ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ರಾಜ್ಯ

ವೈಬ್ರೆಂಟ್ ಗುಜರಾತ್ 2027ಕ್ಕೆ ಸಿದ್ಧತೆ; ಬೆಂಗಳೂರಿನಲ್ಲಿ ರವೀಂದ್ರ ಜಡೇಜಾ ಪತ್ನಿ, ಹೂಡಿಕೆದಾರರಿಗೆ ರಿವಾಬಾ ಆಹ್ವಾನ!

ಈ ರೋಡ್ ಶೋನಲ್ಲಿ ಗುಜರಾತ್ ಸಚಿವೆ ರಿವಾಬಾ ಜಡೇಜಾ ಅವರು ರೋಡ್‌ಶೋಗೆ ಅಧ್ಯಕ್ಷತೆ ವಹಿಸಿ, ವಿವಿಧ ಕೈಗಾರಿಕಾ ವಲಯಗಳ ಪ್ರಮುಖರು ಹಾಗೂ ಉದ್ಯಮಿಗಳೊಂದಿಗೆ ಮಾತುಕತೆ ನಡೆಸಿದರು.

ರೋಡ್ ಶೋ ಕಾರ್ಯಕ್ರಮದಲ್ಲಿ ರಿವಾಬಾ ಜಡೇಜಾ
Srinivasa Murthy VN
Updated On : 26 Nov 2026, 9:52 pm

ಬೆಂಗಳೂರು: ಗುಜರಾತ್‌ನಲ್ಲಿ ಕೈಗಾರಿಕೆ ಮತ್ತು ಹೂಡಿಕೆಗೆ ಹೆಚ್ಚಿನ ಅವಕಾಶಗಳನ್ನು ಸೃಷ್ಟಿಸುವ ಉದ್ದೇಶದಿಂದ ಆಯೋಜಿಸಲಾಗುತ್ತಿರುವ 'ವೈಬ್ರೆಂಟ್ ಗುಜರಾತ್ ಜಾಗತಿಕ ಶೃಂಗಸಭೆ 2027'ರ ಪ್ರಚಾರ ಕಾರ್ಯಕ್ರಮದಲ್ಲಿ ಕ್ರಿಕೆಟಿಗ ರವೀಂದ್ರ ಜಡೇಜಾ ಪತ್ನಿ ಹಾಗೂ ಗುಜರಾತ್ ಸಚಿವೆ ರಿವಾಬಾ ಜಡೇಜಾ ಪಾಲ್ಗೊಂಡಿದ್ದರು.

ಕಾರ್ಯಕ್ರಮದ ಭಾಗವಾಗಿ ಬೆಂಗಳೂರಿನಲ್ಲಿ ರೋಡ್‌ಶೋ ನಡೆಸಲಾಯಿತು. ಈ ರೋಡ್ ಶೋನಲ್ಲಿ ಗುಜರಾತ್ ಸಚಿವೆ ರಿವಾಬಾ ಜಡೇಜಾ ಅವರು ರೋಡ್‌ಶೋಗೆ ಅಧ್ಯಕ್ಷತೆ ವಹಿಸಿ, ವಿವಿಧ ಕೈಗಾರಿಕಾ ವಲಯಗಳ ಪ್ರಮುಖರು ಹಾಗೂ ಉದ್ಯಮಿಗಳೊಂದಿಗೆ ಮಾತುಕತೆ ನಡೆಸಿದರು.

ಈ ಸಂದರ್ಭದಲ್ಲಿ ಗುಜರಾತ್‌ನಲ್ಲಿ ಹೂಡಿಕೆ ಮಾಡಲು ಇರುವ ಅವಕಾಶಗಳು, ಕೈಗಾರಿಕಾ ಬೆಳವಣಿಗೆ ಮತ್ತು ರಾಜ್ಯದ ಅಭಿವೃದ್ಧಿ ಯೋಜನೆಗಳ ಕುರಿತು ಮಾಹಿತಿ ಹಂಚಿಕೊಂಡರು.

Advertisement

Advertisement

ಕಾರ್ಯಕ್ರಮದಲ್ಲಿ ಮಾತನಾಡಿದ ರಿವಾಬಾ ಜಡೇಜಾ, ಪ್ರಧಾನಿ ನರೇಂದ್ರ ಮೋದಿ ಅವರ ನಾಯಕತ್ವದಲ್ಲಿ ಭಾರತ ಜಾಗತಿಕ ಆರ್ಥಿಕತೆಯಲ್ಲಿ ಮಹತ್ವದ ಪಾತ್ರ ವಹಿಸುತ್ತಿದೆ. ಕೇವಲ ಜಾಗತಿಕ ಆರ್ಥಿಕ ವ್ಯವಸ್ಥೆಯ ಭಾಗವಾಗಿರುವುದಷ್ಟೇ ಅಲ್ಲದೆ, ಜಾಗತಿಕ ಮಟ್ಟದ ಆರ್ಥಿಕ ಚರ್ಚೆಗಳ ದಿಕ್ಕನ್ನೂ ನಿರ್ಧರಿಸುತ್ತಿದೆ ಎಂದು ಹೇಳಿದರು.

Also Read

UP Elections: 'ನಮ್ಮ ಗುರಿ ಯೋಗಿ ಆದಿತ್ಯಾನಾಥ್, ಮೋದಿ', 'ಅಹಂಕಾರ ಬಿಟ್ಟು ಒಗ್ಗಟ್ಟಿನಿಂದ ಕೆಲಸ ಮಾಡಿ': SP ನಾಯಕನಿಗೆ ಮಲ್ಲಿಕಾರ್ಜುನ ಖರ್ಗೆ ಫುಲ್ ಕ್ಲಾಸ್‌-Video

ದೂರದೃಷ್ಟಿಯ ನಾಯಕತ್ವ

"ಪ್ರಧಾನಿ ನರೇಂದ್ರ ಮೋದಿ ಅವರ ದೂರದೃಷ್ಟಿಯ ನಾಯಕತ್ವದಲ್ಲಿ ಭಾರತ ಇಂದು ಜಾಗತಿಕ ಆರ್ಥಿಕತೆಯಲ್ಲಿ ಕೇವಲ ಭಾಗವಹಿಸುತ್ತಿಲ್ಲ. ಜಾಗತಿಕ ಮಟ್ಟದ ಚರ್ಚೆಗಳನ್ನೇ ರೂಪಿಸುತ್ತಿದೆ. ಭಾರತದ ಅಭಿವೃದ್ಧಿಗೆ ಕಾರಣವಾಗುತ್ತಿರುವ ಹಲವು ಮಹತ್ವದ ಆಲೋಚನೆಗಳು ಮೊದಲು ಹುಟ್ಟಿಕೊಂಡು ಕಾರ್ಯರೂಪಕ್ಕೆ ಬಂದಿರುವುದು ಗುಜರಾತ್‌ನಲ್ಲಿ ಎಂಬ ಹೆಮ್ಮೆ ನಮಗಿದೆ" ಎಂದು ಅವರು ತಿಳಿಸಿದರು.

ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಅವರ ಸಮರ್ಥ ನಾಯಕತ್ವದಲ್ಲಿ ಈ ಅಭಿವೃದ್ಧಿಯ ಪರಂಪರೆಯನ್ನು ಮುಂದುವರಿಸಲಾಗುತ್ತಿದೆ. ಅಭಿವೃದ್ಧಿ ಹೊಂದಿದ ಭಾರತದ ನಿರ್ಮಾಣಕ್ಕೆ ಪೂರಕವಾಗಿ ಅಭಿವೃದ್ಧಿ ಹೊಂದಿದ ಗುಜರಾತ್ ನಿರ್ಮಿಸುವುದು ರಾಜ್ಯ ಸರ್ಕಾರದ ಮುಖ್ಯ ಗುರಿಯಾಗಿದೆ ಎಂದು ರಿವಾಬಾ ಹೇಳಿದರು.

ಈ ರೋಡ್‌ಶೋ ಮೂಲಕ ಗುಜರಾತ್‌ನಲ್ಲಿ ಹೂಡಿಕೆ ಮಾಡಲು ಉದ್ಯಮಿಗಳಿಗೆ ಆಹ್ವಾನ ನೀಡಲಾಗಿದ್ದು, ರಾಜ್ಯದ ಕೈಗಾರಿಕಾ ಸಾಮರ್ಥ್ಯ ಮತ್ತು ಹೂಡಿಕೆ ಅವಕಾಶಗಳನ್ನು ಪರಿಚಯಿಸಲಾಯಿತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement