ಶಿವಶಂಕರಪ್ಪ ಸಾಹುಕಾರ್​​ 
ರಾಜ್ಯ

KPSC ನೇಮಕಾತಿ ಹಗರಣ: EDಯಿಂದ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌, ಸದಸ್ಯೆ ಗೀತಾ ಬಂಧನ!

ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಎರಡನೇ ಬಾರಿ ಬೆಂಗಳೂರಿನ ಡಾಲರ್ಸ್ ಕಾಲೋನಿಯಲ್ಲಿರುವ ಶಿವಶಂಕರಪ್ಪ ಸಾಹುಕಾರ್ ಅವರ ನಿವಾಸದ ಮೇಲೆ ಇಡಿ ದಾಳಿ ಮಾಡಿ ಪರಿಶೀಲನೆ ನಡೆಸಿತ್ತು.

ಬೆಂಗಳೂರು: ರಾಜ್ಯದಲ್ಲಿ ತೀವ್ರ ಸಂಚಲನ ಸೃಷ್ಟಿಸಿರುವ ಕರ್ನಾಟಕ ಲೋಕಸೇವಾ ಆಯೋಗ(ಕೆಪಿಎಸ್ ಸಿ) ನಡೆಸಿದ್ದ ಪಶುವೈದ್ಯಾಧಿಕಾರಿ ಹುದ್ದೆಗಳ ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ(ಇಡಿ)ದ ಅಧಿಕಾರಿಗಳು ಮಂಗಳವಾರ ಕೆಪಿಎಸ್ ಸಿ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌ ಹಾಗೂ ಸದಸ್ಯೆ ಬಿವಿ ಗೀತಾ ಅವರನ್ನು ಬಂಧಿಸಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಎರಡನೇ ಬಾರಿ ಬೆಂಗಳೂರಿನ ಡಾಲರ್ಸ್ ಕಾಲೋನಿಯಲ್ಲಿರುವ ಶಿವಶಂಕರಪ್ಪ ಸಾಹುಕಾರ್ ಅವರ ನಿವಾಸದ ಮೇಲೆ ಇಡಿ ದಾಳಿ ಮಾಡಿ ಪರಿಶೀಲನೆ ನಡೆಸಿತ್ತು. ಈ ವೇಳೆ ಮನೆಯಲ್ಲೇ ಇದ್ದ ಶಿವಶಂಕರಪ್ಪ ಅವರನ್ನು ವಿಚಾರಣೆ ನಡೆಸಿದ ಇಡಿ ಅಧಿಕಾರಿಗಳು, ಬಳಿಕ ವಶಕ್ಕೆ ಪಡೆದುಕೊಂಡಿದ್ದಾರೆ.

ಇನ್ನೊಂದೆಡೆ ಇದೇ ಪ್ರಕರಣದಲ್ಲಿ ಕೆಪಿಎಸ್​ಸಿ ಸದಸ್ಯೆ ಬಿ.ವಿ.ಗೀತಾ ಅವರನ್ನು ಬೆಂಗಳೂರಿನ ಅವರ ಮನೆಯಲ್ಲೇ ಇಡಿ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ. ಗೀತಾ ಅವರು ಅಭ್ಯರ್ಥಿಗಳ ಜೊತೆ ನೇರ ಸಂಪರ್ಕ ಹೊಂದಿದ್ದ ಆರೋಪ ಎದುರಿಸುತ್ತಿದ್ದಾರೆ.

ಶಿವಶಂಕರಪ್ಪ ಅವರ ಸಂಬಂಧಿ ಸುಗುರೇಶ್ ಜಾಕಾ ತಪ್ಪೊಪ್ಪಿಗೆ ಮತ್ತು ಬಂಧಿತ ಐಎಎಸ್ ಅಧಿಕಾರಿ ಗ್ಯಾನೇಂದ್ರ ಅವರ ಹೇಳಿಕೆ ಆಧರಿಸಿ ಇಡಿ ದಾಳಿ ನಡೆಸಿದ್ದು, ನೇಮಕಾತಿಯಲ್ಲಿ ಅಕ್ರಮ ಮಾಡಲು ಸುಗುರೇಶ್ ಜಾಕಾಗೆ ಶಿವಶಂಕರಪ್ಪ ಸೂಚಿಸಿದ್ದರು. ಹೀಗಾಗಿ, ಶಿವಶಂಕರಪ್ಪ ಅವರಿಗೆ ಅಕ್ರಮದ ಬಗ್ಗೆ ಮೊದಲೇ ಗೊತ್ತಿತ್ತು ಎಂದು ಇಡಿ ಹೇಳಿದೆ.

ಪ್ರಕರಣದ ಹಿನ್ನೆಲೆ

ಪಶು ವೈದ್ಯಾಧಿಕಾರಿಗಳ ನೇಮಕಾತಿ ಪರೀಕ್ಷೆಯ ಫಲಿತಾಂಶ ಹೊರಬಿದ್ದ ತಕ್ಷಣ, ಸುಮಾರು 50ಕ್ಕೂ ಹೆಚ್ಚು ಪರೀಕ್ಷಾರ್ಥಿಗಳು ವಿಧಾನಸೌಧ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಆ ಬೆನ್ನಲ್ಲೇ ಮಧ್ಯವರ್ತಿಗಳು ಪ್ರತಿ ಪಶು ವೈದ್ಯಾಧಿಕಾರಿ ಹುದ್ದೆಗೆ 70 ಲಕ್ಷದಿಂದ 80 ಲಕ್ಷದವರೆಗೆ ಲಂಚ ಕೇಳುತ್ತಿರುವ ಆಡಿಯೋ ಸಂಭಾಷಣೆಗಳು ಬಹಿರಂಗಗೊಂಡಿದ್ದವು. ಪ್ರಕರಣದ ಗಂಭೀರತೆಯನ್ನು ಪರಿಗಣಿಸಿ ಸರ್ಕಾರವು ಇದರ ತನಿಖೆಯನ್ನು ಸಿಐಡಿ (CID)ಗೆ ವಹಿಸಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸಿಇಸಿ ವಿರುದ್ಧದ ವಿಪಕ್ಷಗಳ ಪ್ರತಿಭಟನೆ: ವಶಕ್ಕೆ ಪಡೆದ ಬೆನ್ನಲ್ಲೇ ರಾಹುಲ್, ಪ್ರಿಯಾಂಕಾ ಗಾಂಧಿ ಬಿಡುಗಡೆ

ಅಧಿಕಾರಿಯಂತೆ ನಟಿಸಿ ಆಪ್ ನಾಯಕನಿಗೆ ಧೋಕಾ; ಮದುವೆಯಾಗಿ ಆಭರಣಗಳೊಂದಿಗೆ ಮಹಿಳೆ ಪರಾರಿ!

ಆಪರೇಷನ್ ಸಿಂಧೂರ್, ರಕ್ಷಕ್‌ನಲ್ಲಿ ಪ್ರಮುಖ ಪಾತ್ರವಹಿಸಿದ್ದ ಅಶುತೋಷ್ ದೀಕ್ಷಿತ್ ವಾಯುಪಡೆಯ ನೂತನ ಮುಖ್ಯಸ್ಥ!

ಮಚ್ಛಾರ್ ಆರೋಗ್ಯಯಲ್ಲಿ 'ಸ್ಥಿರ ಸುಧಾರಣೆ': ಭಾರತೀಯ ರಾಯಭಾರ ಕಚೇರಿ

ರಾಹುಲ್-ಪ್ರಿಯಾಂಕಾ ವಶಕ್ಕೆ ಪಡೆದ ದೆಹಲಿ ಪೊಲೀಸರು: ಇಂಡಿಯಾ ಕೂಟದ 9 ಗಂಟೆಗಳ ಧರಣಿಗೆ ಬ್ರೇಕ್!