India's monsoon deficit widens to 15%, strengthening El Nino poses farm risk: Report 
ರಾಜ್ಯ

El Nino ಎಫೆಕ್ಟ್: ಆಹಾರ ಉತ್ಪಾದನೆ, ಮೇವು, ಕುಡಿಯುವ ನೀರಿನ ಕೊರತೆ ಸಾಧ್ಯತೆ; ರಾಜ್ಯ ಸರ್ಕಾರ ಎಚ್ಚರಿಕೆ

ಮುಂದಿನ ದಿನಗಳಲ್ಲಿ ತಾಪಮಾನ 3ರಿಂದ 6 ಡಿಗ್ರಿ ಸೆಲ್ಸಿಯಸ್‌ನಷ್ಟು ಏರಿಕೆಯಾಗುವ ನಿರೀಕ್ಷೆಯಿರುವುದರಿಂದ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು.

ಮಡಿಕೇರಿ: ಎಲ್ ನಿನೋ ಪರಿಸ್ಥಿತಿಯಿಂದ ಉಂಟಾಗುತ್ತಿರುವ ಪ್ರತಿಕೂಲ ಹವಾಮಾನ ಪರಿಸ್ಥಿತಿಗಳು ಮುಂದಿನ ಎರಡು-ಮೂರು ತಿಂಗಳಲ್ಲಿ ತೀವ್ರ ಪರಿಣಾಮ ಬೀರುವ ಸಾಧ್ಯತೆಯಿದ್ದು, ಆಹಾರ ಉತ್ಪಾದನೆಯಲ್ಲಿ ಕೊರತೆ ಉಂಟಾಗಬಹುದು ಎಂದು ಕೃಷಿ ಸಚಿವ ಪಿ.ಎಂ. ನರೇಂದ್ರ ಸ್ವಾಮಿ ಎಚ್ಚರಿಕೆ ನೀಡಿದ್ದಾರೆ.

ಎಲ್ ನಿನೋ ಪರಿಣಾಮದಿಂದ ಇಡೀ ಜಗತ್ತು ಹವಾಮಾನ ವೈಪರೀತ್ಯವನ್ನು ಎದುರಿಸುತ್ತಿದೆ. ಆಹಾರದ ಕೊರತೆಯ ಜತೆಗೆ ಜಾನುವಾರುಗಳಿಗೆ ಮೇವಿನ ಅಭಾವ, ಕುಡಿಯುವ ನೀರಿನ ಕೊರತೆ ಸೇರಿದಂತೆ ಹಲವು ಪ್ರತಿಕೂಲ ಪರಿಣಾಮಗಳು ಉಂಟಾಗುವ ಸಾಧ್ಯತೆ ಇದೆ ಎಂದು ಕಳವಳ ವ್ಯಕ್ತಪಡಿಸಿದ್ದಾರೆ.

ಮುಂದಿನ ದಿನಗಳಲ್ಲಿ ತಾಪಮಾನ 3ರಿಂದ 6 ಡಿಗ್ರಿ ಸೆಲ್ಸಿಯಸ್‌ನಷ್ಟು ಏರಿಕೆಯಾಗುವ ನಿರೀಕ್ಷೆಯಿರುವುದರಿಂದ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು.

ಮುಂದಿನ ದಿನಗಳಲ್ಲಿ ಮಳೆಯ ಪ್ರಮಾಣವೂ ಕಡಿಮೆಯಾಗಲಿದೆ. ಆದರೆ, ಚಂಡಮಾರುತಗಳ ಪರಿಣಾಮವಾಗಿ ಕೆಲವೆಡೆ ಹಗುರ ಮಳೆಯಾಗುವ ಸಾಧ್ಯತೆ ಇದೆ ಎಂದು ತಿಳಿಸಿದರು.

ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ನರೇಂದ್ರ ಸ್ವಾಮಿ, ಇತ್ತೀಚೆಗೆ ನವದೆಹಲಿಯಲ್ಲಿ ನಡೆದ ಕೃಷಿ ಸಚಿವರ ಸಮ್ಮೇಳನದಲ್ಲಿ ಇದೇ ವಿಷಯಗಳ ಕುರಿತು ಚರ್ಚೆ ನಡೆದಿತ್ತು ಎಂದು ಹೇಳಿದರು

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

SIR Row: ನೋಟಿಸ್ ನೀಡದೆ, ವಿಚಾರಣೆಯಿಲ್ಲದೆ ಮತದಾರರ ಹೆಸರು ತೆಗೆದುಹಾಕುವಂತಿಲ್ಲ- ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಉಜ್ಜಲ್ ಭುಯಾನ್!

ಕುಸಿದ ಅಮೆರಿಕ: ಬದಲಾಗ್ತಿದೆ ವಿಶ್ವದ ದೊಡ್ಡಣ್ಣನ ಸ್ಥಾನ; ಇನ್ಮುಂದೆ EMPs ಪ್ರಬಲ- EAM Jaishankar

'ನನಗೆ ಸಾವಿನ ಭಯವಿರಲಿಲ್ಲ': ವಿಮಾನವನ್ನು ಪತನಗೊಳಿಸುವುದೇ ಉದ್ದೇಶವಾಗಿತ್ತು! ಸಹ-ಪೈಲಟ್ ಹಮ್ಮಾಮಿ ಹೇಳಿಕೆ

2.5 ಲಕ್ಷ ರೂ ಲಂಚ ಪ್ರಕರಣ: DGCA ಅಧಿಕಾರಿ, ವಿಮಾನಯಾನ ಸಂಸ್ಥೆಯ ನಿರ್ದೇಶಕರನ್ನು ಬಂಧಿಸಿದ ಸಿಬಿಐ

CEC Gyanesh Kumar ಗೆ ಕೇರಳಂ ಸಂಕಷ್ಟ: 2006 ರ ಕೇಸ್ ತನಿಖೆಗೆ ಆದೇಶ!