ಅಮೆಜಾನ್ ಕಚೇರಿಯ ಹೊರಗೆ ಟ್ರಾನ್ಸ್ ಫಾರ್ಮರ್ ಸ್ಫೋಟ  
ರಾಜ್ಯ

ಬೆಂಗಳೂರು: ಅಮೆಜಾನ್ ಕಚೇರಿ ಹೊರಗೆ ಟ್ರಾನ್ಸ್‌ಫಾರ್ಮರ್ ಸ್ಫೋಟ; ಪಾದಚಾರಿಗೆ ಗಾಯ; Video Viral

ಸ್ಫೋಟದ ವೇಳೆ ನೆಲಕ್ಕೆ ಬಿದ್ದ ಪರಿಣಾಮ, ಓರ್ವ ಪಾದಚಾರಿಗೆ ಗಾಯಗಳಾಗಿವೆ. ಅವರ ಕೈಗಳಿಗೆ ತೀವ್ರ ಸುಟ್ಟ ಗಾಯಗಳಾದರೆ, ಮತ್ತೊಬ್ಬರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಸಮೀಪದಲ್ಲಿ ನಡೆದುಕೊಂಡು ಹೋಗುತ್ತಿದ್ದ ವಿದ್ಯಾರ್ಥಿನಿಯೊಬ್ಬಳು ಯಾವುದೇ ಗಾಯಗಳಿಲ್ಲದೆ ಪಾರಾಗಿದ್ದಾಳೆ.

ಬೆಂಗಳೂರು: ಈಶಾನ್ಯ ಬೆಂಗಳೂರಿನ ಬಾಗಲೂರು ಕ್ರಾಸ್ ಸಮೀಪದ ಅಮೆಜಾನ್ ಕಚೇರಿಯ ಹೊರಭಾಗದ ಫುಟ್‌ಪಾತ್‌ನಲ್ಲಿ ಅಳವಡಿಸಲಾಗಿದ್ದ ಟ್ರಾನ್ಸ್‌ಫಾರ್ಮರ್ ಬಾಕ್ಸ್‌ವೊಂದು ಬುಧವಾರ ಬೆಳಗ್ಗೆ 9.49ರ ಸುಮಾರಿಗೆ ಸ್ಫೋಟಗೊಂಡಿದ್ದು, ಫುಟ್‌ಪಾತ್‌ನಲ್ಲಿ ನಡೆದುಕೊಂಡು ಹೋಗುತ್ತಿದ್ದ ಪಾದಚಾರಿಯೊಬ್ಬರು ಗಾಯಗೊಂಡಿದ್ದಾರೆ.

ಸ್ಫೋಟದ ವೇಳೆ ನೆಲಕ್ಕೆ ಬಿದ್ದ ಪರಿಣಾಮ, ಓರ್ವ ಪಾದಚಾರಿಗೆ ಗಾಯಗಳಾಗಿವೆ. ಅವರ ಕೈಗಳಿಗೆ ತೀವ್ರ ಸುಟ್ಟ ಗಾಯಗಳಾದರೆ, ಮತ್ತೊಬ್ಬರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಸಮೀಪದಲ್ಲಿ ನಡೆದುಕೊಂಡು ಹೋಗುತ್ತಿದ್ದ ವಿದ್ಯಾರ್ಥಿನಿಯೊಬ್ಬಳು ಯಾವುದೇ ಗಾಯಗಳಿಲ್ಲದೆ ಪಾರಾಗಿದ್ದಾಳೆ.

ಅಮೆಜಾನ್ ಕಚೇರಿ ಆವರಣದ ಗೇಟ್ ನಂ. 3ರ ಹೊರಭಾಗದಲ್ಲಿ ಈ ಘಟನೆ ನಡೆದಿದ್ದು, ಯಲಹಂಕ ಓಲ್ಡ್ ಟೌನ್ ಪೊಲೀಸ್ ಠಾಣೆ ವ್ಯಾಪ್ತಿಗೆ ಬರುತ್ತದೆ.

ಗಾಯಗೊಂಡವರನ್ನು ಮೊಹಮ್ಮದ್ ಅಫ್ರೋಜ್ ಎಂದು ಗುರುತಿಸಲಾಗಿದೆ. ಘಟನೆ ಕುರಿತು ಪ್ರತಿಕ್ರಿಯಿಸಿದ ಈಶಾನ್ಯ ವಿಭಾಗದ ಉಪ ಪೊಲೀಸ್ ಆಯುಕ್ತ ಮಿಥುನ್ ಕುಮಾರ್ ಸತೇಡ್, ಇದು ಅಮೆಜಾನ್ ಕಚೇರಿಯ ಗೇಟ್ ನಂ. 3ರ ಬಳಿ ನಡೆದಿದೆ. ಬಾಗಲೂರು ಕ್ರಾಸ್ ಸಮೀಪ ಯಲಹಂಕ ಓಲ್ಡ್ ಟೌನ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮೊಹಮ್ಮದ್ ಅಫ್ರೋಜ್ ಗಾಯಗೊಂಡಿದ್ದಾರೆ. ಅವರು ಸುರಕ್ಷಿತವಾಗಿದ್ದು, ಸದ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿಸಿದ್ದಾರೆ.

ಹಠಾತ್ ಸಂಭವಿಸಿದ ಸ್ಫೋಟದ ದೃಶ್ಯವು ಘಟನೆಯನ್ನು ಕಣ್ಣಾರೆ ಕಂಡ ಅರುಣ್ ಜಿ ಅವರ ಕಾರಿನ ಡ್ಯಾಶ್‌ಕ್ಯಾಮ್‌ನಲ್ಲಿ ಸೆರೆಯಾಗಿದೆ.

ನನ್ನ ಡ್ಯಾಶ್‌ಕ್ಯಾಮ್‌ನಲ್ಲಿ ಘಟನೆ ಸೆರೆಯಾಗಿದೆ. ದೊಡ್ಡ ಸಂಖ್ಯೆಯಲ್ಲಿ ಜನರು ಜಮಾಯಿಸಿದ್ದರಿಂದ ನಾನು ಕಾರಿನಿಂದ ಹೊರಬರಲು ಸಾಧ್ಯವಾಗಲಿಲ್ಲ. ನನ್ನ ಮಕ್ಕಳು ಕಾರಿನೊಳಗಿದ್ದರು ಎಂದು ಅರುಣ್ ಜಿ ತಿಳಿಸಿದ್ದಾರೆ.

ವಿದ್ಯುತ್ ದೋಷಕ್ಕೆ ಕಾರಣವೇನು ಎಂಬುದರ ಕುರಿತು ಹೆಚ್ಚಿನ ತನಿಖೆ ಮುಂದುವರಿದಿದೆ.

ಸುರಕ್ಷತೆಯ ಆತಂಕ

ಈ ಸ್ಫೋಟವು ಪಾದಚಾರಿ ಮಾರ್ಗಗಳಲ್ಲಿರುವ, ಅದರಲ್ಲೂ ವಿಶೇಷವಾಗಿ ಶಾಲಾ ಮಕ್ಕಳು ಮತ್ತು ರಸ್ತೆಯನ್ನು ಬಳಸುವ ಇತರ ದುರ್ಬಲ ವರ್ಗದವರು ಹೆಚ್ಚಾಗಿ ಓಡಾಡುವ ಪ್ರದೇಶಗಳಲ್ಲಿರುವ ಟ್ರಾನ್ಸ್‌ಫಾರ್ಮರ್‌ಗಳ ಸುರಕ್ಷತೆಯ ಕುರಿತು ಆತಂಕವನ್ನು ಮರುಕಳಿಸುವಂತೆ ಮಾಡಿದೆ.

2022ರಲ್ಲಿ ಬೆಂಗಳೂರಿನಲ್ಲಿ ಸಂಭವಿಸಿದ ಇದೇ ರೀತಿಯ ಟ್ರಾನ್ಸ್‌ಫಾರ್ಮರ್ ಸ್ಫೋಟವೊಂದರಲ್ಲಿ, ತಂದೆ ಮತ್ತು ಮಗಳು ಮೃತಪಟ್ಟಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಜ್ಯ ಸರ್ಕಾರಕ್ಕೆ 'ಸ್ಟಿಂಗ್ ಆಪರೇಷನ್' ಆತಂಕ: ಟ್ರ್ಯಾಪ್‌ಗೆ ಯತ್ನ ನಡೆಯುತ್ತಿದೆ, ಹುಷಾರಾಗಿರಿ ; 5 ಸಚಿವರಿಗೆ ಡಿಕೆಶಿ ಎಚ್ಚರಿಕೆ ಸಂದೇಶ

‘ವೈಯಕ್ತಿಕ ಮಹತ್ವಾಕಾಂಕ್ಷೆ ಅಲ್ಲ, ಧ್ಯೇಯಕ್ಕಾಗಿ ಬದುಕಿದ್ದೇನೆ, ದೇಶದ ಜನತೆಗೆ ತಲೆಬಾಗುತ್ತೇನೆ’: ಆಡಳಿತದಲ್ಲಿ 25 ವರ್ಷ ಪೂರೈಸಿದ ಪ್ರಧಾನಿ ಮೋದಿ ಮಾತು; Video

ಹಾಸನದ ಹೇಮಾವತಿ ನಾಲೆಯಲ್ಲಿ ಪ್ಲಾಸ್ಟಿಕ್‌ ಚೀಲದಲ್ಲಿ ವೃದ್ಧೆಯ ಶವ ಪತ್ತೆ: ಕೊಲೆ ಶಂಕೆ

ರಷ್ಯಾ ಕರಾವಳಿಯಲ್ಲಿ ಡ್ರೋನ್ ದಾಳಿ: ಹೊತ್ತಿ ಉರಿದ ತೈಲ ಟ್ಯಾಂಕರ್‌, 23 ಭಾರತೀಯ ಸಿಬ್ಬಂದಿ ಪಾರು..!

Lionel Messi: 21 ವರ್ಷಗಳ ಬಳಿಕ ತವರಿನಲ್ಲೇ ಫುಟ್ಬಾಲ್​ ದಿಗ್ಗಜ ಲಿಯೋನೆಲ್ ಮೆಸ್ಸಿ ಭಾವುಕ ವಿದಾಯ; ಹೇಗಿತ್ತು ನೋಡಿ ಅಂತಿಮ ಪಂದ್ಯ; Video