ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ರಾಜ್ಯ

ವಿದ್ಯಾರ್ಥಿಗಳ ಮಾನಸಿಕ, ದೈಹಿಕ ಸಾಮರ್ಥ್ಯವನ್ನು ಸಮನ್ವಯಗೊಳಿಸುವಲ್ಲಿ ಕ್ರೀಡಾಕೂಟಗಳು ಮಹತ್ವದ ಪಾತ್ರ- ಸಚಿವ ಮಧು ಬಂಗಾರಪ್ಪ

ಶಾಲಾ ಶಿಕ್ಷಣ ಇಲಾಖೆಯ ಎಲ್ಲಾ ಕ್ರೀಡಾಕೂಟಗಳಿಗೆ ಸರ್ಕಾರದ ವತಿಯಿಂದ ಆರ್ಥಿಕ ಸಹಕಾರ ನೀಡಲು ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವ ಮಧು ಬಂಗಾರಪ್ಪ ತಿಳಿಸಿದರು.

ಸಚಿವ ಮಧು ಬಂಗಾರಪ್ಪ, ದಿನೇಶ್ ಗುಂಡೂರಾವ್ ಮತ್ತಿತರರು
Nagaraja AB
Updated On : 29 Nov 2026, 9:13 pm

ಬೆಂಗಳೂರು: ವಿದ್ಯಾರ್ಥಿಗಳ ಮಾನಸಿಕ, ದೈಹಿಕ ಸಾಮರ್ಥ್ಯವನ್ನು ಸಮನ್ವಯಗೊಳಿಸುವಲ್ಲಿ ಕ್ರೀಡಾಕೂಟಗಳು ಮಹತ್ವದ ಪಾತ್ರ ವಹಿಸುತ್ತವೆ ಎಂದು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಭಾನುವಾರ ಹೇಳಿದರು.

ಶೇಷಾದ್ರಿಪುರಂ ಸಂಯುಕ್ತ ಪದವಿ ಪೂರ್ವ ಕಾಲೇಜು, ಆರ್. ಗುಂಡೂರಾವ್ ಫೌಂಡೇಶನ್ ಹಾಗೂ ಗೋಲ್ಡನ್ ಬಾಯ್ಸ್ ವಾಲಿಬಾಲ್ ಕ್ಲಬ್ ಸಹಯೋಗದಲ್ಲಿ ಸಿರೂರು ಪಾರ್ಕ್ ನ ಆರ್ ಗುಂಡೂರಾವ್ ಕ್ರೀಡಾ ಸಂಕೀರ್ಣದಲ್ಲಿ ಆಯೋಜಿಸಲಾಗಿದ್ದ ರಾಜ್ಯಮಟ್ಟದ ಪದವಿ ಪೂರ್ವ ಕಾಲೇಜುಗಳ ಬಾಲಕರ ವಾಲಿಬಾಲ್ ಪಂದ್ಯಾವಳಿಯ ಸಮಾರೋಪ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದ ಸಚಿವರು, ಶಾಲಾ ಶಿಕ್ಷಣ ಇಲಾಖೆಯ ಎಲ್ಲಾ ಕ್ರೀಡಾಕೂಟಗಳಿಗೆ ಸರ್ಕಾರದ ವತಿಯಿಂದ ಆರ್ಥಿಕ ಸಹಕಾರ ನೀಡಲು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಶಾಸಕ ದಿನೇಶ್ ಗುಂಡೂರಾವ್ ಮಾತನಾಡಿ, ಕಳೆದ 60 ವರ್ಷಗಳಿಂದ ಗೋಲ್ಡನ್ ಬಾಯ್ಸ್ ವಾಲಿಬಾಲ್ ಸಂಘದ ಯುವಕರು ವಾಲಿಬಾಲ್ ಕ್ರೀಡೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ. ರಾಜ್ಯ, ರಾಷ್ಟ್ರ ಮತ್ತು ಅಂತಾರಾಷ್ಟ್ರೀಯ ಮಟ್ಟದ ಪಂದ್ಯಾವಳಿಗಳಲ್ಲಿ ಭಾಗವಹಿಸಿ ಕ್ರೀಡಾ ಕ್ಷೇತ್ರದಲ್ಲಿ ಹೆಸರು ಗಳಿಸುವುದರ ಜೊತೆಗೆ ವಿವಿಧ ಪ್ರತಿಷ್ಠಿತ ಹುದ್ದೆಗಳನ್ನು ಅಲಂಕರಿಸಿದ್ದಾರೆ. ಮುಂದಿನ ದಿನಗಳಲ್ಲಿ ರಾಷ್ಟ್ರಮಟ್ಟದ ಕ್ರೀಡಾಕೂಟಗಳನ್ನು ಆಯೋಜಿಸಲು ಆರ್ ಗುಂಡೂರಾವ್ ಫೌಂಡೇಶನ್ ಉತ್ಸುಕವಾಗಿದೆ ಎಂದರು.

Advertisement

Advertisement

ಆದಿ ಚುಂಚನಗಿರಿ ಮಠದ ಪ್ರಸನ್ನನಾಥ ಸ್ವಾಮೀಜಿ ಮಾತನಾಡಿ, 19, 17 ಮತ್ತು 14 ವರ್ಷ ವಯೋಮಿತಿಯ ಕ್ರೀಡಾಪಟುಗಳಿಗೆ ಸಂಬಂಧಿಸಿದ ರಾಜ್ಯದ ಕ್ರೀಡಾ ನಿಯಮಗಳಲ್ಲಿ ಅಮೂಲಾಗ್ರ ಬದಲಾವಣೆಗಳ ಅಗತ್ಯವಿದೆ. ಯುವ ಕ್ರೀಡಾಪಟುಗಳ ಪ್ರತಿಭೆ ಹಾಗೂ ಸಾಮರ್ಥ್ಯಕ್ಕೆ ಅನುಕೂಲವಾಗುವ ರೀತಿಯಲ್ಲಿ ನಿಯಮಗಳನ್ನು ಪರಿಷ್ಕರಿಸಲು ಸರ್ಕಾರ ಗಮನ ಹರಿಸಬೇಕು ಎಂದು ಒತ್ತಾಯಿಸಿದರು.

Also Read

ಕ್ಲಸ್ಟರ್ ಕಿಚನ್ ಸ್ಥಾಪಿಸುವ ಪ್ರಶ್ನೆಯೇ ಇಲ್ಲ: ಬಿಸಿಯೂಟ ನೌಕರರಿಗೆ ಸಚಿವ ಮಧು ಬಂಗಾರಪ್ಪ ಭರವಸೆ

ಶೇಷಾದ್ರಿಪುರಂ ಶಿಕ್ಷಣ ಸಂಸ್ಥೆಗಳ ಸಮೂಹದ ಗೌರವ ಪ್ರಧಾನ ಕಾರ್ಯದರ್ಶಿ ನಾಡೋಜಡಾ. ವೂಡೇ ಪಿ.ಕೃಷ್ಣ ಮಾತನಾಡಿ ವಿದ್ಯಾರ್ಥಿಗಳ ಸರ್ವತೋಮುಖ ಅಭಿವೃದ್ಧಿಯಲ್ಲಿ ಶೈಕ್ಷಣಿಕ ಚಟುವಟಿಕಗಳ ಜೊತೆಗೆ ಕ್ರೀಡೆಗೂ ಹೆಚ್ಚಿನ ಆದ್ಯತೆ ನೀಡಬೇಕು ಎಂದರು.

ರಾಜ್ಯದ ವಿವಿಧ ಜಿಲ್ಲೆಗಳಿಂದ ಆಗಮಿಸಿದ ಸುಮಾರು 33 ತಂಡಗಳು ಕ್ರೀಡಾಕೂಟದಲ್ಲಿ ಪಾಲ್ಗೊಂಡವು. ಅತ್ಯಂತ ರೋಚಕ ಹಾಗೂ ತೀವ್ರ ಪೈಪೋಟಿಯಿಂದ ಕೂಡಿದ ಅಂತಿಮ ಪಂದ್ಯದಲ್ಲಿ ದಕ್ಷಿಣ ಕನ್ನಡ ಬಾಲಕರ ತಂಡ ಅತ್ಯುತ್ತಮ ಪ್ರದರ್ಶನ ನೀಡಿ ಪ್ರಥಮ ಪ್ರಶಸ್ತಿ ಪಡೆದುಕೊಂಡಿತು. ಬೆಳಗಾವಿ ಜಿಲ್ಲಾ ತಂಡ, ಉಡುಪಿ ಜಿಲ್ಲಾ ತಂಡ ಹಾಗೂ ಹಾಗೂ ಅತಿಥೇಯ ಬೆಂಗಳೂರು ಉತ್ತರ ಜಿಲ್ಲಾ ತಂಡ ಕ್ರಮವಾಗಿ ದ್ವಿತೀಯ, ತೃತೀಯ ಹಾಗೂ ನಾಲ್ಕನೇ ಸ್ಥಾನ ಗಳಿಸಿಕೊಂಡವು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement