ಶಿವಶಂಕರಪ್ಪ ಸಾಹುಕಾರ್ - ಗೀತಾ 
ರಾಜ್ಯ

KPSC ನೇಮಕಾತಿ ಹಗರಣ: ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್, ಸದಸ್ಯೆ ಗೀತಾ 13 ದಿನ ED ಕಸ್ಟಡಿಗೆ

ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳವಾರ ಎರಡನೇ ಬಾರಿ ಬೆಂಗಳೂರಿನ ಡಾಲರ್ಸ್ ಕಾಲೋನಿಯಲ್ಲಿರುವ ಶಿವಶಂಕರಪ್ಪ ಸಾಹುಕಾರ್ ಅವರ ನಿವಾಸದ ಮೇಲೆ ದಾಳಿ ನಡೆಸಿದ್ದ ಇಡಿ, ಮನೆಯಲ್ಲೇ ಇದ್ದ ಶಿವಶಂಕರಪ್ಪ ಅವರನ್ನು ಬಂಧಿಸಿತ್ತು.

ಬೆಂಗಳೂರು: ರಾಜ್ಯದಲ್ಲಿ ತೀವ್ರ ಸಂಚಲನ ಸೃಷ್ಟಿಸಿರುವ ಕರ್ನಾಟಕ ಲೋಕಸೇವಾ ಆಯೋಗ(ಕೆಪಿಎಸ್ ಸಿ) ನಡೆಸಿದ್ದ ಪಶುವೈದ್ಯಾಧಿಕಾರಿ ಹುದ್ದೆಗಳ ನೇಮಕಾತಿ ಹಗರಣದಲ್ಲಿ ಜೈಲು ಪಾಲಾಗಿರುವ ಕೆಪಿಎಸ್ ಸಿ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌ ಹಾಗೂ ಸದಸ್ಯೆ ಬಿವಿ ಗೀತಾ ಅವರನ್ನು ಹೆಚ್ಚಿನ ವಿಚಾರಣೆಗಾಗಿ ಕೋರ್ಟ್ ಬುಧವಾರ ಜಾರಿ ನಿರ್ದೇಶನಾಲಯ(ಇಡಿ)ದ ವಶಕ್ಕೆ ನೀಡಿ ಆದೇಶಿಸಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳವಾರ ಎರಡನೇ ಬಾರಿ ಬೆಂಗಳೂರಿನ ಡಾಲರ್ಸ್ ಕಾಲೋನಿಯಲ್ಲಿರುವ ಶಿವಶಂಕರಪ್ಪ ಸಾಹುಕಾರ್ ಅವರ ನಿವಾಸದ ಮೇಲೆ ದಾಳಿ ನಡೆಸಿದ್ದ ಇಡಿ, ಮನೆಯಲ್ಲೇ ಇದ್ದ ಶಿವಶಂಕರಪ್ಪ ಅವರನ್ನು ಬಂಧಿಸಿತ್ತು.

ಇನ್ನೊಂದೆಡೆ ಇದೇ ಪ್ರಕರಣದಲ್ಲಿ ಕೆಪಿಎಸ್​ಸಿ ಸದಸ್ಯೆ ಬಿ.ವಿ.ಗೀತಾ ಅವರನ್ನು ಬೆಂಗಳೂರಿನ ಅವರ ಮನೆಯಲ್ಲಿ ಬಂಧಿಸಿದ್ದ ಇಡಿ ಅಧಿಕಾರಿಗಳು ಇಂದು ಇಬ್ಬರೂ ಆರೋಪಿಗಳನ್ನು ಬೆಂಗಳೂರಿನ 4ನೇ ಸಿಸಿಎಚ್ ನ್ಯಾಯಾಲಯಕ್ಕೆ ಹಾಜರುಪಡಿಸಿದರು.

ಹೆಚ್ಚಿನ ವಿಚಾರಣೆಗಾಗಿ ಇಬ್ಬರು ಆರೋಪಿಗಳನ್ನು ನಮ್ಮ ವಶಕ್ಕೆ ನೀಡುವಂತೆ ಇಡಿ ಅಧಿಕಾರಿಗಳು ಕೋರ್ಟ್ ಗೆ ಮನವಿ ಮಾಡಿದರು. ಆದರೆ ಇದಕ್ಕೆ ವಿರೋಧ ವ್ಯಕ್ತಪಡಿಸಿದ ಶಿವಶಂಕರಪ್ಪ ಪರ ವಕೀಲರು, ನಮ್ಮ ಕಕ್ಷಿದಾರರು ಎಲ್ಲೂ ಹೋಗಲ್ಲ, ಇಲ್ಲೇ ಇರ್ತಾರೆ. ತನಿಖೆಗೆ ಸಹಕಾರ ನೀಡುತ್ತಾರೆ ಕಸ್ಟಡಿಗೆ ಬೇಡ ಎಂದು ವಾದಿಸಿದರು.

ವಾದ, ಪ್ರತಿವಾದ ಆಲಿಸಿದ 4ನೇ ಸಿಸಿಹೆಚ್ ನ್ಯಾಯಾಲಯ, ಅಂತಿಮವಾಗಿ ಶಿವಶಂಕರಪ್ಪ ಸಾಹುಕಾರ್ ಮತ್ತು ಬಿ.ವಿ.ಗೀತಾ ಅವರನ್ನು 13 ದಿನಗಳ ಕಾಲ ಇಡಿ ಕಸ್ಟಡಿಗೆ ನೀಡಿ ಆದೇಶ ಹೊರಡಿಸಿದೆ. ಅಲ್ಲದೇ ಅಕ್ಟೋಬರ್ 19ರಂದು ಮಧ್ಯಾಹ್ನ 3 ಗಂಟೆಗೆ ಆರೋಪಿಗಳನ್ನು ಕೋರ್ಟ್​​​ಗೆ ಹಾಜರು ಪಡಿಸುವಂತೆ ಇಡಿಗೆ ಸೂಚನೆ ನೀಡಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ರಾಜ್ಯದಲ್ಲಿ ಶೇ. 90ರಷ್ಟು ಬೆಳೆ ಹಾನಿ: ಪರಿಸ್ಥಿತಿ ಗಂಭೀರ - DCM ಪರಮೇಶ್ವರ

'ಸತ್ತವರಿಂದಲೂ ವೋಟಿಂಗ್, SIR ಉಪಯೋಗಗಳ ಕುರಿತು ಚೆನ್ನಿತ್ತಲಾರನ್ನು ಕೇಳಿ': ರಾಹುಲ್ ಗಾಂಧಿಗೆ ಸುರೇಶ್ ಗೋಪಿ

'ನನ್ನ ವಿರುದ್ಧ 100 ಎಫ್‌ಐಆರ್‌ ದಾಖಲಿಸಿ ಹೆದರಲ್ಲ, ಪ್ರತಿಯೊಂದೂ ನನಗೆ ಪದಕ': ರಾಹುಲ್ ಗಾಂಧಿ

CM ಆಗಲು ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಸ್ಟಿಂಗ್ ಆಪರೇಷನ್; ಈಗ ಸಚಿವರ ವಿರುದ್ಧವೂ ಅದೇ ತಂತ್ರ: ಕುಮಾರಸ್ವಾಮಿ ಗಂಭೀರ ಆರೋಪ