದಕ್ಕೆ ಸುಪ್ರೀಂ ಕೋರ್ಟ್ ಉತ್ತಮ ಆದೇಶ ನೀಡಿದೆ. ಈ ಹೋರಾಟದಲ್ಲಿ ನಮಗೆ ಜಯ ಸಿಕ್ಕಿದ್ದು, ನ್ಯಾಯ ದೊರೆತಂತಾಗಿದೆ ಎಂದು ಹೇಳಿದ್ದಾರೆ.

ಕಾನೂನು ಯಾರನ್ನೂ ಬಿಡುವುದಿಲ್ಲ, ರಾಜಕೀಯವಾಗಿ ಆತ ಎಷ್ಟೇ ಪ್ರಬಲನಾಗಿದ್ದರೂ ಶಿಕ್ಷೆಯಾಗುತ್ತದೆ ಎಂಬುದಕ್ಕೆ ವಿನಯ್ ಕುಲಕರ್ಣಿ ಪ್ರಕರಣವೇ ಸಾಕ್ಷಿ. ಆದರೆ ನಮ್ಮ ಹೋರಾಟ ಇಲ್ಲಿಗೇ ನಿಲ್ಲುವುದಿಲ್ಲ, ಅವರು ಕಾನೂನು ಹೋರಾಟ ಮುಂದುವರಿಸುವುದರಿಂದ ನಾವು ಕೂಡ ಹಿಂದೆ ಸರಿಯುವುದಿಲ್ಲ, ನ್ಯಾಯಕ್ಕಾಗಿ ಹೋರಾಟ ಮುಂದುವರಿಸುತ್ತೇವೆ ಎಂದರು.

ಪೊಲೀಸ್ ಭದ್ರತೆ ಮತ್ತು ಅನರ್ಹತೆ ಆಗ್ರಹ

ಸುಪ್ರೀಂ ಕೋರ್ಟ್ ತೀರ್ಪಿನ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಧಾರವಾಡದಲ್ಲಿರುವ ಬಸವರಾಜ ಕೊರವರ ಅವರ ನಿವಾಸಕ್ಕೆ ಪೊಲೀಸ್ ಕಾವಲು ಹಾಕಲಾಗಿದೆ. ಅಲ್ಲದೆ, ವಿನಯ್ ಕುಲಕರ್ಣಿ ಅವರ ಶಾಸಕ ಸ್ಥಾನವನ್ನು ಅನರ್ಹಗೊಳಿಸುವಂತೆಯೂ ವಿಧಾನಸಭಾಧ್ಯಕ್ಷರಿಗೆ ಪತ್ರ ಬರೆದು ಒತ್ತಾಯಿಸಲಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement