ಪ್ರಕಾಶ್ ರಾಜ್  
ರಾಜ್ಯ

ಗಣೇಶ ವಿಸರ್ಜನೆ ಮುಗಿದಿದೆ, ಜ್ಞಾನೇಶ್‌ ಕುಮಾರ್​​​ ಬಾಕಿಯಿದೆ: ಗಾಂಧಿ ಕೊಂದ ಗೂಡ್ಸೆ ಪೂಜಿಸುವ ಗೂಂಡಾಗಳಿದ್ದಾರೆ; ಪ್ರಕಾಶ್‌ ರಾಜ್

ಸಾಮಾಜಿಕ ಜಾಲತಾಣದಲ್ಲಿ ವಿಡಿಯೊ ಹಂಚಿಕೊಂಡಿರುವ ಅವರು, ಜ್ಞಾನೇಶ್‌ ಕುಮಾರ್‌ ವಿರುದ್ಧದ ಪ್ರತಿಭಟನೆಗಳಿಗೆ ಜನರು ಬೆಂಬಲ ನೀಡುವಂತೆ ಕರೆ ನೀಡಿದ್ದಾರೆ.

ಬೆಂಗಳೂರು: ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್‌ ಕುಮಾರ್‌ ಅವರ ರಾಜೀನಾಮೆಗೆ ಆಗ್ರಹಿಸಿ ನಡೆಯುತ್ತಿರುವ ಪ್ರತಿಭಟನೆಗಳಿಗೆ ನಟ ಪ್ರಕಾಶ್‌ ರಾಜ್ ಬೆಂಬಲ ವ್ಯಕ್ತಪಡಿಸಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ವಿಡಿಯೊ ಹಂಚಿಕೊಂಡಿರುವ ಅವರು, ಜ್ಞಾನೇಶ್‌ ಕುಮಾರ್‌ ವಿರುದ್ಧದ ಪ್ರತಿಭಟನೆಗಳಿಗೆ ಜನರು ಬೆಂಬಲ ನೀಡುವಂತೆ ಕರೆ ನೀಡಿದ್ದಾರೆ.

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ ಹೋರಾಟಕ್ಕಿಳಿದಿರುವ ಕಾಕ್ರೋಚ್ ಜನತಾ ಪಾರ್ಟಿ’ಗೆ (ಸಿಜೆಪಿ) ಬಹುಭಾಷಾ ನಟ ಪ್ರಕಾಶ್ ರಾಜ್ ಬೆಂಬಲ ವ್ಯಕ್ತಪಡಿಸಿದ್ದಾರೆ. ಹಕ್ಕುಗಳಿಗಾಗಿ ನಡೆಯುತ್ತಿರುವ ಈ ಶಾಂತಿಯುತ ಪ್ರತಿಭಟನೆಯಲ್ಲಿ ಸಾರ್ವಜನಿಕರು ಸಕ್ರಿಯವಾಗಿ ಭಾಗವಹಿಸಬೇಕು ಎಂದು ಕರೆ ನೀಡಿದ್ದಾರೆ.

ಗಾಂಧಿ ಜಯಂತಿಯ ಶುಭಾಶಯಗಳು. ಇದು ನಮ್ಮ ಬಾಪು ಅವರ ದಿನ. ಆದರೆ ನಾವು ಈ ದಿನವನ್ನು ಆಚರಿಸುವಾಗ, ನಮ್ಮ ಮಹಾತ್ಮನನ್ನು ಕೊಂದ ನಾಥೂರಾಮ್ ಗೊಡ್ಸೆಯನ್ನು ಪೂಜಿಸುವ ಕೆಲವು ಗೂಂಡಾಗಳು ಇಲ್ಲಿದ್ದಾರೆ ಎಂಬುದನ್ನು ಮರೆಯಬಾರದು ಎಂದು ಪ್ರಕಾಶ್ ರಾಜ್ ಹೇಳಿದ್ದಾರೆ.

ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (SIR) ಮೂಲಕ ನಮ್ಮ ಪೌರತ್ವ ಮತ್ತು ಪ್ರಜಾಪ್ರಭುತ್ವವನ್ನು ಇಲ್ಲದಾಗಿಸಲು ಈ ಗೂಂಡಾಗಳು ಯತ್ನಿಸುತ್ತಿದ್ದಾರೆ. ಆದರೆ ಈ ದೇಶದ ಯುವಜನತೆ, ನಾಗರಿಕ ಸಮಾಜ ಮತ್ತು ಈ ಕಾಕ್ರೋಚ್‌ಗಳು ಇದಕ್ಕೆ ಎಂದಿಗೂ ಅವಕಾಶ ನೀಡುವುದಿಲ್ಲ ಎಂದಿದ್ದಾರೆ.

ಈ ದಿನ ದೇಶಾದ್ಯಂತ ಶಾಂತಿಯುತ ಪ್ರತಿಭಟನೆಗಳು ನಡೆಯುತ್ತಿವೆ. ದೆಹಲಿಯಲ್ಲಿ ನೇಹಾ ಬೋರಾ ಇದರ ನೇತೃತ್ವ ವಹಿಸಿದ್ದರೆ, ಮುಂಬೈನಲ್ಲಿ ಕಾಕ್ರೋಚ್‌ಗಳು ಮತ್ತೆ ರಸ್ತೆಗೆ ಇಳಿದಿದ್ದಾರೆ. ನಮ್ಮ ಹಕ್ಕುಗಳಿಗಾಗಿ ನಡೆಯುತ್ತಿರುವ ಈ ಶಾಂತಿಯುತ ಹೋರಾಟದಲ್ಲಿ ಪ್ರತಿಯೊಬ್ಬರೂ ಪಾಲ್ಗೊಳ್ಳಬೇಕು ಎಂದು ಅವರು ವಿನಂತಿಸಿದ್ದಾರೆ.

ವೀಡಿಯೊದ ಕೊನೆಯಲ್ಲಿ ಪ್ರಧಾನಿ ಮೋದಿ ಮತ್ತು ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ಹೆಸರಿಸಿ ತಿರುಗೇಟು ನೀಡಿರುವ ಅವರು, ನನ್ನ ಸ್ನೇಹಿತರೇ, ಈ ದೇಶದಲ್ಲಿ ಗಣಪತಿ ವಿಸರ್ಜನೆ ಮುಗಿದಿದೆ. ಇನ್ನು ಜ್ಞಾನು ಅವರ (ಜ್ಞಾನೇಶ್ ಕುಮಾರ್) ವಿಸರ್ಜನೆ ಮಾತ್ರ ಬಾಕಿ ಇದೆ ಎಂದು ವ್ಯಂಗ್ಯವಾಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಯೋತ್ಪಾದಕ ದಾಳಿ ವಿಫಲಗೊಳಿಸಿದ ಭಾರತೀಯ ಪೈಲಟ್‌ಗೆ Israel ಅತ್ಯುನ್ನತ ಗೌರವ: ಸ್ವಾತಂತ್ರ್ಯ ದಿನಾಚರಣೆಗೆ ಪ್ರಧಾನಿ ಮೋದಿ, ಕ್ಯಾಪ್ಟನ್ ಸ್ಮಿತ್‌ಗೆ ಆಹ್ವಾನ..!

4 IAS ಅಧಿಕಾರಿಗಳ ವರ್ಗಾವಣೆ ಮಾಡಿ ಸರ್ಕಾರ ಆದೇಶ; ಯಾರಿಗೆಲ್ಲಾ ಬದಲಾವಣೆ

ಅಳಿವಿನಂಚಿನ ‘ಗೋಡಾವಣ’ಕ್ಕೆ ಮರುಜೀವ: ಜೈಸಲ್ಮೇರ್‌ನಲ್ಲಿ 2 Great Indian Bustards ಪಕ್ಷಿಗಳ ಬಿಡುಗಡೆ-Video

ಆಧಾರ ರಹಿತ ಆರೋಪ ಸರಿಯಲ್ಲ, ‘ದಾಖಲೆ ತೋರಿಸಿ, ಜಮೀನನ್ನೇ ನಿಮ್ಮ ಕುಟುಂಬಕ್ಕೆ ಕೊಡ್ತೀನಿ; HDK NICE ಆರೋಪಕ್ಕೆ ಸಚಿವ ಬಾಲಕೃಷ್ಣ ತಿರುಗೇಟು

SIR ಅಕ್ರಮಗಳ ಕುರಿತು ರಾಜ್ಯದಿಂದ ಪ್ರತ್ಯೇಕ ತನಿಖೆ ಇಲ್ಲ: CM ಡಿ.ಕೆ. ಶಿವಕುಮಾರ್ ಸ್ಪಷ್ಟನೆ