ಸಾಂದರ್ಭಿಕ ಚಿತ್ರ 
ರಾಜ್ಯ

ಫಾರ್ಮ್-7 ದುರ್ಬಳಕೆ ಆರೋಪ; BJP ಬೂತ್ ಏಜೆಂಟ್ ವಿರುದ್ಧ FIR ದಾಖಲು..!

ಈ ಅರ್ಜಿಗಳ ಪೈಕಿ ಹಲವು ಅರ್ಜಿಗಳಲ್ಲಿ ಸುಳ್ಳು ಮಾಹಿತಿ ನೀಡಲಾಗಿದೆ. ಸಂಬಂಧಪಟ್ಟ ಮತದಾರರು ಇನ್ನೂ ಅದೇ ಕ್ಷೇತ್ರದಲ್ಲೇ ವಾಸಿಸುತ್ತಿದ್ದಾರೆ. ನಿರ್ದಿಷ್ಟ ಸಮುದಾಯದ ಪ್ರಾಬಲ್ಯವಿರುವ ಮತಗಟ್ಟೆಗಳನ್ನು ಗುರಿಯಾಗಿಸಿಕೊಳ್ಳಲಾಗಿದೆ.

ಬೆಂಗಳೂರು: ಮಲ್ಲೇಶ್ವರಂ ವಿಧಾನಸಭಾ ಕ್ಷೇತ್ರದ ವಾರ್ಡ್‌ ನಂ. 64ರಲ್ಲಿ ಫಾರ್ಮ್-7 ಅರ್ಜಿಗಳ ಮೂಲಕ ಮತದಾರರ ದಾಖಲೆಗಳನ್ನು ತಿರುಚಲು ಯತ್ನಿಸಿದ ಆರೋಪದ ಮೇಲೆ ಬಿಜೆಪಿ ಬೂತ್ ಮಟ್ಟದ ಏಜೆಂಟ್ (ಬಿಎಲ್‌ಎ) ಸೇರಿದಂತೆ ಇತರರ ವಿರುದ್ಧ ವೈಯಾಲಿಕಾವಲ್ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ.

ಕಾಂಗ್ರೆಸ್ ಮುಖಂಡ ಅನೂಪ್ ಅಯ್ಯಂಗಾರ್ ಅವರು ಅಕ್ಟೋಬರ್ 2ರಂದು ನೀಡಿದ ದೂರಿನ ಆಧಾರದ ಮೇಲೆ ಪ್ರಕರಣ ದಾಖಲಿಸಲಾಗಿದೆ.

ಈ ಪ್ರದೇಶದಲ್ಲಿ ವಾಸಿಸುತ್ತಿರುವ ಹಲವು ಮತದಾರರು ಸ್ಥಳಾಂತರಗೊಂಡಿದ್ದಾರೆ ಅಥವಾ ಶಾಶ್ವತವಾಗಿ ಬೇರೆಡೆಗೆ ತೆರಳಿದ್ದಾರೆ ಎಂದು ನಮೂದಿಸಿ ಹಲವಾರು ಫಾರ್ಮ್-7 ಅರ್ಜಿಗಳನ್ನು ಸಲ್ಲಿಸಿರುವುದು ಕಂಡುಬಂದಿದೆ ಎಂದು ಅಯ್ಯಂಗಾರ್ ತಿಳಿಸಿದ್ದಾರೆ.

ದಾಖಲೆಗಳನ್ನು ಪರಿಶೀಲಿಸಿದಾಗ ಒಟ್ಟು 778 ಫಾರ್ಮ್-7 ಅರ್ಜಿಗಳು ಸಲ್ಲಿಕೆಯಾಗಿರುವುದು ಗೊತ್ತಾಗಿದೆ ಎಂದು ಅವರು ಹೇಳಿದ್ದಾರೆ.

ಈ ಅರ್ಜಿಗಳ ಪೈಕಿ ಹಲವು ಅರ್ಜಿಗಳಲ್ಲಿ ಸುಳ್ಳು ಮಾಹಿತಿ ನೀಡಲಾಗಿದೆ. ಸಂಬಂಧಪಟ್ಟ ಮತದಾರರು ಇನ್ನೂ ಅದೇ ಕ್ಷೇತ್ರದಲ್ಲೇ ವಾಸಿಸುತ್ತಿದ್ದಾರೆ. ನಿರ್ದಿಷ್ಟ ಸಮುದಾಯದ ಪ್ರಾಬಲ್ಯವಿರುವ ಮತಗಟ್ಟೆಗಳನ್ನು ಗುರಿಯಾಗಿಸಿಕೊಂಡು, ಅರ್ಹ ಮತದಾರರ ಹೆಸರುಗಳನ್ನು ಮತದಾರರ ಪಟ್ಟಿಯಲ್ಲಿ ಉಳಿಸದಂತೆ ಮಾಡಲು ಬಿಜೆಪಿ ಮತ್ತು ಆರ್‌ಎಸ್‌ಎಸ್‌ಗೆ ಸಂಬಂಧಿಸಿದವರು ಸಂಚು ರೂಪಿಸಿದ್ದಾರೆ ಎಂದು ಆರೋಪಿಸಿದ್ದಾರೆ.

ಸಲ್ಲಿಕೆಯಾಗಿರುವ ಅರ್ಜಿಗಳಲ್ಲಿ ಗಣನೀಯ ಸಂಖ್ಯೆಯವು ಜಿ.ಎಸ್. ವಸಂತಲಕ್ಷ್ಮಿ ಅವರ ಹೆಸರಿನಲ್ಲಿವೆ ಎನ್ನಲಾಗಿದೆ. ಅವರು ತಮ್ಮನ್ನು ಬಿಜೆಪಿ ಬಿಎಲ್‌ಎ ಎಂದು ಗುರುತಿಸಿಕೊಂಡಿದ್ದಾರೆ. ಅವರ ಹೆಸರಿನಲ್ಲಿ ಸಲ್ಲಿಕೆಯಾಗಿರುವ ಹಲವು ಅರ್ಜಿಗಳಲ್ಲಿರುವ ಸಹಿಗಳು ಪರಸ್ಪರ ಭಿನ್ನವಾಗಿದ್ದು, ಗಮನಾರ್ಹ ವ್ಯತ್ಯಾಸಗಳು ಕಂಡುಬಂದಿವೆ ಎಂದು ದೂರುದಾರರು ಆರೋಪಿಸಿದ್ದಾರೆ. ಹೀಗಾಗಿ ಅರ್ಜಿಗಳನ್ನು ಬೇರೆ ಬೇರೆ ವ್ಯಕ್ತಿಗಳು ಸಲ್ಲಿಸಿರಬಹುದು ಅಥವಾ ಅವರ ಸಹಿಯನ್ನು ನಕಲು ಮಾಡಿರಬಹುದು ಎಂಬ ಅನುಮಾನ ಮೂಡಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಆರೋಪಿಗಳು ಸುಳ್ಳು ಮಾಹಿತಿ ನೀಡಿ ನಕಲಿ ದಾಖಲೆಗಳನ್ನು ಸೃಷ್ಟಿಸಿ ಇತರರಿಗೆ ಹಾನಿ ಉಂಟುಮಾಡುವ ಉದ್ದೇಶದಿಂದ ಸಂಚು ರೂಪಿಸಿದ್ದಾರೆ ಎಂದು ಆರೋಪಿಸಿದ್ದಾರೆ.

ಇದರ ಬೆನ್ನಲ್ಲೇ ವಂಚನೆ, ನಕಲಿ ದಾಖಲೆ ಸೃಷ್ಟಿ, ಅಪರಾಧ ಸಂಚು ಸೇರಿದಂತೆ ವಿವಿಧ ಆರೋಪಗಳಿಗೆ ಸಂಬಂಧಿಸಿದ ಕಲಂಗಳ ಅಡಿಯಲ್ಲಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ದಾಖಲೆಗಳನ್ನು ಪರಿಶೀಲಿಸಿದ ಬಳಿಕ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

SIR Row: ನೋಟಿಸ್ ನೀಡದೆ, ವಿಚಾರಣೆಯಿಲ್ಲದೆ ಮತದಾರರ ಹೆಸರು ತೆಗೆದುಹಾಕುವಂತಿಲ್ಲ- ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಉಜ್ಜಲ್ ಭುಯಾನ್!

ಏಷ್ಯನ್ ಗೇಮ್ಸ್‌ 206: ಭಾರತ ಚಿನ್ನದ ಪದಕ ಗೆದ್ದ ಬಳಿಕ ಜಪಾನ್‌ ಕ್ರೀಡಾಂಗಣವನ್ನು ಸ್ವಚ್ಛಗೊಳಿಸಿದ ಭಾರತೀಯ ಅಭಿಮಾನಿಗಳು! Video

ಕುಸಿದ ಅಮೆರಿಕ: ಬದಲಾಗ್ತಿದೆ ವಿಶ್ವದ ದೊಡ್ಡಣ್ಣನ ಸ್ಥಾನ; ಇನ್ಮುಂದೆ EMPs ಪ್ರಬಲ- EAM Jaishankar

'ನನಗೆ ಸಾವಿನ ಭಯವಿರಲಿಲ್ಲ': ವಿಮಾನವನ್ನು ಪತನಗೊಳಿಸುವುದೇ ಉದ್ದೇಶವಾಗಿತ್ತು! ಸಹ-ಪೈಲಟ್ ಹಮ್ಮಾಮಿ ಹೇಳಿಕೆ

2.5 ಲಕ್ಷ ರೂ ಲಂಚ ಪ್ರಕರಣ: DGCA ಅಧಿಕಾರಿ, ವಿಮಾನಯಾನ ಸಂಸ್ಥೆಯ ನಿರ್ದೇಶಕರನ್ನು ಬಂಧಿಸಿದ ಸಿಬಿಐ