ಡಿ.ಕೆ ಶಿವಕುಮಾರ್ 
ರಾಜ್ಯ

ನನಗೆ ಮದವಿದ್ದರೆ ಇಳಿಸಲಿ; ಮಠಗಳು-ಸ್ವಾಮೀಜಿಗಳ ಬಗ್ಗೆ ನನಗೆ ಅಪಾರ ಗೌರವವಿದೆ: ಸಿಎಂ ಡಿ.ಕೆ ಶಿವಕುಮಾರ್

ರಾಜ್ಯದ ಮಠಗಳು, ಸ್ವಾಮೀಜಿಗಳ ಬಗ್ಗೆ ಯಾರಿಗೆ ಗೌರವ ಇದೆಯೋ ಇಲ್ಲವೋ ಗೊತ್ತಿಲ್ಲ. ಆದರೆ ನನಗೆ ಮಾತ್ರ ಅಪಾರವಾದ ಗೌರವವಿದೆ. ನಾನೂ ಕೂಡ ದೈವಭಕ್ತ. ನನ್ನ ಧರ್ಮದ ಮೇಲೆ ನನಗೆ ನಂಬಿಕೆಯಿದೆ.

ಬೆಂಗಳೂರು: ರಾಜ್ಯದ ಮಠಗಳು, ಸ್ವಾಮೀಜಿಗಳ ಬಗ್ಗೆ ನನಗೆ ಅಪಾರವಾದ ಗೌರವವಿದ್ದು, ಪ್ರತಿ ಸಂದರ್ಭದಲ್ಲಿಯೂ ಪಂಚಪೀಠಗಳ ಸ್ವಾಮೀಜಿಗಳ ಪಾದಗಳಿಗೆ ನಮಸ್ಕರಿಸಿ ಗೌರವ ತೋರಿದ್ದೇನೆ. ಸ್ವಾಮೀಜಿಗಳ ಬಗ್ಗೆ ಅಗೌರವವಾಗಿ ನಾನು ಮಾತನಾಡಿಲ್ಲ” ಎಂದು ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ಸ್ಪಷ್ಟಪಡಿಸಿದರು.

ವಿಧಾನಸೌಧದಲ್ಲಿ ಮಾಧ್ಯಮಗಳಿಗೆ ಶಿವಕುಮಾರ್ ಅವರು ಮಂಗಳವಾರ ಪ್ರತಿಕ್ರಿಯೆ ನೀಡಿದರು. ಇತ್ತೀಚೆಗೆ ವೀರಶೈವ ಸ್ವಾಮೀಜಿಗಳ ಕಾರ್ಯಕ್ರಮದಲ್ಲಿ ನಾನು ಯಾವ ಸ್ವಾಮೀಜಿಗಳಿಗೂ ಅಗೌರವದಿಂದ ಮಾತನಾಡಿಲ್ಲ. ಅಲ್ಲಿ ನೆರೆದಿದ್ದ ಜನರಿಗೆ ‘ನೀವು ನಮ್ಮ ರಕ್ಷಣೆ, ಸೇವೆ ಮಾಡಬೇಕು, ನಾವೂ ನಿಮಗೆ ಸಹಾಯ ಮಾಡುತ್ತೇವೆ ಎಂದಿದ್ದೆ’.

ರಾಜ್ಯದ ಮಠಗಳು, ಸ್ವಾಮೀಜಿಗಳ ಬಗ್ಗೆ ಯಾರಿಗೆ ಗೌರವ ಇದೆಯೋ ಇಲ್ಲವೋ ಗೊತ್ತಿಲ್ಲ. ಆದರೆ ನನಗೆ ಮಾತ್ರ ಅಪಾರವಾದ ಗೌರವವಿದೆ. ನಾನೂ ಕೂಡ ದೈವಭಕ್ತ. ನನ್ನ ಧರ್ಮದ ಮೇಲೆ ನನಗೆ ನಂಬಿಕೆಯಿದೆ. ಮಾನವ ಧರ್ಮಕ್ಕೆ ಜಯವಾಗಲಿ. ಧರ್ಮದಿಂದಲೇ ವಿಶ್ವಕ್ಕೆ ಶಾಂತಿ ಎಂದು ನಂಬಿರುವವನು ನಾನು” ಎಂದರು.

“ಕ್ರೈಸ್ತರು, ಬೌದ್ಧರು, ಪರಿಶಿಷ್ಟರು, ಒಕ್ಕಲಿಗರು, ಲಿಂಗಾಯತರು, ಹಿಂದುಳಿದವರು, ಅಲ್ಪಸಂಖ್ಯಾತರೆಲ್ಲರೂ ಒಂದೇ ಎನ್ನುವ ಭಾವನೆಯಿಂದ ರಾಜಕೀಯ ಬದುಕನ್ನು ಪ್ರಾರಂಭಿಸಿದವನು ನಾನು. ಇದನ್ನು ಕೆಲವರು ತಿರುಚಿ, ಬಾಯಿಗೆ ಬಂದಂತೆ ಮಾತನಾಡುತ್ತಾರೆ. ಡಿ ಕೆ ಶಿವಕುಮಾರ್ ಗೆ ಅಧಿಕಾರದ ಮದ ಬಂದಿದೆ ಎಂದು ಹೇಳುತ್ತಾರೆ. ನನಗೆ ಮದವಿದ್ದರೆ ಇಳಿಸಳಿ. ನಾನೇನು ಬೇಜಾರು ಮಾಡಿಕೊಳ್ಳುವುದಿಲ್ಲ” ಎಂದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

KPSC ನೇಮಕಾತಿ ಹಗರಣ: EDಯಿಂದ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌, ಸದಸ್ಯೆ ಗೀತಾ ಬಂಧನ!

ಚು.ಆಯೋಗದ ವಿರುದ್ಧ INDIA ಪ್ರತಿಭಟನೆ; 'ಕೈ' ನಾಯಕರು ಪೊಲೀಸ್ ವಶಕ್ಕೆ: ವ್ಯಾನ್ ನಿಂದ ಇಳಿದು ರಾಹುಲ್ ಜೊತೆ ಮರದ ಕೆಳಗೆ ಕುಳಿತ ಪ್ರಿಯಾಂಕ!

ಬೆಂಗಳೂರಿನಲ್ಲಿ 5 ಪ್ರತ್ಯೇಕ ಕಮಿಷನರೇಟ್‌ ಸ್ಥಾಪನೆ; 1,022 ಹೊಸ ಹುದ್ದೆ ಸೃಷ್ಟಿಗೆ ಸಚಿವ ಸಂಪುಟ ಅಸ್ತು

ಹಬ್ಬಗಳ ಹೊತ್ತಲ್ಲೆ ಕಾಂಗ್ರೆಸ್‌ನಿಂದ ಜನತೆಗೆ ಮತ್ತೊಂದು ಶಾಕ್: Nandini ಹಾಲಿನ ದರ ಹೆಚ್ಚಳಕ್ಕೆ ಸಂಪುಟ ಸಮ್ಮತಿ, ಲೀಟರ್‌ಗೆ 8 ರೂ. ಏರಿಕೆ?

ನೈಸ್ ಯೋಜನೆ ನನ್ನ ಕೂಸಾದರೆ, ಸೂಲಗಿತ್ತಿ ಯಾರು? ನನ್ನ ಕಿಡ್ನಿಗೆ ಸಮಸ್ಯೆ ಇರಬಹುದು, ಬ್ರೇನ್‌ಗೆ ಅಲ್ಲ: ಕಾಂಗ್ರೆಸ್ ವಿರುದ್ಧ ಗುಡುಗಿದ ದೇವೇಗೌಡ