ಕಂದಕಕ್ಕೆ ಬಿದ್ದ ಬಸ್ಸು  
ರಾಜ್ಯ

ಕುಮಟಾ ಬಳಿ ದೇವಿಮನೆ ಘಾಟ್‌ನಲ್ಲಿ ಹಳ್ಳಕ್ಕೆ ಬಿದ್ದ KSRTC ಬಸ್‌; ಮಹಿಳೆ ಸಾವು, ಹಲವು ಮಂದಿ ಗಾಯ

ಬಾಗಲಕೋಟೆಯಿಂದ ಶಿರಸಿ ಮಾರ್ಗವಾಗಿ ಧರ್ಮಸ್ಥಳಕ್ಕೆ ತೆರಳುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ 10ಕ್ಕೂ ಅಧಿಕ ಪ್ರಯಾಣಿಕರಿಗೆ ಗಂಭೀರ ಗಾಯಗಳಾಗಿವೆ.

ಕುಮಟಾ: ಕುಮಟಾ ತಾಲೂಕಿನ ದೇವಿಮನೆ ಘಾಟ್‌ನ ಮಸ್ತಿ ಹಳ್ಳ ಪ್ರದೇಶದಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮ ಕೆಎಸ್‌ಆರ್‌ಟಿಸಿ ಬಸ್‌ ರಸ್ತೆ ಬದಿಯ ಹಳ್ಳಕ್ಕೆ ಉರುಳಿದ ಪರಿಣಾಮ ಓರ್ವ ಮಹಿಳೆ ಮೃತಪಟ್ಟು ಹಲವರು ಗಾಯಗೊಂಡಿದ್ದಾರೆ.

ಬಾಗಲಕೋಟೆಯಿಂದ ಶಿರಸಿ ಮಾರ್ಗವಾಗಿ ಧರ್ಮಸ್ಥಳಕ್ಕೆ ತೆರಳುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ 10ಕ್ಕೂ ಅಧಿಕ ಪ್ರಯಾಣಿಕರಿಗೆ ಗಂಭೀರ ಗಾಯಗಳಾಗಿವೆ. ಘಟನೆ ಬಳಿಕ ಕುಮಟಾ ಪೊಲೀಸರು ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆಯಲ್ಲಿ ನೆರವಾದರು.

ಘಟನೆಯಲ್ಲಿ 40 ವರ್ಷದ ಮಹಿಳೆ ಭಟ್ಕಳದ ಪರ್ವಿನ್ ಮೃತಪಟ್ಟಿದ್ದಾರೆ.

ಬಾಗಲಕೋಟೆಯಿಂದ ಧರ್ಮಸ್ಥಳಕ್ಕೆ ತೆರಳುತ್ತಿದ್ದ ಬಸ್ ಕಂದಕಕ್ಕೆ ಉರುಳಿಬಿದ್ದಿದೆ. ಅಪಘಾತದಲ್ಲಿ ಬಸ್‌ನಲ್ಲಿದ್ದ ಗಾಯಗೊಂಡ ಪ್ರಯಾಣಿಕರನ್ನು ಕೂಡಲೇ ಕುಮಟಾದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸದ್ಯ ಎಲ್ಲರಿಗೂ ಅಗತ್ಯ ಚಿಕಿತ್ಸೆ ಒದಗಿಸಲು ಕ್ರಮ ಕೈಗೊಳ್ಳಲಾಗಿದೆ.

ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಕುಮಟಾ ಪೊಲೀಸ್ ಠಾಣೆಯ ಸಿಬ್ಬಂದಿ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ. ಬಸ್ ಕಂದಕಕ್ಕೆ ಉರುಳಿದ ಹಿನ್ನೆಲೆಯಲ್ಲಿ ಕೆಲಕಾಲ ಸ್ಥಳದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು.

ದೇವಿಮನೆ ಘಟ್ಟದಲ್ಲಿ ಸಂಚರಿಸುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮ ಬಸ್ ರಸ್ತೆ ಬದಿಯ ಕಂದಕಕ್ಕೆ ಉರುಳಿಬಿದ್ದಿದೆ ಎಂದು ಪ್ರಾಥಮಿಕವಾಗಿ ತಿಳಿದುಬಂದಿದೆ. ಆದರೆ ಅಪಘಾತಕ್ಕೆ ನಿಖರ ಕಾರಣ ಏನು ಎಂಬುದು ತನಿಖೆಯಿಂದ ತಿಳಿಯಬೇಕಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

CEC ವಿರುದ್ಧ ಪ್ರತಿಭಟನೆಗೆ ಬ್ರೇಕ್: ನವದೆಹಲಿಯಲ್ಲಿ ಬಿಎನ್‌ಎಸ್‌ಎಸ್ ಸೆಕ್ಷನ್ 163 ಜಾರಿ, ಎಲ್ಲೆಡೆ ಭದ್ರತೆ ಹೆಚ್ಚಳ..!

ಗಾಂಧಿ ಜಯಂತಿ: ರಾಜಘಾಟ್‌ನಲ್ಲಿ ಮಹಾತ್ಮ ಗಾಂಧಿಗೆ, ವಿಜಯ್ ಘಾಟ್‌ನಲ್ಲಿ ಲಾಲ್ ಬಹದ್ದೂರ್ ಶಾಸ್ತ್ರಿಗೆ ಪ್ರಧಾನಿ ಮೋದಿ ನಮನ..!

FlyDubai ವಿಮಾನ ಪತನ ಯತ್ನದ ಹಿಂದೆ ಇರಾನ್ ಕೈವಾಡ..? ತುಂಬಾ ಕಠಿಣ ಹೊಡೆತ ಬೀಳಲಿದೆ; ಟ್ರಂಪ್ ಕಠಿಣ ಎಚ್ಚರಿಕೆ

ಫಾರಂ-7 ದುರ್ಬಳಕೆ ಆರೋಪ: ಕ್ರಮಕ್ಕೆ ಚು.ಆಯೋಗ ಸೂಚನೆ, ಐತಿಹಾಸಿಕ ದಿನ ಎಂದ ಸಿಎಂ ಡಿಕೆಶಿ

‘ನಿಮ್ಮ ಪ್ರಾರ್ಥನೆಗೆ ಧನ್ಯವಾದ’: ಭಾರತದ ಹೀರೋ ಪೈಲಟ್ ಸ್ಮಿತ್ ಮಚ್ಚರ್ ಅಪಾಯದಿಂದ ಪಾರು!