ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ರಾಜ್ಯ

ಬೆಂಗಳೂರಿನಲ್ಲಿ ಶೂಟೌಟ್: ಲಿಖಿತ್ ಗೌಡಗೆ ಗುಂಡಿಕ್ಕಿ ಹತ್ಯೆ, ಇತರ ಇಬ್ಬರಿಗೆ ಗಾಯ!

ಆಶ್ರಯ ಮನೆಗಳ ಹಂಚಿಕೆ ವಿಚಾರವಾಗಿ ನಡೆದ ಗಲಾಟೆ ಕೊಲೆಯಲ್ಲಿ ಅಂತ್ಯವಾಗಿದ್ದು, ಮೃತ ಯುವಕನನ್ನು ಲಿಖಿತ್ ಗೌಡ ಎಂದು ಗುರುತಿಸಲಾಗಿದೆ.

ಲಿಖಿತ್ ಗೌಡ
Lingaraj Badiger
Updated On : 27 Nov 2026, 12:37 pm

ಬೆಂಗಳೂರು: ಹಾಡಹಗಲೇ ಯುವಕನೊಬ್ಬನನ್ನು ಗುಂಡಿಕ್ಕಿ ಹತ್ಯೆ ಮಾಡಿರುವ ಆಘಾತಕಾರಿ ಘಟನೆ ಶುಕ್ರವಾರ ಬೆಂಗಳೂರು ಹೊರವಯಲದ ಹೊಸಕೋಟೆ ಸಮೀಪದ ಸೋಲೂರಿನಲ್ಲಿ ನಡೆದಿದೆ.

ಆಶ್ರಯ ಮನೆಗಳ ಹಂಚಿಕೆ ವಿಚಾರವಾಗಿ ನಡೆದ ಗಲಾಟೆ ಕೊಲೆಯಲ್ಲಿ ಅಂತ್ಯವಾಗಿದ್ದು, ಮೃತ ಯುವಕನನ್ನು ಲಿಖಿತ್ ಗೌಡ ಎಂದು ಗುರುತಿಸಲಾಗಿದೆ. ಅಲ್ಲದೆ ಗುಂಡಿನ ದಾಳಿಯಲ್ಲಿ ಇಬ್ಬರು ಗಾಯಗೊಂಡಿದ್ದಾರೆ. ಗುಂಡಿನ ದಾಳಿ ನಡೆಸಿದ ರಮೇಶ್(50)ನನ್ನು ಪೊಲೀಸರು ಬಂಧಿಸಿದ್ದಾರೆ.

ಆಶ್ರಯ ಮನೆಗಳ ನಿರ್ಮಾಣಕ್ಕೆ ಜಮೀನು ಗುರುತು ಮಾಡುವ ಕಾರ್ಯ ನಡೆಸಲಾಗುತ್ತಿತ್ತು. ಈ ವೇಳೆ ಸರ್ಕಾರಿ ಜಮೀನಿನ ಸುಮಾರು 10 ಗುಂಟೆ ಜಾಗವನ್ನು ಆರೋಪಿ ರಮೇಶ್‌ ಒತ್ತುವರಿ ಮಾಡಿಕೊಂಡಿದ್ದರು. ಹೀಗಾಗಿ ಒತ್ತುವರಿ ತೆರವಿಗೆ ಹೋಗಿದ್ದ ವೇಳೆ ರಮೇಶ್ ಮತ್ತು ಲಿಖಿತ್ ಗೌಡ ನಡುವೆ ಗಲಾಟೆ ನಡೆದಿದೆ. ಈ ವೇಳೆ ಲೈಸೆನ್ಡ್ ಗನ್ ನಿಂದ ರಮೇಶ್‌, ಲಿಖಿತ್ ಗೌಡ ಮೇಲೆ ಗುಂಡು ಹಾರಿಸಿದ್ದಾನೆ.

Advertisement

Advertisement

Also Read

ಡಾಬಾದಲ್ಲಿ ಶೂಟೌಟ್: ಊಟ ಮಾಡುತ್ತಿದ್ದ ನಾಲ್ವರು ಯುವಕರನ್ನು ಗುಂಡಿಕ್ಕಿ ಕೊಂದ ದುಷ್ಕರ್ಮಿಗಳು!

ಘಟನೆಯಲ್ಲಿ ಲಿಖಿತ್‌ ಗೌಡ ಸ್ಥಳದಲ್ಲೇ ಮೃತಪಟ್ಟಿದ್ದು, ಇತರ ಇಬ್ಬರು ಗಾಯಗೊಂಡಿದ್ದಾರೆ. ಸ್ಥಳಕ್ಕೆ ಭೇಟಿ ನೀಡಿದ ಹೊಸಕೋಟೆ ಪೊಲೀಸರು ಆರೋಪಿ ರಮೇಶ್‌ನನ್ನ ಬಂಧಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement