ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ರಾಜ್ಯ

ಎಲ್ಲಿತ್ತು ಸನಾತನ ಧರ್ಮ? ಸಾವರ್ಕರ್ ಕೊಡುಗೆ ಏನು? ಸಚಿವ ವಿಜಯಾನಂದ ಕಾಶಪ್ಪನವರ್ ವಿವಾದಾತ್ಮಕ ಹೇಳಿಕೆ; 2029ಕ್ಕೆ ರಾಹುಲ್ ಗಾಂಧಿ ಪ್ರಧಾನಿ ಎಂದು ಭವಿಷ್ಯ!

ಬಾಗಲಕೋಟೆ ಜಿಲ್ಲಾ ಉಸ್ತುವಾರಿ ಸಚಿವ ವಿಜಯಾನಂದ ಕಾಶಪ್ಪನವರ್ ಅವರು ಸನಾತನ ಧರ್ಮ ಮತ್ತು ವೀರ ಸಾವರ್ಕರ್ ಕುರಿತು ವಿವಾದಾತ್ಮಕ ಹೇಳಿಕೆ ನೀಡಿದ್ದು, 2029ರ ಲೋಕಸಭಾ ಚುನಾವಣೆಯಲ್ಲಿ ರಾಹುಲ್ ಗಾಂಧಿಯವರೇ ಪ್ರಧಾನಿಯಾಗುತ್ತಾರೆ ಎಂದು ಭವಿಷ್ಯ ನುಡಿದಿದ್ದಾರೆ. ಆ ಕುರಿತ ವರದಿ ಇಲ್ಲಿದೆ:

ಸಣ್ಣ ಕೈಗಾರಿಕೆ ಹಾಗೂ ಬಾಗಲಕೋಟೆ ಜಿಲ್ಲಾ ಉಸ್ತುವಾರಿ ಸಚಿವ ವಿಜಯಾನಂದ ಕಾಶಪ್ಪನವರ್ — Online Desk
Hruthin H P
Updated On : 29 Nov 2026, 8:07 pm

ಬಾಗಲಕೋಟೆ: ಸಣ್ಣ ಕೈಗಾರಿಕೆ ಹಾಗೂ ಬಾಗಲಕೋಟೆ ಜಿಲ್ಲಾ ಉಸ್ತುವಾರಿ ಸಚಿವ ವಿಜಯಾನಂದ ಕಾಶಪ್ಪನವರ್ ಅವರು ಸನಾತನ ಧರ್ಮ, ವೀರ ಸಾವರ್ಕರ್ ಮತ್ತು ಕೇಂದ್ರ ಸರ್ಕಾರದ ಕ್ಷೇತ್ರ ಮರುವಿಂಗಡಣೆ ಮಸೂದೆಯ ಕುರಿತು ನೀಡಿರುವ ಹೇಳಿಕೆಗಳು ಇದೀಗ ರಾಜ್ಯ ರಾಜಕಾರಣದಲ್ಲಿ ಭಾರಿ ವಿವಾದ ಮತ್ತು ಸಂಚಲನ ಸೃಷ್ಟಿಸಿವೆ. ಬಾಗಲಕೋಟೆಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಎಲ್ಲಿತ್ತು ಸನಾತನ ಧರ್ಮ ಎಂದು ಪ್ರಶ್ನಿಸುವ ಮೂಲಕ ಹೊಸ ಚರ್ಚೆಗೆ ನಾಂದಿ ಹಾಡಿದ್ದಾರೆ. ಅಷ್ಟೇ ಅಲ್ಲದೆ, 2029ರ ಲೋಕಸಭಾ ಚುನಾವಣೆಯಲ್ಲಿ ರಾಹುಲ್ ಗಾಂಧಿಯವರೇ ದೇಶದ ಪ್ರಧಾನಮಂತ್ರಿಯಾಗುತ್ತಾರೆ ಎಂದು ಬರೆದಿಟ್ಟುಕೊಳ್ಳುವಂತೆ ಭವಿಷ್ಯ ನುಡಿದಿದ್ದಾರೆ. ಆ ಕುರಿತ ವರದಿ ಇಲ್ಲಿದೆ:

ಎಲ್ಲಿತ್ತು ಸನಾತನ ಧರ್ಮ?

ಬಿಜೆಪಿ ನಾಯಕರ ಸೈದ್ಧಾಂತಿಕ ನಿಲುವುಗಳನ್ನು ಪ್ರಶ್ನಿಸಿದ ಸಚಿವರು, "ಎಲ್ಲಿತ್ತು ಸನಾತನ ಧರ್ಮ? ಈ ಧರ್ಮಕ್ಕೆ ಏನು ಆಧಾರವಿದೆ? ಯಾವುದೇ ಆಧಾರವಿಲ್ಲ" ಎಂದು ಹೇಳಿದ್ದಾರೆ. ನಾವು 12ನೇ ಶತಮಾನದ ಸಮಾಜ ಸುಧಾರಕ ಬಸವಣ್ಣನವರ ಸಮಾನತೆಯ ತತ್ವಗಳ ಬಗ್ಗೆ ಮಾತನಾಡಿದರೆ, ಬಿಜೆಪಿಯವರು ಸಾವರ್ಕರ್ ಬಗ್ಗೆ ಮಾತನಾಡುತ್ತಾರೆ ಎಂದು ಟೀಕಿಸಿದ ಅವರು, "ದೇಶಕ್ಕಾಗಿ ಸಾವರ್ಕರ್ ಏನು ಮಾಡಿದ್ದಾರೆ?" ಎಂದು ಪ್ರಶ್ನಿಸಿ ವಿವಾದದ ಕಿಡಿ ಹೊತ್ತಿಸಿದ್ದಾರೆ. ಜೊತೆಗೆ, ಸಂಸತ್ತಿನ ವಿಶೇಷ ಅಧಿವೇಶನದಲ್ಲಿ ಮಂಡನೆಯಾಗಲಿರುವ ಕ್ಷೇತ್ರ ಮರುವಿಂಗಡಣೆ ಮಸೂದೆಯನ್ನು ವಿರೋಧಿಸಿರುವ ಕಾಶಪ್ಪನವರ್, ಜನಸಂಖ್ಯೆ ನಿಯಂತ್ರಣವನ್ನು ಯಶಸ್ವಿಯಾಗಿ ಜಾರಿಗೊಳಿಸಿರುವ ಕರ್ನಾಟಕ ಸೇರಿದಂತೆ ದಕ್ಷಿಣ ಭಾರತದ ರಾಜ್ಯಗಳಿಗೆ ಈ ಪ್ರಕ್ರಿಯೆಯಿಂದ ಯಾವುದೇ ಕಾರಣಕ್ಕೂ ಅನ್ಯಾಯವಾಗಬಾರದು ಎಂದು ಎಚ್ಚರಿಸಿದ್ದಾರೆ.

Advertisement

Advertisement

2029ಕ್ಕೆ ರಾಹುಲ್ ಗಾಂಧಿಯೇ ಪ್ರಧಾನಿ

ಕೇಂದ್ರ ಸರ್ಕಾರದ ನೀತಿಗಳು ಜನವಿರೋಧಿಯಾಗಿವೆ ಎಂದು ಆರೋಪಿಸಿದ ಅವರು, ರಾಜ್ಯದಲ್ಲಿ 2028ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರಲಿದೆ ಮತ್ತು 2029ರ ಲೋಕಸಭಾ ಚುನಾವಣೆಯಲ್ಲಿ ರಾಹುಲ್ ಗಾಂಧಿಯವರೇ ದೇಶದ ಪ್ರಧಾನಿಯಾಗುತ್ತಾರೆ, ಬರೆದಿಟ್ಟುಕೊಳ್ಳಿ ಎಂದು ಭವಿಷ್ಯ ನುಡಿದಿದ್ದಾರೆ.

Also Read

ಹೈಕಮಾಂಡ್ ವಿರೋಧದ ನಡುವೆಯೇ ಮೋದಿ ಸರ್ಕಾರದ ಮಸೂದೆಗೆ ಜೈ ಎಂದ ಕೈ ಶಾಸಕ; ಕ್ಷೇತ್ರ ಮರುವಿಂಗಡಣೆ ಮಸೂದೆ ಸ್ವಾಗತಿಸಿದ ಕೋಲಾರ ಶಾಸಕ ಕೊತ್ತೂರು ಮಂಜುನಾಥ್

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement