ರೇಷನ್ ಕಾರ್ಡ್‌ ರದ್ದತಿಗೆ ಸಿಎಂಗೆ ಯುವಕನ ಖಡಕ್ ಪತ್ರ! AI Image
ರಾಜ್ಯ

ಖಾಸಗಿ ಶಾಲೆಗೆ ಲಕ್ಷ ಲಕ್ಷ ಫೀಸ್, ಕೈಯಲ್ಲಿ ಬಿಪಿಎಲ್ ಕಾರ್ಡ್: ರೇಷನ್ ಕಾರ್ಡ್‌ ರದ್ದತಿಗೆ ಸಿಎಂಗೆ ಯುವಕನ ಖಡಕ್ ಪತ್ರ!

ಖಾಸಗಿ ಶಾಲೆಗಳಿಗೆ ಲಕ್ಷ ಲಕ್ಷ ರೂಪಾಯಿ ಶುಲ್ಕ ನೀಡಿ ಮಕ್ಕಳನ್ನು ಓದಿಸುವ ಬಿಪಿಎಲ್ ಕಾರ್ಡ್‌ದಾರರ ರೇಷನ್ ಕಾರ್ಡ್‌ಗಳನ್ನು ತಕ್ಷಣವೇ ರದ್ದುಗೊಳಿಸಬೇಕು ಎಂದು ಒತ್ತಾಯಿಸಿ ಹೊಸನಗರದ ಯುವಕನೊಬ್ಬ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದ್ದಾನೆ. ಆ ಕುರಿತ ವರದಿ ಇಲ್ಲಿದೆ:

ಬೆಂಗಳೂರು: ಸರ್ಕಾರಿ ಶಾಲೆ ಬೇಡ, ಆದರೆ ಸರ್ಕಾರಿ ಯೋಜನೆಗಳು ಬೇಕೇ ಬೇಕು! ಇದು, ಅದೆಷ್ಟೋ ಜನರ ಆಸೆ, ಹಾಗಾಗಿಯೇ, ಲಕ್ಷಾಂತರ ಕುಟುಂಬಗಳು ತಮ್ಮ  ಮಕ್ಕಳನ್ನು ಖಾಸಗಿ ಶಾಲೆಗಳಿಗೆ ಸೇರಿಸಿ,  ಬಿಪಿಎಲ್ (ಬಡತನ ರೇಖೆಗಿಂತ ಕೆಳಗಿರುವ) ಪಡಿತರ ಚೀಟಿಗಳನ್ನು ಹೊಂದಿದ್ದಾರೆ. ಆದರೆ, ಈಗ ಅಂತಹವರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಆಗ್ರಹ ಕೇಳಿಬಂದಿದೆ. ಅದರಂತೆ, ಖಾಸಗಿ ಶಾಲೆಗಳಿಗೆ ಲಕ್ಷ ಲಕ್ಷ ರೂಪಾಯಿ ಶುಲ್ಕ ನೀಡಿ ಮಕ್ಕಳನ್ನು ಓದಿಸುವ ಬಿಪಿಎಲ್ ಕಾರ್ಡ್‌ದಾರರ ರೇಷನ್ ಕಾರ್ಡ್‌ಗಳನ್ನು ತಕ್ಷಣವೇ ರದ್ದುಗೊಳಿಸಬೇಕು ಎಂದು ಒತ್ತಾಯಿಸಿ ಹೊಸನಗರದ ಯುವಕನೊಬ್ಬ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದ್ದಾನೆ. ಆ ಕುರಿತ ವರದಿ ಇಲ್ಲಿದೆ:

ಯುವಕನ ವಾದವೇನು?

ಖಾಸಗಿ ಶಾಲೆಗಳಿಗೆ ಲಕ್ಷಾಂತರ ರೂಪಾಯಿ ಡೊನೇಷನ್ ಮತ್ತು ಫೀಸ್ ಕಟ್ಟಿ ಮಕ್ಕಳನ್ನು ಓದಿಸಲು ಶಕ್ತರಾಗಿರುವ ಕುಟುಂಬಗಳು ಆರ್ಥಿಕವಾಗಿ ಸಬಲರಾಗಿರುತ್ತಾರೆ. ಅವರು ಹೇಗೆ ಬಡತನ ರೇಖೆಗಿಂತ ಕೆಳಗಿನವರು ಆಗಲು ಸಾಧ್ಯ ಎಂದು ಯುವಕ ಪ್ರಶ್ನಿಸಿದ್ದಾನೆ. ಜೊತೆಗೆ, ಇಂತಹ ಅನರ್ಹರ ಬಿಪಿಎಲ್ ಕಾರ್ಡ್‌ಗಳನ್ನು ಸರ್ಕಾರ ಪರಿಶೀಲಿಸಿ ರದ್ದುಗೊಳಿಸಿದರೆ, ಉಚಿತ ರೇಷನ್ ಮತ್ತು ಸರ್ಕಾರದ ಸೌಲಭ್ಯಗಳು ನಿಜವಾದ ಬಡ ಕುಟುಂಬಗಳಿಗೆ ತಲುಪುತ್ತವೆ. ಜೊತೆಗೆ, ಈ ಕ್ರಮದಿಂದಾಗಿ ಪೋಷಕರು ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗಳಿಗೆ ಸೇರಿಸಲು ಪ್ರೇರೇಪಿತರಾಗುತ್ತಾರೆ ಹಾಗೂ ಸರ್ಕಾರಿ ಶಾಲೆಗಳು ಅಭಿವೃದ್ಧಿ ಹೊಂದುತ್ತವೆ ಎಂಬುದು ಯುವಕನ ಆಶಯವಾಗಿದೆ.

ಏತನ್ಮಧ್ಯೆ, ಈ ಪತ್ರ ವೈರಲ್ ಆಗುತ್ತಿದ್ದಂತೆ ನೆಟ್ಟಿಗರಲ್ಲಿ ಎರಡು ರೀತಿಯ ಅಭಿಪ್ರಾಯಗಳು ವ್ಯಕ್ತವಾಗುತ್ತಿವೆ. ಕೆಲವು ಜನರು ಯುವಕನ ಸಲಹೆಯನ್ನು ಸ್ವಾಗತಿಸಿದ್ದರೆ, ಇನ್ನು ಕೆಲವರು "ಬಡ ಕುಟುಂಬಗಳ ಮಕ್ಕಳು ಕಷ್ಟಪಟ್ಟು ಖಾಸಗಿ ಶಾಲೆಯಲ್ಲಿ ಓದಬಾರದೇ? ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣ ಸಿಗದ ಕಾರಣಕ್ಕೆ ಪೋಷಕರು ಸಾಲ ಮಾಡಿ ಖಾಸಗಿ ಶಾಲೆಗಳಿಗೆ ಕಳುಹಿಸುತ್ತಿರುತ್ತಾರೆ, ಹಾಗಂದ ಮಾತ್ರಕ್ಕೆ ಅವರ ಕಾರ್ಡ್ ರದ್ದು ಮಾಡುವುದು ತಪ್ಪು" ಎಂದು ಆಕ್ಷೇಪ ವ್ಯಕ್ತಪಡಿಸುತ್ತಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ದೆಹಲಿಯಲ್ಲಿ ಹೈಡ್ರಾಮಾ: EC ಕಚೇರಿ ಮುತ್ತಿಗೆಗೆ ಯತ್ನಿಸಿದ ರಾಹುಲ್, ಪ್ರಿಯಾಂಕಾ ಗಾಂಧಿ ಸೇರಿ INDIA ಒಕ್ಕೂಟದ ಹಲವು ಸಂಸದರು ಪೊಲೀಸ್ ವಶಕ್ಕೆ..!

SIR ವಿವಾದ: 'ಶಾಸಕ ಯತ್ನಾಳ್ ಬಣ್ಣ ಬಯಲು'; ವಿಜಯಪುರದಲ್ಲಿ ಬದುಕಿರುವ 8 ಮುಸ್ಲಿಂ ಮತದಾರರು 'ಸತ್ತಿದ್ದಾರೆ' ಎಂದು ಅರ್ಜಿ!

DIG ಸೋಮಶೇಖರ್ ಕಾಮಕಾಂಡ ಬಟಾಬಯಲು: ಅಪರಾಧಿ ಪತ್ನಿಗೆ ವಿಡಿಯೋ ಕಾಲ್; ಬೆತ್ತಲಾಗುವಂತೆ ಒತ್ತಡ!

ರೇಣುಕಾಸ್ವಾಮಿ ಕೊಲೆ ಪ್ರಕರಣ: ಜೈಲಿನಲ್ಲಿ ಪವಿತ್ರಾ ಗೌಡಗೆ ನೈಜಿರಿಯನ್ ಪ್ರಜೆಗಳ ಕಾಟ! ಕೋರ್ಟ್ ಗರಂ

ಏಷ್ಯನ್‌ ಗೇಮ್ಸ್‌ ವಿಜೇತರಿಗೆ ಸಿಎಂ ಅಭಿನಂದನೆ; ಚಿನ್ನದ ಪದಕ ವಿಜೇತರಿಗೆ 1 ಕೋಟಿ ನಗದು,ಗ್ರೂಪ್-ಬಿ ಹುದ್ದೆಗಳಿಗೆ ನೇರ ನೇಮಕಾತಿ!