ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ರಾಜ್ಯ

ಆಸ್ತಿ ಕಲಹ: ಅತ್ತೆ, ಅಳಿಯನನ್ನು ಕೊಡಲಿಯಿಂದ ಕೊಚ್ಚಿ ಬರ್ಬರ ಹತ್ಯೆ; ಬೆಚ್ಚಿಬಿದ್ದ ಯರಗಟ್ಟಿ!

ಆಸ್ತಿ ವಿವಾದದ ಹಿನ್ನೆಲೆಯಲ್ಲಿ ಅತ್ತಿ ಹಾಗೂ ಅಳಿಯನನ್ನು ಕೊಡಲಿಯಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಲಾಗಿದೆ.

ಸ್ಥಳದಲ್ಲಿ ಪೊಲೀಸರು
Lingaraj Badiger
Updated On : 27 Nov 2026, 10:49 am

ಬೆಳಗಾವಿ: ಆಸ್ತಿ ಕಲಹಕ್ಕೆ ಇಬ್ಬರು ಬಲಿಯಾಗಿರುವ ಆಘಾತಕಾರಿ ಘಟನೆ ಬೆಳಗಾವಿ ಜಿಲ್ಲೆಯ ಯರಗಟ್ಟಿ ತಾಲೂಕಿನ ಜೀವಾಪುರ ಗ್ರಾಮದಲ್ಲಿ ನಡೆದಿದೆ.

ಆಸ್ತಿ ವಿವಾದದ ಹಿನ್ನೆಲೆಯಲ್ಲಿ ಅತ್ತಿ ಹಾಗೂ ಅಳಿಯನನ್ನು ಕೊಡಲಿಯಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಲಾಗಿದೆ. ರಮೇಶ್ ಹಣಮಂತ ನಾಯ್ಕರ್(29) ಹಾಗೂ ಅವರ ಅತ್ತೆ ಬಸವ್ವ ಭೀಮಪ್ಪ ರಾಯ್ಕರ್ ಕೊಲೆಯಾದ ದುರ್ದೈವಿಗಳು.

ಆಸ್ತಿ ಹಂಚಿಕೆ ವಿಚಾರವಾಗಿ ಆರಂಭವಾದ ಜಗಳ ವಿಕೋಪಕ್ಕೆ ತಿರುಗಿ ಇಬ್ಬರನ್ನು ಹತ್ಯೆ ಮಾಡಲಾಗಿದೆ ಎನ್ನಲಾಗಿದೆ.

Advertisement

Advertisement

Also Read

ಡಾಬಾದಲ್ಲಿ ಶೂಟೌಟ್: ಊಟ ಮಾಡುತ್ತಿದ್ದ ನಾಲ್ವರು ಯುವಕರನ್ನು ಗುಂಡಿಕ್ಕಿ ಕೊಂದ ದುಷ್ಕರ್ಮಿಗಳು!

ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಡಿವೈಎಸ್ ಪಿ ಮಡಿವಾಳರ ಹಾಗೂ ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಒಂದೇ ಗ್ರಾಮದಲ್ಲಿ ಜೋಡಿ ಕೊಲೆಯಾಗಿರುವುದರಿಂದ ಜೀವಾಪುರ ಗ್ರಾಮದಲ್ಲಿ ತೀವ್ರ ಆತಂಕ ಮೂಡಿಸಿದೆ.

ಜೋಡಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ಆರೋಪಿಗಳ ಬಂಧನಕ್ಕೆ ಬಲೆ ಬೀಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement