ಸಾಂಕೇತಿಕ ಚಿತ್ರ 
ರಾಜ್ಯ

ಬಳ್ಳಾರಿ: ₹18,000 ಲಂಚ ಸ್ವೀಕರಿಸುತ್ತಿದ್ದಾಗ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದ ಸರ್ವೇಯರ್!

2018ರಲ್ಲಿ ತಿದ್ದುಪಡಿಗೊಂಡ ಭ್ರಷ್ಟಾಚಾರ ತಡೆ ಕಾಯ್ದೆ, 1988ರ ಸೆಕ್ಷನ್ 7(ಎ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಮುಂದಿನ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಬಳ್ಳಾರಿ: ಇಲ್ಲಿನ ಲೇಔಟ್ ರಸ್ತೆಯ ನಕ್ಷೆಯನ್ನು ಒದಗಿಸಲು ವ್ಯಕ್ತಿಯೊಬ್ಬರಿಂದ 18,000 ರೂಪಾಯಿ ಲಂಚಕ್ಕೆ ಬೇಡಿಕೆಯಿಟ್ಟು, ಅದನ್ನು ಸ್ವೀಕರಿಸಿದ ಆರೋಪದ ಮೇಲೆ 51 ವರ್ಷದ ಸರ್ಕಾರಿ ಅಧಿಕಾರಿಯೊಬ್ಬರನ್ನು ಬುಧವಾರ ಬಂಧಿಸಲಾಗಿದೆ ಎಂದು ಲೋಕಾಯುಕ್ತ ಪೊಲೀಸರು ತಿಳಿಸಿದ್ದಾರೆ.

ಆರೋಪಿಯನ್ನು ತಾಲೂಕು ಸರ್ವೇಯರ್ ಹನುಮಂತಪ್ಪ ಎಂದು ಗುರುತಿಸಲಾಗಿದೆ ಎಂದು ಅವರು ಹೇಳಿದರು.

ಬಳ್ಳಾರಿ ಲೋಕಾಯುಕ್ತ ಪೊಲೀಸರ ಪ್ರಕಾರ, ಲೇಔಟ್ ರಸ್ತೆಯ ನಕ್ಷೆಯನ್ನು ಒದಗಿಸಲು ಹನುಮಂತಪ್ಪ 18,000 ರೂಪಾಯಿ ನೀಡುವಂತೆ ಬೇಡಿಕೆ ಇಟ್ಟಿದ್ದಾರೆ ಎಂದು ಆರೋಪಿಸಿ ಎಂಆರ್‌ವಿ (MRV) ಬಡಾವಣೆಯ ನಿವಾಸಿಯೊಬ್ಬರು ದೂರು ನೀಡಿದ್ದರು.

ಈ ದೂರಿನ ಆಧಾರದ ಮೇಲೆ ಲೋಕಾಯುಕ್ತ ಪೊಲೀಸರು ಬಲೆ ಬೀಸಿ, ಲಂಚದ ಹಣವನ್ನು ಪಡೆಯುತ್ತಿದ್ದಾಗ ಸರ್ವೇಯರ್‌ನನ್ನು ಬಂಧಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

2018ರಲ್ಲಿ ತಿದ್ದುಪಡಿಗೊಂಡ ಭ್ರಷ್ಟಾಚಾರ ತಡೆ ಕಾಯ್ದೆ, 1988ರ ಸೆಕ್ಷನ್ 7(ಎ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಆರೋಪಿಯನ್ನು ವಶಕ್ಕೆ ಪಡೆಯಲಾಗಿದ್ದು, ಮುಂದಿನ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Bisleri ನೀರು ಕೂಡ ಅಸುರಕ್ಷಿತ; ಅಪಾಯಕಾರಿ ರಾಸಾಯನಿಕಗಳಿದ್ದು ಕ್ಯಾನ್ಸರ್ ಕಾರಕ; ಕಾನೂನು ಕ್ರಮಕ್ಕೆ FSSAI ಅನುಮತಿ!

ತಮಿಳುನಾಡಿನಲ್ಲಿ ಭೀಕರ ರಸ್ತೆ ಅಪಘಾತ: ಮರಕ್ಕೆ ಕಾರು ಡಿಕ್ಕಿ; 8 ಮಂದಿ ಸಾವು, ಸಿಎಂ ವಿಜಯ್ ಸಂತಾಪ!

ಪ್ಯಾಲೆಸ್ ವಿವಾದ: ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಹೈಡ್ರಾಮಾ.. YS ಶರ್ಮಿಳಾರನ್ನು ತಡೆದ ಪೊಲೀಸರು! Video

‘BJP-RSS ಸಂಸ್ಕಾರಹೀನ, ದುರಾಸೆ, ಜಾತಿವಾದಿ ಪುರುಷ ಪ್ರಧಾನ ಮನೋಭಾವ ಹೊಂದಿವೆ’: ರಾಹುಲ್ ಗಾಂಧಿ

'ಖಂಡಿತಾ ನಾವು ಸಂಕಷ್ಟದಲ್ಲಿದ್ದೇವೆ'; ಭಾರತದ ಬ್ಯಾಟಿಂಗ್ ಅಬ್ಬರಕ್ಕೆ ನ್ಯೂಜಿಲೆಂಡ್ ಕಂಗಾಲು, ಸೋಲಿನ ಭೀತಿ ಒಪ್ಪಿಕೊಂಡ ಕಿವೀಸ್ ಆಟಗಾರ!