ಎಸ್ ಐ ಆರ್ ಪ್ರಕ್ರಿಯೆ (ಸಂಗ್ರಹ ಚಿತ್ರ) 
ರಾಜ್ಯ

ಗ್ರೇಟರ್ ಬೆಂಗಳೂರು ವ್ಯಾಪ್ತಿಯಲ್ಲಿ SIR ಪ್ರಕ್ರಿಯೆಗೆ ವೇಗ: ಹೆಚ್ಚುವರಿಯಾಗಿ 1,117 ಅಧಿಕಾರಿಗಳ ನೇಮಕ..!

ಮತದಾರರ ಪಟ್ಟಿ ಪರಿಷ್ಕರಣೆ ಪ್ರಕ್ರಿಯೆಗಾಗಿ ಜಿಬಿಎ ವ್ಯಾಪ್ತಿಯಲ್ಲಿ 814 ವಿಚಾರಣಾ ಕೇಂದ್ರಗಳನ್ನು ಸ್ಥಾಪಿಸಲಾಗಿದೆ. 1,117 ಸಹಾಯಕ ಮತದಾರರ ನೋಂದಣಿ ಅಧಿಕಾರಿಗಳ ನೇಮಕದೊಂದಿಗೆ ಇದೀಗ ಕಾರ್ಯನಿರ್ವಹಿಸುತ್ತಿರುವ ಒಟ್ಟು ಅಧಿಕಾರಿಗಳ ಸಂಖ್ಯೆ 1,193ಕ್ಕೆ ಏರಿಕೆಯಾಗಿದೆ.

ಬೆಂಗಳೂರು: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ವೇಳೆ ಮತದಾರರ ಹೆಸರುಗಳನ್ನು ಉದ್ದೇಶಪೂರ್ವಕವಾಗಿ ಆಯ್ದು ತೆಗೆದುಹಾಕಲಾಗುತ್ತಿದೆ ಎಂಬ ಆರೋಪಗಳು ಹಾಗೂ ರಾಜಕೀಯ ಪಕ್ಷಗಳಿಂದ ಪೊಲೀಸ್ ದೂರುಗಳು ಕೇಳಿಬರುತ್ತಿರುವ ಹಿನ್ನೆಲೆಯಲ್ಲಿ, ಗ್ರೇಟರ್ ಬೆಂಗಳೂರು ಪ್ರಾಧಿಕಾರದ (ಜಿಬಿಎ) ವ್ಯಾಪ್ತಿಯಲ್ಲಿ ಎಸ್‌ಐಆರ್‌ ಪ್ರಕ್ರಿಯೆಯನ್ನು ಚುರುಕುಗೊಳಿಸಲು ಹೆಚ್ಚುವರಿಯಾಗಿ 1,117 ಸಹಾಯಕ ಮತದಾರರ ನೋಂದಣಿ ಅಧಿಕಾರಿಗಳನ್ನು ನೇಮಕ ಮಾಡಲಾಗಿದೆ.

ಬೆಂಗಳೂರು ನಗರ ಜಿಲ್ಲೆಯ ಮತದಾರರ ಪಟ್ಟಿಯ ಎಸ್‌ಐಆರ್‌ಗೆ ಸಂಬಂಧಿಸಿದ ಹಕ್ಕುಗಳು ಮತ್ತು ಆಕ್ಷೇಪಣೆಗಳ ಕುರಿತು ವಿಶೇಷ ಆಯುಕ್ತೆ (ಚುನಾವಣೆ) ಶಿಲ್ಪಾ ನಾಗ್ ಮಂಗಳವಾರ ಮಾಧ್ಯಮಗಳಿಗೆ ಮಾಹಿತಿ ನೀಡಿದರು.

ಮತದಾರರ ಪಟ್ಟಿ ಪರಿಷ್ಕರಣೆ ಪ್ರಕ್ರಿಯೆಗಾಗಿ ಜಿಬಿಎ ವ್ಯಾಪ್ತಿಯಲ್ಲಿ 814 ವಿಚಾರಣಾ ಕೇಂದ್ರಗಳನ್ನು ಸ್ಥಾಪಿಸಲಾಗಿದೆ. 1,117 ಸಹಾಯಕ ಮತದಾರರ ನೋಂದಣಿ ಅಧಿಕಾರಿಗಳ ನೇಮಕದೊಂದಿಗೆ ಇದೀಗ ಕಾರ್ಯನಿರ್ವಹಿಸುತ್ತಿರುವ ಒಟ್ಟು ಅಧಿಕಾರಿಗಳ ಸಂಖ್ಯೆ 1,193ಕ್ಕೆ ಏರಿಕೆಯಾಗಿದೆ.

ಸಾರ್ವಜನಿಕರಿಗೆ ಅನುಕೂಲವಾಗುವಂತೆ ವಿಚಾರಣೆ ಪ್ರಕ್ರಿಯೆಗಾಗಿ ಚುನಾವಣಾ ಆಯೋಗವು ಪ್ರಮಾಣಿತ ಕಾರ್ಯಾಚರಣಾ ವಿಧಾನ (ಎಸ್‌ಒಪಿ) ರೂಪಿಸಿದೆ. ಎಸ್‌ಐಆರ್‌ ಪ್ರಕ್ರಿಯೆಯಲ್ಲಿ ‘ಮ್ಯಾಪ್ ಮಾಡಲಾಗಿಲ್ಲ’ ಅಥವಾ ‘ತಾರ್ಕಿಕ ವ್ಯತ್ಯಾಸ’ ಎಂದು ಉಲ್ಲೇಖಿಸಿ ನೋಟಿಸ್ ನೀಡಿದ್ದರೆ, ಅಥವಾ ನಮೂನೆ-6 ಮತ್ತು ನಮೂನೆ-7ಕ್ಕೆ ಸಂಬಂಧಿಸಿದ ದಾಖಲೆಗಳ ಪರಿಶೀಲನೆ ಅಗತ್ಯವಿದ್ದರೆ, ಮತದಾರರ ನೋಂದಣಿ ಅಧಿಕಾರಿಗಳು ಅಥವಾ ಮತಗಟ್ಟೆ ಮಟ್ಟದ ಅಧಿಕಾರಿಗಳು ಮತದಾರರ ಮನೆಗೆ ತೆರಳಿ ಅಗತ್ಯ ದಾಖಲೆಗಳನ್ನು ಪಡೆದು, ಪರಿಶೀಲನೆ ನಡೆಸಿ ಆನ್‌ಲೈನ್‌ನಲ್ಲಿ ಅಪ್‌ಲೋಡ್ ಮಾಡಲಿದ್ದಾರೆ.

ಹೀಗಾಗಿ ಇಂತಹ ಮತದಾರರು ವಿಚಾರಣೆಗೆ ಖುದ್ದಾಗಿ ಹಾಜರಾಗುವ ಅಗತ್ಯವಿಲ್ಲ. ವಿಶೇಷ ಸಂದರ್ಭಗಳಲ್ಲಿ ಮತದಾರರ ನೋಂದಣಿ ಅಧಿಕಾರಿಗಳ ನಿರ್ಧಾರದಂತೆ ವಿಚಾರಣಾ ಪ್ರಕ್ರಿಯೆಯನ್ನು ಆನ್‌ಲೈನ್‌ನಲ್ಲಿಯೂ ನಡೆಸಲಾಗುತ್ತದೆ ಎಂದು ಹೇಳಿದ್ದಾರೆ.

ಎಸ್‌ಐಆರ್‌ ದತ್ತಾಂಶದ ಪ್ರಕಾರ ಜಿಬಿಎ ವ್ಯಾಪ್ತಿಯಲ್ಲಿ 56 ಲಕ್ಷಕ್ಕೂ ಹೆಚ್ಚು ಮತದಾರರಿದ್ದಾರೆ. ಈ ಪೈಕಿ 24 ಲಕ್ಷಕ್ಕೂ ಹೆಚ್ಚು ನೋಟಿಸ್‌ಗಳನ್ನು ನೀಡಲಾಗಿದೆ. ಎಲ್ಲ ನೋಟಿಸ್‌ಗಳನ್ನೂ ಈಗಾಗಲೇ ತಲುಪಿಸಲಾಗಿದ್ದು, ಯಾವುದೇ ಕಾರಣಕ್ಕೂ ಅರ್ಹ ಮತದಾರರ ಹೆಸರು ಮತದಾರರ ಪಟ್ಟಿಯಿಂದ ಹೊರಗುಳಿಯದಂತೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

ಪ್ರಸ್ತುತ 3,70,329 ನೋಟಿಸ್‌ಗಳ ವಿಚಾರಣೆ ಬಾಕಿ ಉಳಿದಿದೆ. ನಿಗದಿತ ಅವಧಿಯೊಳಗೆ ವಿಚಾರಣೆ ಪ್ರಕ್ರಿಯೆ ಪೂರ್ಣಗೊಳಿಸಲು ಸೂಕ್ಷ್ಮ ಯೋಜನೆ ರೂಪಿಸಲಾಗಿದೆ.

ಇದುವರೆಗೆ ನಮೂನೆ-6, 7 ಮತ್ತು 8ಕ್ಕೆ ಸಂಬಂಧಿಸಿದ ಒಟ್ಟು 5,42,893 ಅರ್ಜಿಗಳು ಸ್ವೀಕರಿಸಲಾಗಿದೆ. ಈ ಪೈಕಿ 1,02,712 ಅರ್ಜಿಗಳನ್ನು ಅಂಗೀಕರಿಸಲಾಗಿದ್ದು, 3,89,698 ಅರ್ಜಿಗಳು ಬಾಕಿ ಉಳಿದಿವೆ. ಬಾಕಿ ಇರುವ ಅರ್ಜಿಗಳನ್ನು ಚುನಾವಣಾ ಆಯೋಗದ ನಿಯಮಗಳಂತೆ ಪರಿಶೀಲಿಸಿ ವಿಲೇವಾರಿ ಮಾಡಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.

18 ವರ್ಷ ಪೂರ್ಣಗೊಳಿಸಿರುವ ಹಾಗೂ ಮೊದಲ ಬಾರಿಗೆ ಮತದಾರರಾಗಿ ನೋಂದಾಯಿಸಿಕೊಳ್ಳಲು ಅರ್ಹರಾಗಿರುವವರಿಗೆ ನಮೂನೆ-6 ಒದಗಿಸಬೇಕು ಎಂದು ಚುನಾವಣಾ ಆಯೋಗ ಸೂಚಿಸಿದೆ. ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆಯಾಗದಿರುವ ಅರ್ಹ ವ್ಯಕ್ತಿಗಳಿಗೂ ಇದೇ ನಮೂನೆಯ ಮೂಲಕ ನೋಂದಣಿಗೆ ಅವಕಾಶ ಕಲ್ಪಿಸಬೇಕು ಎಂದು ಸೂಚಿಸಲಾಗಿದೆ.

ಎಸ್‌ಐಆರ್‌ ಪ್ರಕ್ರಿಯೆ ಪೂರ್ಣಗೊಂಡ ಬಳಿಕ ಅರ್ಹರೆಲ್ಲರನ್ನೂ ಮತದಾರರ ಪಟ್ಟಿಗೆ ಸೇರ್ಪಡೆಗೊಳಿಸಲು ವಿಶೇಷ ಅಭಿಯಾನಗಳು ಹಾಗೂ ಶಿಬಿರಗಳನ್ನು ಆಯೋಜಿಸಲಾಗುವುದು ಎಂದು ಶಿಲ್ಪಾ ನಾಗ್ ತಿಳಿಸಿದರು.

ದಿನಾಂಕಗಳು...

  • ಆಗಸ್ಟ್ 24, 2026: ಕರಡು ಮತದಾರರ ಪಟ್ಟಿ ಪ್ರಕಟಣೆ

  • ಆಗಸ್ಟ್ 24ರಿಂದ ಸೆಪ್ಟೆಂಬರ್ 23ರವರೆಗೆ: ಹಕ್ಕುಗಳು ಮತ್ತು ಆಕ್ಷೇಪಣೆ ಸಲ್ಲಿಕೆ ಅವಧಿ

  • ಆಗಸ್ಟ್ 24ರಿಂದ ಅಕ್ಟೋಬರ್ 22ರವರೆಗೆ: ಹಕ್ಕುಗಳು ಮತ್ತು ಆಕ್ಷೇಪಣೆಗಳ ವಿಲೇವಾರಿ

  • ಅಕ್ಟೋಬರ್ 27, 2026: ಅಂತಿಮ ಮತದಾರರ ಪಟ್ಟಿ ಪ್ರಕಟಣೆ

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ನನ್ನ ವಿರುದ್ಧ 100 ಎಫ್‌ಐಆರ್‌ ದಾಖಲಿಸಿ ಹೆದರಲ್ಲ, ಪ್ರತಿಯೊಂದೂ ನನಗೆ ಪದಕ': ರಾಹುಲ್ ಗಾಂಧಿ

CM ಆಗಲು ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಸ್ಟಿಂಗ್ ಆಪರೇಷನ್; ಈಗ ಸಚಿವರ ವಿರುದ್ಧವೂ ಅದೇ ತಂತ್ರ: ಕುಮಾರಸ್ವಾಮಿ ಗಂಭೀರ ಆರೋಪ

ಕಾರ್ಮಿಕರ ಆರೋಗ್ಯ ತಪಾಸಣೆ ಹೆಸರಲ್ಲಿ 800 ಕೋಟಿ ರೂ. ಲೂಟಿ; ಸಂತೋಷ್ ಲಾಡ್ ರಾಜೀನಾಮೆಗೆ ಆರಗ ಜ್ಞಾನೇಂದ್ರ ಆಗ್ರಹ

ಹೆನ್ರಿ ಕಗನ್, ಕೆನ್ಸೊ ಸೊವೈಗೆ 2026ರ ರಸಾಯನಶಾಸ್ತ್ರದ ನೊಬೆಲ್ ಪ್ರಶಸ್ತಿ

'ನಾನು ಕ್ಯಾಬ್‌ನಲ್ಲಿ ಓಡಾಡೋ ಹುಡುಗಿ ಕಣ್ರೋ.. ಹೋಗ್ಲಿ ಪಾಪ ಅಂತಾ ಬಸ್`ನಲ್ಲಿ ಬಂದೆ': MTC ಬಸ್‌ನಲ್ಲಿ ಕುಡಿದ ಮತ್ತಿನಲ್ಲಿ ಯುವತಿ ರಂಪಾಟ, Video ವೈರಲ್