ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ರಾಜ್ಯ

ಬೆನ್ನು ನೋವಿನಿಂದ ನರಳುತ್ತಿರುವ ದರ್ಶನ್‌: ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಫಿಸಿಯೋಥೆರಪಿಗೆ ಕೋರ್ಟ್ ಅನುಮತಿ

ತೀವ್ರ ಬೆನ್ನುನೋವಿನಿಂದ ಬಳಲುತ್ತಿರುವ ತಮಗೆ ಬಿಜಿಎಸ್ ಅಥವಾ ಹಾಸ್ಮಟ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಲು ಅನುಮತಿ ನೀಡುವಂತೆ ಕೋರಿ ದರ್ಶನ್ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು.

ನಟ ದರ್ಶನ್
Shilpa D
Updated On : 26 Nov 2026, 6:24 pm

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ನಟ ದರ್ಶನ್ ಬೆನ್ನುನೋವಿನ ಚಿಕಿತ್ಸೆಗಾಗಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಬೆಂಗಳೂರಿನ 59ನೇ ಸಿಸಿಹೆಚ್ (CCH) ನ್ಯಾಯಾಲಯವು, ಫಿಸಿಯೋಥೆರಪಿ ಅವಶ್ಯಕತೆ ಇದ್ದರೆ ಸರ್ಕಾರಿ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲು ಅವಕಾಶ ನೀಡಿದೆ.

ಅಲ್ಲದೆ, ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆಗೆ ಅವಕಾಶ ಕೋರಿರುವ ಅರ್ಜಿಗೆ ಆಕ್ಷೇಪಣೆ ಸಲ್ಲಿಸುವಂತೆ ಪ್ರಾಸಿಕ್ಯೂಷನ್‌ಗೆ ಸೂಚಿಸಿ, ಮುಂದಿನ ವಿಚಾರಣೆಯನ್ನು ಸೋಮವಾರಕ್ಕೆ ಮುಂದೂಡಿದೆ. ತೀವ್ರ ಬೆನ್ನುನೋವಿನಿಂದ ಬಳಲುತ್ತಿರುವ ತಮಗೆ ಬಿಜಿಎಸ್ ಅಥವಾ ಹಾಸ್ಮಟ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಲು ಅನುಮತಿ ನೀಡುವಂತೆ ಕೋರಿ ದರ್ಶನ್ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು.

ಇಂದು 59ನೇ ಸಿಸಿಹೆಚ್ ನ್ಯಾಯಾಲಯದಲ್ಲಿ ಅರ್ಜಿ ವಿಚಾರಣೆ ಆರಂಭವಾಗುತ್ತಿದ್ದಂತೆಯೇ, ಜೈಲು ಅಧಿಕಾರಿಗಳು ದರ್ಶನ್ ಅವರ ಆರೋಗ್ಯ ತಪಾಸಣಾ ವರದಿಯನ್ನು ಇ-ಮೇಲ್ ಮೂಲಕ ಸೆಷನ್ಸ್ ಕೋರ್ಟ್‌ಗೆ ಸಲ್ಲಿಸಿದರು. ನ್ಯಾಯಾಲಯವು ಈ ವರದಿಯ ಪ್ರತಿಗಳನ್ನು ದರ್ಶನ್ ಪರ ವಕೀಲರು ಹಾಗೂ ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ಅವರಿಗೆ ಹಸ್ತಾಂತರಿಸಿತು.

Advertisement

Advertisement

ವಿಚಾರಣೆ ವೇಳೆ ಜೈಲಿನಲ್ಲಿ ನೀಡಲಾಗುತ್ತಿರುವ ಚಿಕಿತ್ಸೆಯ ಲೋಪಗಳ ಕುರಿತು ದರ್ಶನ್ ಪರ ವಕೀಲರು ನ್ಯಾಯಾಲಯದ ಗಮನ ಸೆಳೆದರು. ಜೈಲಿನಲ್ಲಿ ಕಳೆದ 7ನೇ ತಾರೀಖು ಮತ್ತು 20ನೇ ತಾರೀಖಿನಂದು ಮಾತ್ರ ಫಿಸಿಯೋಥೆರಪಿ ಮಾಡಿಸಿದ್ದಾರೆ.

Also Read

ರೇಣುಕಾಸ್ವಾಮಿ ಕೊಲೆ ಪ್ರಕರಣ: ಕೋರ್ಟ್‌ನಲ್ಲಿ ಉಲ್ಟಾ ಹೊಡೆದ ಇಬ್ಬರು ಸಾಕ್ಷಿಗಳು! ದರ್ಶನ್ ಕೊಂಚ ನಿರಾಳ

ಎರಡು ಚಿಕಿತ್ಸೆಗಳ ನಡುವೆ ಇಷ್ಟೊಂದು ದಿನಗಳ ಕಾಲ ಅಂತರವಿದೆ; ಇದಕ್ಕಾಗಿಯೇ ನಾವು ಚಿಕಿತ್ಸೆಗೆ ಅನುಮತಿ ಕೋರಿ ಅರ್ಜಿ ಹಾಕಿದ್ದೇವೆ. 12 ವರ್ಷಗಳ ಹಿಂದೆಯೇ ದರ್ಶನ್ ಬೆನ್ನಿಗೆ ಇಂಜೆಕ್ಷನ್ ತೆಗೆದುಕೊಂಡಿದ್ದರು ಮತ್ತು ಅಂದಿನಿಂದಲೂ ಇಂಜೆಕ್ಷನ್ ಪಡೆಯುತ್ತಾ ಬಂದಿದ್ದಾರೆ. ಈಗಲೂ ಅದರ ಅವಶ್ಯಕತೆ ಇದೆ ಎನಿಸುತ್ತಿದೆ ಎಂದು ವಕೀಲರು ವಾದಿಸಿದರು.

ಜೈಲಿನಲ್ಲಿ ಸರಿಯಾದ ವೈದ್ಯಕೀಯ ಸೌಲಭ್ಯ ಹಾಗೂ ಚಿಕಿತ್ಸೆ ಸಿಗುತ್ತಿಲ್ಲ. ತೀವ್ರ ಬೆನ್ನು ನೋವಿನಿಂದ ಬಳಲುತ್ತಿರುವ ದರ್ಶನ್ ಅವರಿಗೆ ಸೂಕ್ತ ಫಿಸಿಯೋಥೆರಪಿ ಚಿಕಿತ್ಸೆಯ ಅಗತ್ಯವಿದೆ. ಹೀಗಾಗಿ, ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಲು ಅನುಮತಿ ನೀಡಬೇಕು ಎಂದು ದರ್ಶನ್ ಪರ ವಕೀಲರು ನ್ಯಾಯಾಲಯಕ್ಕೆ ಮನವಿ ಮಾಡಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement