ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ರಾಜ್ಯ

ಬೆಂಗಳೂರಿನ ಸುಮಾರು 24 ಲಕ್ಷ ಆಸ್ತಿ ಮಾಲೀಕರಿಗೆ ಉಚಿತವಾಗಿ ವಾಟ್ಸಾಪ್ ಮೂಲಕ ಇ-ಖಾತಾ ವಿತರಣೆ: ಮಹೇಶ್ವರ್ ರಾವ್

ಆಸ್ತಿ ಮಾಲೀಕರು ತಮ್ಮ ಇ-ಖಾತಾ ಪ್ರಮಾಣಪತ್ರವನ್ನು PDF ರೂಪದಲ್ಲಿ, ವಿಶಿಷ್ಟ ePID ಸಂಖ್ಯೆಯೊಂದಿಗೆ ವಾಟ್ಸಾಪ್ ಮೂಲಕ ಪಡೆಯಲಿದ್ದಾರೆ.

ಸಾಂದರ್ಭಿಕ ಚಿತ್ರ
Nagaraja AB
Updated On : 26 Nov 2026, 3:26 pm

ಬೆಂಗಳೂರು: GBA ವ್ಯಾಪ್ತಿಯ 5 ನಗರ ಪಾಲಿಕೆಗಳಲ್ಲಿನ ಸುಮಾರು 24 ಲಕ್ಷ ಆಸ್ತಿ ಮಾಲೀಕರಿಗೆ ಉಚಿತವಾಗಿ ವಾಟ್ಸಾಪ್ ಮೂಲಕ ಇ-ಖಾತಾ ವಿತರಿಸಲಾಗುತ್ತಿದೆ ಎಂದು ಮುಖ್ಯ ಆಯುಕ್ತರಾದ ಮಹೇಶ್ವರ್ ರಾವ್ ರವರು ತಿಳಿಸಿದರು.

ಸಿಎಂ ಡಿ.ಕೆ. ಶಿವಕುಮಾರ್ ಅವರ ಆಶಯ ಮತ್ತು ನಿರ್ದೇಶನದಂತೆ ಹಾಗೂ ಮಾನ್ಯ ಬೆಂಗಳೂರು ನಗರಾಭಿವೃದ್ಧಿ ಸಚಿವರಾದ ಕೃಷ್ಣ ಬೈರೇಗೌಡ ಅವರ ಮಾರ್ಗದರ್ಶನದಲ್ಲಿ, ರಾಜ್ಯ ಸರ್ಕಾರದ 6ನೇ ಗ್ಯಾರಂಟಿಯಾದ ‘ಭೂ-ಗ್ಯಾರಂಟಿ – ನನ್ನ ಖಾತಾ, ನನ್ನ ಹಕ್ಕು’ ಅಭಿಯಾನದಡಿ ಗ್ರೇಟರ್ ಬೆಂಗಳೂರು ಪ್ರಾಧಿಕಾರ ಹಾಗೂ ಐದು ಬೆಂಗಳೂರು ನಗರ ಪಾಲಿಕೆಗಳ ವ್ಯಾಪ್ತಿಯ ಸುಮಾರು 24 ಲಕ್ಷ ಆಸ್ತಿ ಮಾಲೀಕರಿಗೆ ಇ-ಖಾತಾ ಪ್ರಮಾಣಪತ್ರಗಳನ್ನು ಉಚಿತವಾಗಿ ವಾಟ್ಸಾಪ್ ಮೂಲಕ ನೇರವಾಗಿ ತಲುಪಿಸಲಾಗುತ್ತಿದೆ.

ಆಸ್ತಿ ಮಾಲೀಕರು ತಮ್ಮ ಇ-ಖಾತಾ ಪ್ರಮಾಣಪತ್ರವನ್ನು PDF ರೂಪದಲ್ಲಿ, ವಿಶಿಷ್ಟ ePID ಸಂಖ್ಯೆಯೊಂದಿಗೆ ವಾಟ್ಸಾಪ್ ಮೂಲಕ ಪಡೆಯಲಿದ್ದಾರೆ. ಇದರಿಂದ ಸಾರ್ವಜನಿಕರು ಯಾವುದೇ ಸರ್ಕಾರಿ ಕಚೇರಿಗೆ ಭೇಟಿ ನೀಡದೆ ಅಥವಾ ಮಧ್ಯವರ್ತಿಗಳನ್ನು ಸಂಪರ್ಕಿಸದೆ ತಮ್ಮ ಇ-ಖಾತಾ ಪ್ರಮಾಣಪತ್ರವನ್ನು ಡೌನ್‌ಲೋಡ್ ಮಾಡಿಕೊಂಡು ಡಿಜಿಟಲ್ ರೂಪದಲ್ಲಿ ಸುರಕ್ಷಿತವಾಗಿರಿಸಿಕೊಳ್ಳಬಹುದು.

Advertisement

Advertisement

ವಾಟ್ಸಾಪ್ ಸಂದೇಶದೊಂದಿಗೆ ಜಿಬಿಎಯ ಅಧಿಕೃತ ಇ-ಆಸ್ತಿ ಪೋರ್ಟಲ್‌ ಆದ https://GBAeAasthi.karnataka.gov.in ಲಿಂಕ್ ಅನ್ನು ಸಹ ನೀಡಲಾಗಿದ್ದು, ಸಾರ್ವಜನಿಕರು ತಮ್ಮ ePID ಸಂಖ್ಯೆಯನ್ನು ಬಳಸಿ ಆನ್‌ಲೈನ್ ಮೂಲಕ ಇ-ಖಾತಾದಲ್ಲಿ ತಿದ್ದುಪಡಿ ಅಥವಾ ಮಾಲೀಕತ್ವ ಬದಲಾವಣೆ (ಮ್ಯುಟೇಷನ್) ಪ್ರಕ್ರಿಯೆಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.

ಸರ್ಕಾರಿ ಸೇವೆಗಳನ್ನು ನೇರವಾಗಿ ನಾಗರಿಕರ ಮನೆಬಾಗಿಲಿಗೆ ತಲುಪಿಸುವ ಈ ಉಪಕ್ರಮವು ಅನಗತ್ಯ ಕಚೇರಿ ಭೇಟಿಗಳನ್ನು ತಪ್ಪಿಸುವುದರ ಜೊತೆಗೆ, ಪಾರದರ್ಶಕ, ಸುಲಭ ಹಾಗೂ ನಾಗರಿಕ ಸ್ನೇಹಿ ಸೇವಾ ವಿತರಣೆಗೆ ಉತ್ತೇಜನ ನೀಡಲಿದೆ.

Also Read

GBA ಇ-ಖಾತಾ ಗೋಲ್‌ಮಾಲ್: 104 ಅಕ್ರಮ ಖಾತೆ ಸೃಷ್ಟಿ ಆರೋಪ; ಇಬ್ಬರು ಕಂದಾಯ ಅಧಿಕಾರಿಗಳ ಅಮಾನತು!

ಎಲ್ಲಾ ಆಸ್ತಿ ಮಾಲೀಕರು ತಮ್ಮ ವಾಟ್ಸಾಪ್ ಸಂದೇಶಗಳನ್ನು ಪರಿಶೀಲಿಸಿ, ಇ-ಖಾತಾ PDF ಪ್ರಮಾಣಪತ್ರವನ್ನು ಪಡೆದುಕೊಳ್ಳುವಂತೆ ಕೋರಲಾಗಿದೆ. ಈ ಸೇವೆಯು ಸಂಪೂರ್ಣ ಉಚಿತವಾಗಿದ್ದು, ಸಾರ್ವಜನಿಕರು ಯಾವುದೇ ಮಧ್ಯವರ್ತಿಗಳಿಗೆ ಹಣ ಪಾವತಿಸುವ ಅಗತ್ಯವಿರುವುದಿಲ್ಲ ಎಂದು ಅವರು ಹೇಳಿಕೆಯಲ್ಲಿ ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement