ಸಭೆ ನಡೆಸುತ್ತಿರುವ ಮುಖ್ಯಮಂತ್ರಿ ಡಿಕೆ.ಶಿವಕುಮಾರ್. 
ರಾಜ್ಯ

SIR ಅಕ್ರಮ ತಡೆಯಲು 'ಕೈ' ಕಲಿಗಳ ಮಾಸ್ಟರ್ ಪ್ಲ್ಯಾನ್: ಸಿಎಂ ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ಮಹತ್ವದ ಸಭೆ, ಬೂತ್ ಮಟ್ಟದಲ್ಲಿ ಸಮರಕ್ಕೆ ಸಜ್ಜು..!

ಎಸ್‌ಐಆರ್‌ ಪ್ರಕ್ರಿಯೆ ಪೂರ್ಣಗೊಳ್ಳುವವರೆಗೂ ಪಕ್ಷ ಹಾಗೂ ಸರ್ಕಾರ ಎಚ್ಚರಿಕೆಯಿಂದ ಕಾರ್ಯನಿರ್ವಹಿಸಲಿದ್ದು, ಪ್ರತಿಯೊಬ್ಬ ನಾಗರಿಕನ ಮತದಾನದ ಹಕ್ಕನ್ನು ರಕ್ಷಿಸಲು ಕ್ರಮ ಕೈಗೊಳ್ಳಲಾಗುವುದು.

ಬೆಂಗಳೂರು: ರಾಜ್ಯದಲ್ಲಿ ತೀವ್ರ ರಾಜಕೀಯ ಸಂಚಲನ ಮೂಡಿಸಿರುವ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (SIR) ಅಕ್ರಮಗಳ ಆರೋಪಕ್ಕೆ ಸಂಬಂಧಿಸಿದಂತೆ, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಮಂಗಳವಾರ ಸಂಜೆ ಗೃಹ ಕಚೇರಿ 'ಕೃಷ್ಣಾ'ದಿಂದ ಪಕ್ಷದ ಪ್ರಮುಖ ನಾಯಕರು ಮತ್ತು ಶಾಸಕರ ಮಹತ್ವದ ಸಭೆ ನಡೆಸಿದ್ದಾರೆ.

ಮುಖ್ಯಮಂತ್ರಿಗಳು ಕಾಂಗ್ರೆಸ್ ಶಾಸಕರು, ಸಂಸದರು, ಸಚಿವರು, ಮಾಜಿ ಶಾಸಕರು ಹಾಗೂ ಪಕ್ಷದ ಪದಾಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ನಡೆಸಿದರು. ಈ ವೇಳೆ ಎಸ್‌ಐಆರ್‌ ವಿಚಾರದಲ್ಲಿ ಪಕ್ಷವು ನಿರಂತರ ಅಭಿಯಾನಕ್ಕೆ ಸಜ್ಜಾಗುವಂತೆ ಸೂಚನೆ ನೀಡಿದ್ದಾರೆಂದು ತಿಳಿದುಬಂದಿದೆ.

ಮುಖ್ಯಮಂತ್ರಿಗಳ ಗೃಹ ಕಚೇರಿ ‘ಕೃಷ್ಣಾ’ದಿಂದ ನಡೆದ ಸಭೆಯಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಜಿ. ಪರಮೇಶ್ವರ, ಸಚಿವರಾದ ಕೆ.ಎಚ್‌. ಮುನಿಯಪ್ಪ, ಶಿವಲಿಂಗೇಗೌಡ, ಜಮೀರ್ ಅಹಮದ್ ಖಾನ್, ಎಸ್‌.ಎಸ್‌. ಮಲ್ಲಿಕಾರ್ಜುನ, ಎಚ್‌.ಸಿ. ಬಾಲಕೃಷ್ಣ, ಪುಟ್ಟರಂಗಶೆಟ್ಟಿ, ಟಿ. ರಘುಮೂರ್ತಿ ಹಾಗೂ ಕೆ.ಎಸ್‌. ಬಸವನತಪ್ಪ ಭಾಗವಹಿಸಿದ್ದರು. ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ವಿನಯ್ ಕುಮಾರ್ ಸೊರಕೆ, ಲೋಕಸಭೆ ಮತ್ತು ರಾಜ್ಯಸಭೆ ಸದಸ್ಯರು, ಶಾಸಕರು ಹಾಗೂ ಚುನಾವಣೆಯಲ್ಲಿ ಸೋತ ಕಾಂಗ್ರೆಸ್ ಅಭ್ಯರ್ಥಿಗಳೂ ಸಭೆಯಲ್ಲಿ ಪಾಲ್ಗೊಂಡಿದ್ದರು.

ಮತದಾರರ ಪಟ್ಟಿಯಲ್ಲಿ ಹೆಸರು ಹೊಂದಲು ಅರ್ಹತೆ ಇರುವ ಪ್ರತಿಯೊಬ್ಬರಿಗೂ ನ್ಯಾಯಯುತ ಅವಕಾಶ ದೊರೆಯುವಂತೆ ನೋಡಿಕೊಳ್ಳುವುದು ಸಭೆಯ ಪ್ರಮುಖ ಚರ್ಚೆಯ ವಿಷಯವಾಗಿತ್ತು.

ಎಸ್‌ಐಆರ್‌ ಪ್ರಕ್ರಿಯೆ ಪೂರ್ಣಗೊಳ್ಳುವವರೆಗೂ ಪಕ್ಷ ಹಾಗೂ ಸರ್ಕಾರ ಎಚ್ಚರಿಕೆಯಿಂದ ಕಾರ್ಯನಿರ್ವಹಿಸಲಿದ್ದು, ಪ್ರತಿಯೊಬ್ಬ ನಾಗರಿಕನ ಮತದಾನದ ಹಕ್ಕನ್ನು ರಕ್ಷಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಶಿವಕುಮಾರ್ ಹೇಳಿದರು.

ಎಸ್‌ಐಆರ್‌ ಪ್ರಕ್ರಿಯೆಯಲ್ಲಿ ನಡೆಯುತ್ತಿದೆ ಎನ್ನಲಾದ ಅಕ್ರಮಗಳ ವಿರುದ್ಧ ಕಾಂಗ್ರೆಸ್ ಅಭಿಯಾನ ಆರಂಭಿಸಿದೆ. ಅದರಲ್ಲೂ ನಿರ್ದಿಷ್ಟ ಸಮುದಾಯಗಳನ್ನು ಗುರಿಯಾಗಿಸಿಕೊಂಡು ಸಾಮೂಹಿಕವಾಗಿ ನಮೂನೆ-7 ಅರ್ಜಿಗಳನ್ನು ಸಲ್ಲಿಸಲಾಗುತ್ತಿದೆ ಎಂಬ ಆರೋಪದ ಬಗ್ಗೆ ಪಕ್ಷ ಗಮನ ಹರಿಸಿದೆ.

ಪಕ್ಷದ ಹಿರಿಯ ನಾಯಕರು ಹಾಗೂ ಕಾರ್ಯಕರ್ತರನ್ನು ಒಗ್ಗೂಡಿಸುವ ಮೂಲಕ ಮತದಾರರ ಪಟ್ಟಿ ಪರಿಷ್ಕರಣೆ ಪ್ರಕ್ರಿಯೆಯನ್ನು ಬೂತ್ ಮಟ್ಟದಲ್ಲಿ ಮೇಲ್ವಿಚಾರಣೆ ಮಾಡಲು ಕಾಂಗ್ರೆಸ್ ವ್ಯವಸ್ಥೆ ರೂಪಿಸುತ್ತಿರುವಂತೆ ಕಂಡುಬರುತ್ತಿದೆ.

ಸೋಮವಾರ ಕಾಂಗ್ರೆಸ್‌ನ ಮಾಜಿ ಶಾಸಕಿ ಸೌಮ್ಯಾ ರೆಡ್ಡಿ ಅವರು ಪೊಲೀಸ್ ದೂರು ದಾಖಲಿಸಿದ್ದರು. ಬಿಜೆಪಿ ಅಭ್ಯರ್ಥಿ ಸಿ.ಕೆ. ರಾಮಮೂರ್ತಿ ವಿರುದ್ಧ 16 ಮತಗಳ ಅಂತರದಿಂದ ಸೋತಿದ್ದ ಅವರು, ಜಯನಗರ ವಿಧಾನಸಭಾ ಕ್ಷೇತ್ರದ ಮತದಾರರ ಪಟ್ಟಿಯಿಂದ 4,372 ಮತದಾರರ ಹೆಸರುಗಳನ್ನು ತೆಗೆದುಹಾಕಲಾಗಿದೆ ಹಾಗೂ ಹೆಸರುಗಳನ್ನು ಅಳಿಸುವಂತೆ 5,698 ನಮೂನೆ-7 ಅರ್ಜಿಗಳನ್ನು ಸಲ್ಲಿಸಲಾಗಿದೆ ಎಂದು ಆರೋಪಿಸಿದ್ದರು.

ಇದಕ್ಕೂ ಮುನ್ನ ಪುಲಿಕೇಶಿನಗರ ಶಾಸಕ ಎ.ಸಿ. ಶ್ರೀನಿವಾಸ್ ಕೂಡ ಇಂತಹ ಅಕ್ರಮಗಳ ಕುರಿತು ಆತಂಕ ವ್ಯಕ್ತಪಡಿಸಿದ್ದರು. ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ರಾಜ್ಯಸಭಾ ಸದಸ್ಯ ಮನ್ಸೂರ್ ಅಲಿ ಖಾನ್ ಕೂಡ ಇದೇ ರೀತಿಯ ಅಕ್ರಮಗಳ ಬಗ್ಗೆ ಗಮನ ಸೆಳೆದಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಷ್ಯಾ ಕರಾವಳಿಯಲ್ಲಿ ಡ್ರೋನ್ ದಾಳಿ: ಹೊತ್ತಿ ಉರಿದ ತೈಲ ಟ್ಯಾಂಕರ್‌, 23 ಭಾರತೀಯ ಸಿಬ್ಬಂದಿ ಪಾರು..!

Lionel Messi: 21 ವರ್ಷಗಳ ಬಳಿಕ ತವರಿನಲ್ಲೇ ಫುಟ್ಬಾಲ್​ ದಿಗ್ಗಜ ಲಿಯೋನೆಲ್ ಮೆಸ್ಸಿ ಭಾವುಕ ವಿದಾಯ; ಹೇಗಿತ್ತು ನೋಡಿ ಅಂತಿಮ ಪಂದ್ಯ; Video

‘ಮತ ಕಳ್ಳತನ’ದ ಆರೋಪದಲ್ಲಿ ಹುರುಳಿಲ್ಲ, ಸುಖಾಸುಮ್ಮನೆ ರಾಹುಲ್ ಗಾಂಧಿಯಿಂದ ಗೊಂದಲ ಸೃಷ್ಟಿ: ಹೆಚ್‌.ಡಿ. ಕುಮಾರಸ್ವಾಮಿ ಆರೋಪ

SIR ಗೊಂದಲ: ಅಕ್ರಮ ಬಯಲಾಗುವ ಭೀತಿಯಿಂದಲೇ ರಾಜಪಾಲರ ಬಳಿ ಓಡಿದ್ದಾರೆ: NDA ನಾಯಕರ ವಿರುದ್ಧ ಡಿಕೆ.ಶಿವಕುಮಾರ್ ವಾಗ್ದಾಳಿ

ಕೋಟಿ ಕೋಟಿ ಲೂಟಿ: ಅರಣ್ಯ ಇಲಾಖೆ ಮಾಜಿ ಅಧಿಕಾರಿಗೆ ಕೋರ್ಟ್ ಶಾಕ್; ಬರೋಬ್ಬರಿ 1.38 ಕೋಟಿ ದಂಡ, 3 ವರ್ಷ ಜೈಲು ಶಿಕ್ಷೆ..!