ಮುಖ್ಯ ಚುನಾವಣಾಧಿಕಾರಿಗಳನ್ನು ಭೇಟಿ ಮಾಡಿದ ಸಿಎಂ ಡಿ ಕೆ ಶಿವಕುಮಾರ್ ಮತ್ತು ಸಂಪುಟ ಸಹೋದ್ಯೋಗಿಗಳು ನಂತರ ಧರಣಿ ಕುಳಿತರು 
ರಾಜ್ಯ

'FIR ಆಗೋ ತನಕ ಇಲ್ಲಿಂದ ಕದಲೋದಿಲ್ಲ': ಸಿಎಂ ಡಿ ಕೆ ಶಿವಕುಮಾರ್ ಪಟ್ಟು, ಧರಣಿ, CEO ಕಚೇರಿ ಮುಂದೆ ಹೈಡ್ರಾಮಾ; Video

ಬಿಜೆಪಿ, ಜೆಡಿಎಸ್ ನಾಯಕರು, ಕಾರ್ಯಕರ್ತರಿಂದ ಅಕ್ರಮ ನಡೆದಿದೆ ಎಂದು ಆರೋಪಿಸಿರುವ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಇಂದು ತಮ್ಮ ಗೃಹ ಕಚೇರಿ ಕೃಷ್ಣಾದಲ್ಲಿ ಈ ಬಗ್ಗೆ ಸುದೀರ್ಘ ಸುದ್ದಿಗೋಷ್ಠಿ ನಡೆಸಿದ ಬಳಿಕ ಸಚಿವರೊಂದಿಗೆ ರಾಜ್ಯ ಚುನಾವಣಾ ಆಯೋಗದ ಕಚೇರಿಗೆ ತೆರಳಿದರು.

ಕರ್ನಾಟಕದಲ್ಲಿ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ಹೆಸರುಗಳನ್ನು ಅಳಿಸಲು ಕೆಲವರು ಹಲವು ಅರ್ಜಿಗಳನ್ನು ಸಲ್ಲಿಸುವ ಮೂಲಕ ‘ಸಂಚು’ ನಡೆಸುತ್ತಿದ್ದಾರೆ. ಕರ್ನಾಟಕದಲ್ಲಿ ಸುಮಾರು 50 ಲಕ್ಷ ಮತದಾರರನ್ನು ಮತಪಟ್ಟಿಯಿಂದ ಡಿಲಿಟ್ ಮಾಡುವ ಷಡ್ಯಂತ್ರ ನಡೆದಿದೆ.

ಬಿಜೆಪಿ, ಜೆಡಿಎಸ್ ನಾಯಕರು, ಕಾರ್ಯಕರ್ತರಿಂದ ಅಕ್ರಮ ನಡೆದಿದೆ ಎಂದು ಆರೋಪಿಸಿರುವ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಇಂದು ತಮ್ಮ ಗೃಹ ಕಚೇರಿ ಕೃಷ್ಣಾದಲ್ಲಿ ಈ ಬಗ್ಗೆ ಸುದೀರ್ಘ ಸುದ್ದಿಗೋಷ್ಠಿ ನಡೆಸಿದ ಬಳಿಕ ಸಚಿವರೊಂದಿಗೆ ರಾಜ್ಯ ಚುನಾವಣಾ ಆಯೋಗದ ಕಚೇರಿಗೆ ತೆರಳಿದರು.

ಮುಖ್ಯ ಚುನಾವಣಾ ಆಯುಕ್ತ ಅನ್ಬುಕುಮಾರ್ ಅವರನ್ನು ಭೇಟಿ ಮಾಡಿ ದೂರು ನೀಡಿದರು. ಎಸ್ ಐಆರ‍್ ಅಕ್ರಮ ಹಾಗೂ ಮತದಾರರ ಹೆಸರು ಡಿಲಿಟ್ ಮಾಡಲು ನಡೆಸುತ್ತಿರುವ ಷಡ್ಯಂತ್ರದ ವಿರುದ್ಧ ಕ್ರಮ ಆಗಬೇಕು. ತಪ್ಪಿತಸ್ಥರ ವಿರುದ್ಧ ಎಫ್ ಐ ಆರ್ ದಾಖಲಿಸಿ ಬಂಧಿಸಬೇಕು ಎಂದು ಒತ್ತಾಯಿಸಿದರು.

ಈ ವೇಳೆ ಈ ಬಗ್ಗೆ ಪರಿಶೀಲಿಸಿಸುವುದಾಗಿ ಚುನಾವಣಾ ಆಯುಕ್ತರು ಹೇಳಿದರು. ಪರಿಶೀಲನೆಗೆ ಎರಡು ದಿನ ಸಮಾಯವಾಕಾಶ ನೀಡಿ ಬಳಿಕ ಮುಂದಿನ ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು. ಇದಕ್ಕೆ ಒಪ್ಪದ ಸಿಎಂ ಹಾಗೂ ಸಚಿವರು, ಎಫ್ಐಆರ್ ದಾಖಲಾಗುವರೆಗೂ ಚುನಾವಣಾ ಆಯೋಗದ ಕಚೇರಿಯಿಂದ ಕದಲುವುದಿಲ್ಲ. ಮೊದಲು ಪ್ರಕರಣ ದಾಖಲಿಸಿ, ಕ್ರಮದ ಭರವಸೆ ನೀಡಿ ಅಲ್ಲಿಯವರೆಗೂ ನಾವ್ಯರೂ ಈ ಜಾಗ ಬಿಟ್ಟು ಹೋಗಲ್ಲ ಎಂದು ಪಟ್ಟು ಹಿಡಿದು ಕುಳಿತರು.

ಸಿಇಒ ಕಚೇರಿ ಮುಂದೆ ಧರಣಿ

ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಇದೀಗ ಸಿಎಂ ಡಿ ಕೆ ಶಿವಕುಮಾರ್, ಸಚಿವರು ಸೇರಿದಂತೆ ಕಾಂಗ್ರೆಸ್ ನಾಯಕರು ಧರಣಿ ನಡೆಸುತ್ತಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ವಿಧಾನಸೌಧದ ಭವ್ಯ ಮೆಟ್ಟಿಲುಗಳ ಮೇಲೆ 'ಉರ್ದು ಹಬ್ಬ' ಇಲ್ಲ: ತೀವ್ರ ವಿರೋಧದ ನಂತರ CM ಕಚೇರಿ ಸ್ಪಷ್ಟನೆ

'ಕೊಡಲಿಯಿಂದ ದಾಳಿ, ರಕ್ತಸ್ರಾವದ ನಡುವೆ ಕರ್ತವ್ಯ ನಿರ್ವಹಣೆ': 9/11 ಮಾದರಿ ದುರಂತ ತಪ್ಪಿಸಿದ ಭಾರತೀಯ ಪೈಲಟ್, Netanyahu ಶ್ಲಾಘನೆ

KPSC ನೇಮಕಾತಿ ಹಗರಣ: ಎಸ್‌ಐಟಿ ರಚನೆಗೆ ಸುಪ್ರೀಂ ಕೋರ್ಟ್ ತಡೆ; ಸಮರ್ಥ ಅಧಿಕಾರಿಗಳ ಪಟ್ಟಿ ನೀಡುವಂತೆ ರಾಜ್ಯ ಸರ್ಕಾರಕ್ಕೆ ಸೂಚನೆ

Asian Games 2026: 28 ವರ್ಷಗಳ ಬಳಿಕ ಐತಿಹಾಸಿಕ ಜಯ, ಮತ್ತೆ ಪಾಕಿಸ್ತಾನಕ್ಕೆ ಮಣ್ಣುಮುಕ್ಕಿಸಿದ ಭಾರತ ಫೈನಲ್ ಗೆ ಲಗ್ಗೆ!

ಗುಜರಾತ್‌ ಮಾಜಿ ಮುಖ್ಯಮಂತ್ರಿ ಶಂಕರ್‌ಸಿಂಗ್ ವಘೇಲಾ ಶೀಘ್ರದಲ್ಲೇ ಕಾಂಗ್ರೆಸ್ ಸೇರ್ಪಡೆ ಸಾಧ್ಯತೆ