ಜೋಗ ಜಲಪಾತ (ಸಂಗ್ರಹ ಚಿತ್ರ) 
ರಾಜ್ಯ

ಜೋಗ ಜಲಪಾತಕ್ಕೆ ಹೈಟೆಕ್ ಸ್ಪರ್ಶ: ಸರ್ವಕಾಲಿಕ ಪ್ರವಾಸಿ ತಾಣವಾಗಿಸಲು ಸರ್ಕಾರ ಮಾಸ್ಟರ್ ಪ್ಲ್ಯಾನ್..!

ತಾಂತ್ರಿಕ ಅಧ್ಯಯನಗಳನ್ನು ಶೀಘ್ರ ಪೂರ್ಣಗೊಳಿಸುವುದು ಹಾಗೂ ಅಗತ್ಯ ಕಾನೂನುಬದ್ಧ ಅನುಮೋದನೆಗಳ ಪ್ರಕ್ರಿಯೆಯನ್ನು ವೇಗಗೊಳಿಸುವಂತೆ ಅವರು ನಿರ್ದೇಶನ ನೀಡಿದ್ದಾರೆ.

ಬೆಂಗಳೂರು: ವಿಶ್ವವಿಖ್ಯಾತ ಜೋಗ ಜಲಪಾತವನ್ನು ಸರ್ವಕಾಲಿಕ ಪ್ರವಾಸಿ ತಾಣವನ್ನಾಗಿ ಪರಿವರ್ತಿಸಲು ರಾಜ್ಯ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದೆ.

ಕೇವಲ ಮಳೆಗಾಲಕ್ಕೆ ಮಾತ್ರ ಸೀಮಿತವಾಗಿದ್ದ ಜೋಗದ ವೈಭವವನ್ನು ಇನ್ಮುಂದೆ ವರ್ಷದ 365 ದಿನಗಳೂ ಕಣ್ತುಂಬಿಕೊಳ್ಳಲು ಪ್ರವಾಸೋದ್ಯಮ ಇಲಾಖೆ ಮಾಸ್ಟರ್ ಪ್ಲಾನ್ ಸಿದ್ಧಪಡಿಸಿದೆ.

ಸಚಿವ ಕೆ.ಜೆ. ಜಾರ್ಜ್ ಅವರು ಇತ್ತೀಚೆಗೆ ನಡೆಸಿದ ಪ್ರಗತಿ ಪರಿಶೀಲನಾ ಸಭೆಯಲ್ಲಿ, ಜೋಗ ಜಲಪಾತ ಅಭಿವೃದ್ಧಿ ಯೋಜನೆಗಳನ್ನು ತೀವ್ರಗೊಳಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ತಾಂತ್ರಿಕ ಅಧ್ಯಯನಗಳನ್ನು ಶೀಘ್ರ ಪೂರ್ಣಗೊಳಿಸುವುದು ಹಾಗೂ ಅಗತ್ಯ ಕಾನೂನುಬದ್ಧ ಅನುಮೋದನೆಗಳ ಪ್ರಕ್ರಿಯೆಯನ್ನು ವೇಗಗೊಳಿಸುವಂತೆ ಅವರು ನಿರ್ದೇಶನ ನೀಡಿದ್ದಾರೆ.

ಪ್ರವಾಸೋದ್ಯಮ ಇಲಾಖೆ ಅಧಿಕಾರಿಗಳೊಂದಿಗೆ ನಡೆದ ಸಭೆಯಲ್ಲಿ ಜೋಗ ಜಲಪಾತದಲ್ಲಿ ನಡೆಯುತ್ತಿರುವ ಕಾಮಗಾರಿಗಳ ಪ್ರಗತಿ ಹಾಗೂ ವರ್ಷಪೂರ್ತಿ ನಿಗದಿತ ಅವಧಿಗಳಲ್ಲಿ ಜಲಪಾತದಲ್ಲಿ ನೀರಿನ ಹರಿವು ಇರುವಂತೆ ಮಾಡುವ ಪ್ರಸ್ತಾವನೆ ಕುರಿತು ಸಚಿವರು ಪರಿಶೀಲನೆ ನಡೆಸಿದರು.

ಜಲಪಾತದ ಮೇಲ್ಭಾಗಕ್ಕೆ ನೀರನ್ನು ಪಂಪ್ ಮಾಡುವ ಉದ್ದೇಶಿತ ವ್ಯವಸ್ಥೆಯ ಕುರಿತು ಸಮಗ್ರ ಕಾರ್ಯಸಾಧ್ಯತಾ ಅಧ್ಯಯನ ನಡೆಸುವಂತೆ ಜಾರ್ಜ್ ಸೂಚಿಸಿದರು.

ಇದರಲ್ಲಿ ಅಗತ್ಯವಿರುವ ನೀರಿನ ಪ್ರಮಾಣ, ಪಂಪಿಂಗ್ ಸಾಮರ್ಥ್ಯ, ವಿದ್ಯುತ್ ಬಳಕೆ, ಕಾರ್ಯಾಚರಣಾ ವೆಚ್ಚ ಹಾಗೂ ದೀರ್ಘಾವಧಿಯ ಆರ್ಥಿಕ ಕಾರ್ಯಸಾಧ್ಯತೆಯನ್ನು ಪರಿಶೀಲಿಸಬೇಕು ಎಂದು ಹೇಳಿದರು.

ಕರ್ನಾಟಕ ವಿದ್ಯುತ್ ನಿಗಮ ನಿಯಮಿತ ಹಾಗೂ ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗದಿಂದ ಅಗತ್ಯ ಅನುಮೋದನೆಗಳನ್ನು ಪಡೆಯುವ ಪ್ರಕ್ರಿಯೆಯನ್ನು ತ್ವರಿತಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಯಿತು.

ಜೋಗ ಜಲಪಾತ ಕರ್ನಾಟಕದ ಪ್ರಮುಖ ಪ್ರವಾಸಿ ಆಕರ್ಷಣೆಗಳಲ್ಲಿ ಒಂದಾಗಿದೆ. ಇದರ ಪ್ರವಾಸೋದ್ಯಮ ಸಾಮರ್ಥ್ಯವನ್ನು ಮಳೆಗಾಲಕ್ಕೆ ಮಾತ್ರ ಸೀಮಿತಗೊಳಿಸಬಾರದು. ವರ್ಷಪೂರ್ತಿ ಪ್ರವಾಸಿಗರನ್ನು ಆಕರ್ಷಿಸುವ ತಾಣವನ್ನಾಗಿ ಅಭಿವೃದ್ಧಿಪಡಿಸುವುದು ನಮ್ಮ ಉದ್ದೇಶ. ನಿಗದಿತ ಅವಧಿಯಲ್ಲಿ ನೀರಿನ ಹರಿವು ಕಾಯ್ದುಕೊಳ್ಳುವ ಪ್ರಸ್ತಾವನೆಯನ್ನು ತಾಂತ್ರಿಕ ಕಾರ್ಯಸಾಧ್ಯತೆ, ವಿದ್ಯುತ್ ವೆಚ್ಚ ಮತ್ತು ಸುರಕ್ಷತಾ ಅಗತ್ಯಗಳನ್ನು ಸಮಗ್ರವಾಗಿ ಪರಿಶೀಲಿಸಿದ ಬಳಿಕ ಮುಂದುವರಿಸಬೇಕು.

ಅನುಮೋದನೆ ಪಡೆಯುವಲ್ಲಿ ಯಾವುದೇ ವಿಳಂಬವಾಗಬಾರದು. ಪ್ರಸ್ತಾವನೆಯನ್ನು ಅಂತಿಮಗೊಳಿಸಲು ಶೀಘ್ರದಲ್ಲೇ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರೊಂದಿಗೆ ಸಭೆ ನಡೆಸಲಾಗುವುದು ಎಂದು ಹೇಳಿದರು.

ಪ್ರವಾಸಿಗರ ಸುರಕ್ಷತೆ ಹಾಗೂ ಕಾಮಗಾರಿಗಳನ್ನು ನಿಗದಿತ ಸಮಯದಲ್ಲಿ ಪೂರ್ಣಗೊಳಿಸುವ ಬಗ್ಗೆಯೂ ಸಚಿವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಪುರಾತತ್ವ ಇಲಾಖೆ ಸೇರಿದಂತೆ ಸಂಬಂಧಿತ ಇಲಾಖೆಗಳು ಮತ್ತು ಸಂಸ್ಥೆಗಳಿಂದ ಪಡೆಯಬೇಕಾದ ನಿರಾಕ್ಷೇಪಣಾ ಪತ್ರಗಳು ಹಾಗೂ ಇತರ ಅನುಮತಿಗಳನ್ನು ತ್ವರಿತವಾಗಿ ಪಡೆದು ಅಗತ್ಯ ಕಾಮಗಾರಿಗಳನ್ನು ವೇಗಗೊಳಿಸುವಂತೆ ನಿರ್ದೇಶಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Flydubai ವಿಮಾನ ಹೈಜಾಕ್'ಗೆ ಯತ್ನ; ಕಾಕ್‌ಪಿಟ್‌ನಲ್ಲೇ ಡೆಡ್ಲಿ ಫೈಟ್; 174 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಕ್ಯಾಪ್ಟನ್ ಸ್ಮಿತ್ ಸಾಹಸಕ್ಕೆ ಪ್ರಧಾನಿ ಮೋದಿ ಮೆಚ್ಚುಗೆ..!

ಗ್ರಾಹಕರಿಗೆ ಮತ್ತೆ ಬೆಲೆ ಏರಿಕೆ ಬಿಸಿ: ವಾಣಿಜ್ಯ ಸಿಲಿಂಡರ್ ಬೆಲೆ 62.50 ರೂ. ಹೆಚ್ಚಳ, ವಿಮಾನ ಇಂಧನವೂ ದುಬಾರಿ..!

ಕಾಂಗ್ರೆಸ್‌ನಲ್ಲಿ ಮತ್ತೆ ಸಂಪುಟ ಸರ್ಕಸ್: ದೆಹಲಿಯಲ್ಲಿ ವೇಣುಗೋಪಾಲ್ ಭೇಟಿಯಾದ ಸಿದ್ದರಾಮಯ್ಯ, ಖಾಲಿ ಇರೋ 2 ಸಚಿವ ಸ್ಥಾನ ಭರ್ತಿಗೆ ಪಟ್ಟು..!

ಡಿಕೆಶಿ ಕನಸಿನ ಅವಳಿ ಸುರಂಗ ಮಾರ್ಗಕ್ಕೆ ಹೊಸ ಕಂಟಕ: ಹೆಬ್ಬಾಳ ಕೆರೆಯ 3.45 ಎಕರೆ ಜೌಗು ಪ್ರದೇಶ ನಾಶಕ್ಕೆ ಯತ್ನ, ಎದುರಾಯ್ತು ಕಾನೂನು ಸಂಕಷ್ಟ..!

ಕರ್ನಾಟಕ ಮತದಾರರ ಪಟ್ಟಿ ಪರಿಷ್ಕರಣೆ: ಬುಡಕಟ್ಟು, ದಲಿತರು, ಅಲ್ಪಸಂಖ್ಯಾತರು, ಮಹಿಳೆಯರ ಹೆಸರೇ ಹೆಚ್ಚು ಡಿಲೀಟ್‌? SIR ವಿರುದ್ಧ ಸಿಡಿದೆದ್ದ ಒಕ್ಕೂಟ..!