ಚಿಕ್ಕಮಗಳೂರು: ಚಿಕ್ಕಮಗಳೂರು ತಾಲೂಕಿನ ಮರ್ಲೆ ಗ್ರಾಮದಲ್ಲಿ ದಸರಾ ರಜೆ ಹಿನ್ನೆಲೆಯಲ್ಲಿ ಕೆರೆಯಲ್ಲಿ ಈಜಲು ಹೋಗಿ ಮೂವರು ಬಾಲಕರು ಸಾವನ್ನಪ್ಪಿದ್ದಾರೆ. ಮೃತರನ್ನು 12 ವರ್ಷದ ಲಿಖಿತ್, ಭುವನ್ ಮತ್ತು ತರುಣ್ ಎಂದು ಗುರುತಿಸಲಾಗಿದೆ.
ಈಜು ಬಾರದಿದ್ದರೂ ಮೂವರು ಬಾಲಕರು ಕೆರೆಗೆ ಇಳಿದಿದ್ದರು. ಇನ್ನು ನೀರಿನ ಸೆಳೆತಕ್ಕೆ ಸಿಲುಕಿ ಮೂವರು ಮುಳುಗಿ ಸಾವನ್ನಪ್ಪಿದ್ದಾರೆ. ಸ್ಥಳೀಯರು ಕೆರೆಯಿಂದ ಮೃತ ದೇಹಗಳನ್ನು ಹೊರತೆಗೆದಿದ್ದು, ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು.