ಬೆಂಗಳೂರು: 2018ರಲ್ಲಿ ಕೊಲೆ ಪ್ರಕರಣವೊಂದರಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ಅಪರಾಧಿ ಶಂಕರ್ ಎಂಬಾತನನ್ನು ಸುಪ್ರೀಂ ಕೋರ್ಟ್‌ನ ನಕಲಿ ಆದೇಶ ಸೃಷ್ಟಿಸಿ ಬಿಡುಗಡೆ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಜೈಲು ಡಿಐಜಿ ಸೋಮಶೇಖರ್ ಅವರನ್ನು ಪರಪ್ಪನ ಅಗ್ರಹಾರ ಪೊಲೀಸರು ಬಂಧಿಸಿದ್ದಾರೆ.
ಈ ನಕಲಿ ದಾಖಲೆಯನ್ನು ಜೈಲಿನ SDA ಆಗಿದ್ದ ಶ್ರೀಕಾಂತ್ ಎಸ್. ಎಂಬಾತ ಸೃಷ್ಟಿಸಿದ್ದಾನೆ ಎಂಬ ಆರೋಪ ಕೇಳಿಬಂದಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ಕೈದಿ ಶಂಕರ್ ಹಾಗೂ ನಕಲಿ ಆದೇಶ ಸೃಷ್ಟಿಸಿದ ಆರೋಪ ಎದುರಿಸುತ್ತಿರುವ ಶ್ರೀಕಾಂತ್ ಇಬ್ಬರನ್ನೂ ಈಗಾಗಲೇ ಬಂಧಿಸಲಾಗಿತ್ತು. ಇದೀಗ DIG ಸೋಮಶೇಖರ್ ಅವರ ಪಾತ್ರದ ಕುರಿತು ತನಿಖೆ ನಡೆಸಲಾಗುತ್ತಿದೆ.
2001ರಲ್ಲಿ ಕೊಲೆ, ಅಪಹರಣ-ಸುಲಿಗೆ ಪ್ರಕರಣದಲ್ಲಿ ಶಂಕರ್ ನನ್ನ ಬಂಧಿಸಲಾಗಿತ್ತು. ವಿಚಾರಣೆ ನಡೆಸಿದ ಕೋರ್ಟ್ ಅಪರಾಧಿಗೆ ಜೀವಾವಧಿ ಶಿಕ್ಷೆಗೆ ನೀಡಿತ್ತು. ಆದರೆ 2018ರಲ್ಲಿ ಅಪರಾಧಿಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ನಲ್ಲಿ ಕ್ರಿಮಿನಲ್ ಮೇಲ್ಮನವಿ ಸಲ್ಲಿಸಲಾಗಿದೆ. ಅದರಡಿ ಬಿಡುಗಡೆ ಆದೇಶ ನೀಡಲಾಗಿದೆ ಎಂದು ನಕಲಿ ಆದೇಶವನ್ನು ಜೈಲಾಧಿಕಾರಿಗಳಿಗೆ ನೀಡಿ ಬಿಡುಗಡೆ ಮಾಡಲಾಗಿತ್ತು.