ಹೈಕೋರ್ಟ್ 
ರಾಜ್ಯ

ದೇಹದ ಬಗ್ಗೆ ಅವಹೇಳನ, ನಿಂದನೆ ಮಹಿಳೆ ಘನತೆಗೆ ಧಕ್ಕೆ ತಂದ ಅಪರಾಧವಾಗದು: ಹೈಕೋರ್ಟ್

ನ್ಯಾಯಮೂರ್ತಿ ಎಸ್.ಆರ್. ಕೃಷ್ಣ ಕುಮಾರ್ ಅವರು ಇಬ್ಬರು ಮಹಿಳೆಯರ ವಿರುದ್ಧದ ಕ್ರಿಮಿನಲ್ ವಿಚಾರಣಾ ಪ್ರಕ್ರಿಯೆಯನ್ನು ರದ್ದುಗೊಳಿಸುವ ಸಂದರ್ಭದಲ್ಲಿ ಈ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಬೆಂಗಳೂರು: ಮಹಿಳೆಯ ದೇಹದ ಆಕಾರದ ಬಗ್ಗೆ ಅವಹೇಳನಕಾರಿ ಮಾತುಗಳನ್ನು ಆಡುವುದು ಅಥವಾ ಆಕೆಯ ದೈಹಿಕ ರೂಪದ ಕುರಿತು ಟೀಕಿಸುವುದು ಮಾತ್ರದಿಂದಲೇ ಭಾರತೀಯ ದಂಡ ಸಂಹಿತೆ (IPC) ಸೆಕ್ಷನ್ 509ರಡಿ ಮಹಿಳೆಯ ಘನತೆಗೆ ಧಕ್ಕೆ ಉಂಟುಮಾಡಿದ ಅಪರಾಧವಾಗುವುದಿಲ್ಲ ಎಂದು ಕರ್ನಾಟಕ ಹೈಕೋರ್ಟ್ ಹೇಳಿದೆ.

ನ್ಯಾಯಮೂರ್ತಿ ಎಸ್.ಆರ್. ಕೃಷ್ಣ ಕುಮಾರ್ ಅವರು ಇಬ್ಬರು ಮಹಿಳೆಯರ ವಿರುದ್ಧದ ಕ್ರಿಮಿನಲ್ ವಿಚಾರಣಾ ಪ್ರಕ್ರಿಯೆಯನ್ನು ರದ್ದುಗೊಳಿಸುವ ಸಂದರ್ಭದಲ್ಲಿ ಈ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

2023ರ ಆಗಸ್ಟ್‌ನಲ್ಲಿ ಮಹಿಳೆಯೊಬ್ಬರು ದೂರು ದಾಖಲಿಸಿದ್ದರು. ಅರ್ಜಿದಾರರು ಹಾಗೂ ಓರ್ವ ಪುರುಷ ತನ್ನ ಮತ್ತು ತನ್ನ ಸ್ನೇಹಿತರ ವಿರುದ್ಧ ದಪ್ಪಗಿರುವುದನ್ನು ಗೇಲಿ ಮಾಡುವುದು, ದೇಹದ ಆಕಾರದ ಬಗ್ಗೆ ಅವಹೇಳನಕಾರಿ ಹೇಳಿಕೆಗಳು, ಜನಾಂಗೀಯ ಹಾಗೂ ಅಶ್ಲೀಲ ಪದಗಳನ್ನು ಬಳಸಿ ನಿಂದಿಸಿದ್ದಾರೆ ಎಂದು ಅವರು ಆರೋಪಿಸಿದ್ದರು. ಬಳಿಕ ಪೊಲೀಸರು ಎಫ್‌ಐಆರ್ ದಾಖಲಿಸಿ, ಆರೋಪಪಟ್ಟಿ ಸಲ್ಲಿಸಿದ್ದರು.

ಈ ವಿಚಾರಣಾ ಪ್ರಕ್ರಿಯೆಯನ್ನು ಪ್ರಶ್ನಿಸಿ ಅರ್ಜಿದಾರರು ಹೈಕೋರ್ಟ್ ಮೊರೆ ಹೋಗಿದ್ದರು. ಇದೇ ಪ್ರಕರಣದ ಮೂರನೇ ಆರೋಪಿಯ ವಿರುದ್ಧದ ವಿಚಾರಣಾ ಪ್ರಕ್ರಿಯೆಯನ್ನು ಹೈಕೋರ್ಟ್ ಈಗಾಗಲೇ ರದ್ದುಗೊಳಿಸಿದೆ ಎಂದು ಅವರು ವಾದಿಸಿದ್ದರು. ಹೈಕೋರ್ಟ್ ವಿಚಾರಣೆ ವೇಳೆ ದೂರುದಾರ ಮಹಿಳೆಯ ಪರ ಯಾರೂ ಹಾಜರಾಗಿರಲಿಲ್ಲ.

ದೂರು ಹಾಗೂ ಆರೋಪಪಟ್ಟಿಯಲ್ಲಿರುವ ಅಂಶಗಳನ್ನು ಪರಿಶೀಲಿಸಿದ ನ್ಯಾಯಾಲಯ, ಐಪಿಸಿ ಸೆಕ್ಷನ್ 509ರಡಿ ಅಪರಾಧವನ್ನು ರೂಪಿಸಲು ಅಗತ್ಯವಾದ ಅಂಶಗಳು ಅವುಗಳಲ್ಲಿ ಕಂಡುಬರುವುದಿಲ್ಲ ಎಂದು ಹೇಳಿತು.

“ದೂರು, ಎಫ್‌ಐಆರ್, ದೂರುದಾರರು ಮತ್ತು ಸಾಕ್ಷಿಗಳ ಹೇಳಿಕೆಗಳು ಸೇರಿದಂತೆ ಆರೋಪಪಟ್ಟಿಯಲ್ಲಿರುವ ದಾಖಲೆಗಳನ್ನು ಪರಿಶೀಲಿಸಿದಾಗ, ಪ್ರತಿವಾದಿಗಳು ಆರೋಪಿಸಿರುವಂತೆ IPC ಸೆಕ್ಷನ್ 509ರಡಿ ಅಪರಾಧವನ್ನು ರೂಪಿಸಲು ಅಗತ್ಯವಾದ ಅಂಶಗಳು ಅವುಗಳಲ್ಲಿ ಇಲ್ಲ ಎಂಬ ನಿರ್ಣಯಕ್ಕೆ ಬರಲು ಸಾಕಾಗುತ್ತದೆ.

ಐಪಿಸಿ ಸೆಕ್ಷನ್ 509ರಡಿ ಅಪರಾಧವನ್ನು ರೂಪಿಸಲು ಅಗತ್ಯವಿರುವ ಕಡ್ಡಾಯ ಅಂಶಗಳನ್ನು ಪರಿಗಣಿಸಿದಾಗ, ಅರ್ಜಿದಾರರು ಮತ್ತು ಮೂರನೇ ಆರೋಪಿಯು ದೂರುದಾರೆಯ ದೇಹದ ಆಕಾರದ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿ, ಆಕೆಯ ದೈಹಿಕ ರೂಪವನ್ನು ಅವಮಾನಿಸಿದ್ದಾರೆ ಎಂಬ ಕಾರಣಕ್ಕೆ ಮಾತ್ರ, ದಾಖಲೆಗಳಲ್ಲಿರುವ ಅಂಶಗಳು ಐಪಿಸಿ ಸೆಕ್ಷನ್ 509ರಡಿ ಶಿಕ್ಷಾರ್ಹ ಅಪರಾಧ ನಡೆದಿರುವುದನ್ನು ಬಹಿರಂಗಪಡಿಸುತ್ತವೆ ಎಂದು ಹೇಳಲಾಗದು ಎಂದು ನ್ಯಾಯಮೂರ್ತಿ ಕೃಷ್ಣ ಕುಮಾರ್ ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನೈಟ್ ಶಿಫ್ಟ್ ಮುಗಿಸಿ ಮನೆಗೆ ಮರಳುವಷ್ಟರಲ್ಲಿ ಎದುರಾಯ್ತು ಸಾವು: ತಿರುಪತಿಯ ಫಾರ್ಮಾ ಘಟಕದಲ್ಲಿ ಸಿಡಿದ ಬಾಯ್ಲರ್, ಐವರು ಕಾರ್ಮಿಕರು ಸಾವು!

Asian Games 2026: ಇತಿಹಾಸ ಬರೆದ ಮೈಸೂರಿನ ಪ್ರಣವಿ ಅರಸ್; ಚಿನ್ನ ಗೆದ್ದ ಮೊದಲ ಭಾರತೀಯ ಮಹಿಳಾ ಗಾಲ್ಫರ್

CNG ರೀಫಿಲ್ ವೇಳೆ ಭೀಕರ ಸ್ಫೋಟ; NH-48ರಲ್ಲಿ ಭಯಾನಕ ಘಟನೆ, ಬದುಕಿದ್ದೇ ಅಚ್ಚರಿ! Video

ಏಷ್ಯನ್ ಗೇಮ್ಸ್ 2026 ಫೈನಲ್: ವೈಭವ್ ಸೂರ್ಯವಂಶಿ ಅಣಕಿಸಿದ ಪಾಕ್ ಸ್ಟಾರ್ ಆಟಗಾರ! ಏನು ಮಾಡಿದ್ರು ಗೊತ್ತಾ? Video

'ಅಭಿವೃದ್ಧಿಶೀಲ ರಾಷ್ಟ್ರಗಳ ಕೈಕಟ್ಟಬೇಡಿ, ಡಂಪಿಂಗ್ ವಿರುದ್ಧ ಸಾಕ್ಷ್ಯಾಧಾರಿತ ಕ್ರಮ ಕೈಗೊಳ್ಳಿ': G20 ಸಭೆಯಲ್ಲಿ ಭಾರತ ಕೆಂಡ