ಮದುವೆಗೆಂದು ಬೆಂಗಳೂರಿನಿಂದ ಶಿವಮೊಗ್ಗಕ್ಕೆ ಬಂದಿದ್ದ ನಾಲ್ವರು ಜಲಸಮಾಧಿ: ತುಂಗಾ ನದಿ ಬಗ್ಗೆ ಗೂಗಲ್ನಲ್ಲಿ ಸರ್ಚ್!
ಮದುವೆ ಸಮಾರಂಭದಲ್ಲಿ ಭಾಗಿಯಾಗಲು ಬೆಂಗಳೂರಿನಿಂದ ಶಿವಮೊಗ್ಗಕ್ಕೆ ತೆರಳಿದ್ದ ನಾಲ್ವರು ಯುವಕರು ತುಂಗಾ ನದಿಯಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ತೀರ್ಥಹಳ್ಳಿ ತಾಲೂಕಿನ ಮಹಿಷಿ ಗ್ರಾಮದ ಬಳಿ ನಡೆದಿದೆ.
ಶಿವಮೊಗ್ಗ: ಮದುವೆ ಸಮಾರಂಭದಲ್ಲಿ ಭಾಗಿಯಾಗಲು ಬೆಂಗಳೂರಿನಿಂದ ಶಿವಮೊಗ್ಗಕ್ಕೆ ತೆರಳಿದ್ದ ನಾಲ್ವರು ಯುವಕರು ತುಂಗಾ ನದಿಯಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ತೀರ್ಥಹಳ್ಳಿ ತಾಲೂಕಿನ ಮಹಿಷಿ ಗ್ರಾಮದ ಬಳಿ ನಡೆದಿದೆ. ಮೃತರನ್ನು ಬೆಂಗಳೂರು ಮೂಲದ 31 ವರ್ಷದ ಕಾರ್ತಿಕ್, 30 ವರ್ಷದ ಪವನ್, 19 ವರ್ಷದ ಚೇತನ್ ಹಾಗೂ 19 ವರ್ಷದ ನಕುಲ್ ಎಂದು ಗುರುತಿಸಲಾಗಿದೆ.
ಯುವಕರ ತಂಡ ಈಜಾಡುವ ಸಲುವಾಗಿ ಮೊದಲಿಗೆ ಅಕ್ಕಪಕ್ಕ ಯಾವುದಾದರೂ ನದಿ ಇರುವ ಬಗ್ಗೆ ಗೂಗಲ್ ನಲ್ಲಿ ಸರ್ಚ್ ಮಾಡಿದ್ದಾರೆ. ಮಹಿಷಿ ಗ್ರಾಮದ ಬಳಿ ತುಂಗಾ ನದಿ ಹರಿಯುವ ಬಗ್ಗೆ ತಿಳಿದುಕೊಂಡು ಈಜಾಡಲು ತೆರಳಿದ್ದಾರೆ. ಇನ್ನು ನದಿಗೆ ಬಿದ್ದಿದ್ದ ಸ್ನೇಹಿತನನ್ನು ರಕ್ಷಿಸಲು ಹೋಗಿ ಒಬ್ಬೊಬ್ಬರಂತೆ ಮೂವರು ಸಹ ಮುಳುಗಿದ್ದಾರೆ. ಅಗ್ನಿಶಾಮಕ ದಳದ ಸಿಬ್ಬಂದಿ ಹುಡುಕಾಟ ನಡೆಸಿದ್ದು ಒಬ್ಬನ ಮೃತದೇಹ ಪತ್ತೆಯಾಗಿದೆ.
ಬೆಂಗಳೂರಿನ ಇಟ್ಟಮಡುವಿನ ಪವನ್, ಕತ್ರಿಗುಪ್ಪೆಯ ಕಾರ್ತಿಕ್ ಮತ್ತು ತಲಘಟ್ಟಪುರದ ನಕುಲ್ ಕಾನೂನು ವ್ಯಾಸಂಗ ಮಾಡುತ್ತಿದ್ದು ಚೇತನ್ ಖಾಸಗಿ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದರು. ಮಾಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.