ಅಗ್ನಿಶಾಮಕದಳ ಸಿಬ್ಬಂದಿ  
ರಾಜ್ಯ

ಚಿಕ್ಕಬಳ್ಳಾಪುರ: ಶ್ರೀನಿವಾಸ ಸಾಗರ ಡ್ಯಾಮ್ ನಲ್ಲಿ ಮುಳುಗಿ ತಾಯಿ, ಮಗ ಸಾವು!

ಆಟೋ ಚಾಲಕರಾಗಿರುವ ರಾಜು, ಮಕ್ಕಳಿಗೆ ಗಾಂಧಿ ಜಯಂತಿ ರಜೆ ಇದ್ದಿದ್ದರಿಂದ ಕುಟುಂಬ ಸಮೇತ ಜಲಾಶಯಕ್ಕೆ ಬಂದಿದ್ದರು. ಈ ವೇಳೆ, ಜಲಾಶಯದ ನೀರಿನಲ್ಲಿ ಆಟ ಆಡಲು ನೀರಿನಲ್ಲಿ ಇಳಿದಿದ್ದಾಗ ಈ ದುರ್ಘಟನೆ ನಡೆದಿದೆ ಎನ್ನಲಾಗಿದೆ.

ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ತಾಲೂಕಿನ ಶ್ರೀನಿವಾಸ ಸಾಗರ ಡ್ಯಾಮ್ ನಲ್ಲಿ ಮುಳುಗಿ ತಾಯಿ ಮತ್ತು ಮಗ ಮೃತಪಟ್ಟಿರುವ ಘಟನೆ ನಡೆದಿದೆ.

ಮೃತರನ್ನು ದೇವನಹಳ್ಳಿ ತಾಲೂಕಿನ ಬೂದಿಗೆರೆ ಬಳಿಯ ಗಂಗವಾರ ಗ್ರಾಮದ ರೇಖಾ (39) ಹಾಗೂ ಹೇಮಂತ್ (19) ಎಂದು ಗುರುತಿಸಲಾಗಿದೆ. ತಂದೆ ರಾಜು ಹಾಗೂ ಮಗಳು ದೀಪಾ ಅಪಾಯದಿಂದ ಪಾರಾಗಿದ್ದಾರೆ.

ಆಟೋ ಚಾಲಕರಾಗಿರುವ ರಾಜು, ಮಕ್ಕಳಿಗೆ ಗಾಂಧಿ ಜಯಂತಿ ರಜೆ ಇದ್ದಿದ್ದರಿಂದ ಕುಟುಂಬ ಸಮೇತ ಜಲಾಶಯಕ್ಕೆ ಬಂದಿದ್ದರು. ಈ ವೇಳೆ, ಜಲಾಶಯದ ನೀರಿನಲ್ಲಿ ಆಟ ಆಡಲು ನೀರಿನಲ್ಲಿ ಇಳಿದಿದ್ದಾಗ ಈ ದುರ್ಘಟನೆ ನಡೆದಿದೆ ಎನ್ನಲಾಗಿದೆ.

ರೇಖಾ ಹಾಗೂ ಹೇಮಂತ್ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ರಾಜು ಹಾಗೂ ದೀಪಾ ಸಹ ನೀರು ಕುಡಿದಿದ್ದು, ಅವರು ಪ್ರಾಣಪಾಯದಿಂದ ಪಾರಾಗಿದ್ದಾರೆ.

ಅಗ್ನಿಶಾಮಕದಳ ಸಿಬ್ಬಂದಿ ಇಬ್ಬರ ಮೃತ ದೇಹಗಳನ್ನ ಹೊರ ತೆಗೆದಿದ್ದು, ಮರಣೋತ್ತರ ಪರೀಕ್ಷೆಗೆ ಚಿಕ್ಕಬಳ್ಳಾಪುರ ಜಿಲ್ಲಾಸ್ಪತ್ರೆಯ ಶವಗಾರಕ್ಕೆ ರವಾನಿಸಿದ್ದಾರೆ. ಚಿಕ್ಕಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Asian Games 2026: 44 ವರ್ಷಗಳ ಬರ ನೀಗಿಸಿದ ಮಹಿಳಾ ಪಡೆ; ಚೀನಾ ಮಣಿಸಿ ಚಿನ್ನ ಗೆದ್ದ ಭಾರತ!

ಬೆಂಗಳೂರಿನಲ್ಲಿ ಮನೆ ಖರೀದಿದಾರರಿಗೆ 927 ಕೋಟಿ ವಂಚನೆ ಆರೋಪ: ಓಜೋನ್ ಅರ್ಬಾನಾ CMD ವಾಸುದೇವನ್ ಬಂಧನ!

Asian Games 2026: 1 ನಿಮಿಷದಲ್ಲಿ 2 ಚಿನ್ನದ ಪದಕ ಗೆದ್ದ ಭಾರತ, 75 ಪದಕಗಳೊಂದಿಗೆ 5ನೇ ಸ್ಥಾನಕ್ಕೆ ಲಗ್ಗೆ!

'ಒಂದೇ ಒಂದು ಪೋಸ್ಟ್ ಕೂಡ ಮಾಡಿಲ್ಲ: ಸ್ಮಿತ್ ಮಚ್ಚರ್ ವಿಚಾರದಲ್ಲಿ ರಾಹುಲ್ ಗಾಂಧಿಯ ಮೌನವನ್ನು ಪ್ರಶ್ನಿಸಿದ ಕಿಶನ್ ರೆಡ್ಡಿ!

ಜೆಡಿಎಸ್ ಪ್ರಧಾನ ಕಾರ್ಯದರ್ಶಿಯಾಗಿ Biggboss ಮಾಜಿ ಸ್ಪರ್ಧಿ ಜಾಹ್ನವಿ ನೇಮಕ!