ತೆರೆದ ಚರಂಡಿಗೆ ಬಿದ್ದ ಮಗು 
ರಾಜ್ಯ

ರಸ್ತೆ ಬದಿ ತೆರೆದ ಚರಂಡಿಗೆ ಬಿದ್ದ ಮಗು; ಸ್ಥಳೀಯರ ಸಮಯಪ್ರಜ್ಞೆಯಿಂದ ಪಾರು, Video

ಇದೇ ಸಂದರ್ಭದಲ್ಲಿ ಮಗುವೊಂದು ಕುಟುಂಬ ಸದಸ್ಯರೊಂದಿಗೆ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿತ್ತು. ಕಾಮಗಾರಿ ನಡೆಯುತ್ತಿದ್ದುದನ್ನು ನೋಡುತ್ತಾ ಕುಟುಂಬದವರು ರಸ್ತೆ ಬದಿಗೆ ಹತ್ತಿರವಾಗಿದ್ದಾರೆ.

ಸುಳ್ಯ: ರಸ್ತೆ ಬದಿ ನಡೆಯುತ್ತಿದ್ದ ಜೆಸಿಬಿ ಕಾಮಗಾರಿ ವೇಳೆ ತೆರೆದಿದ್ದ ಚರಂಡಿಗೆ ಮಗು ಬಿದ್ದು ಕೂದಲೆಳೆಯ ಅಂತರದಲ್ಲಿ ಅಪಾಯದಿಂದ ಪಾರಾದ ಘಟನೆ ಸುಳ್ಯದ ಶ್ರೀರಾಮಪೇಟೆಯಲ್ಲಿ ನಡೆದಿದೆ.

ಮುಳಿಯ ಜ್ಯುವೆಲ್ಲರ್ಸ್‌ ಸಮೀಪ ಕುಡಿಯುವ ನೀರಿನ ಪೈಪ್‌ಲೈನ್‌ ಕಾಮಗಾರಿಯನ್ನು ಜೆಸಿಬಿ ಮೂಲಕ ನಡೆಸಲಾಗುತ್ತಿತ್ತು. ಕಾಮಗಾರಿ ವೇಳೆ ರಸ್ತೆ ಬದಿಯ ಫುಟ್‌ಪಾತ್‌ನ ಒಂದು ಭಾಗವನ್ನು ಅಗೆದು ಹಾಕಲಾಗಿತ್ತು. ಈ ವೇಳೆ ಚರಂಡಿಯ ಮುಚ್ಚಳವನ್ನೂ ತೆಗೆದು, ಅದನ್ನು ತೆರೆದ ಸ್ಥಿತಿಯಲ್ಲೇ ಬಿಡಲಾಗಿತ್ತು ಎನ್ನಲಾಗಿದೆ.

ಇದೇ ಸಂದರ್ಭದಲ್ಲಿ ಮಗುವೊಂದು ಕುಟುಂಬ ಸದಸ್ಯರೊಂದಿಗೆ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿತ್ತು. ಕಾಮಗಾರಿ ನಡೆಯುತ್ತಿದ್ದುದನ್ನು ನೋಡುತ್ತಾ ಕುಟುಂಬದವರು ರಸ್ತೆ ಬದಿಗೆ ಹತ್ತಿರವಾಗಿದ್ದಾರೆ. ಈ ವೇಳೆ ಮಗು ಆಕಸ್ಮಿಕವಾಗಿ ತೆರೆದಿದ್ದ ಚರಂಡಿಗೆ ಬಿದ್ದಿದೆ.

ಘಟನೆ ಗಮನಿಸಿದ ತಕ್ಷಣ ಸ್ಥಳದಲ್ಲಿದ್ದ ಸಾರ್ವಜನಿಕರು ಧಾವಿಸಿ ಮಗುವನ್ನು ಚರಂಡಿಯಿಂದ ಮೇಲಕ್ಕೆ ಎತ್ತಿದ್ದಾರೆ. ಅದೃಷ್ಟವಶಾತ್‌ ಮಗು ಯಾವುದೇ ಗಂಭೀರ ಗಾಯಗಳಿಲ್ಲದೆ ಪಾರಾಗಿದೆ.

ಸುರಕ್ಷತಾ ಕ್ರಮಗಳ ಕೊರತೆ ಬಗ್ಗೆ ಆಕ್ರೋಶ

ರಸ್ತೆ ಬದಿ ಕಾಮಗಾರಿ ನಡೆಯುವ ಸಂದರ್ಭದಲ್ಲಿ ಸಾರ್ವಜನಿಕರ ಸುರಕ್ಷತೆಗಾಗಿ ಸೂಕ್ತ ಬ್ಯಾರಿಕೇಡ್‌ ಹಾಗೂ ಎಚ್ಚರಿಕೆ ಫಲಕಗಳನ್ನು ಅಳವಡಿಸುವ ಅಗತ್ಯವಿದೆ. ಆದರೆ ಚರಂಡಿ ಮುಚ್ಚಳ ತೆರವುಗೊಳಿಸಿದ ಬಳಿಕ ಅದನ್ನು ತೆರೆದೆಯೇ ಬಿಟ್ಟಿರುವುದು ಸಾರ್ವಜನಿಕರ ಆತಂಕಕ್ಕೆ ಕಾರಣವಾಗಿದೆ.

ವಿಶೇಷವಾಗಿ ಮಕ್ಕಳು ಹಾಗೂ ವೃದ್ಧರು ಸಂಚರಿಸುವ ರಸ್ತೆ ಬದಿಯ ಕಾಮಗಾರಿಗಳಲ್ಲಿ ಸುರಕ್ಷತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಕೈಗೊಳ್ಳಬೇಕು ಎಂಬ ಒತ್ತಾಯ ಕೇಳಿಬಂದಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಾಲಿವುಡ್ ಹಿರಿಯ ನಟ ನಾನಾ ಪಾಟೇಕರ್ ಇನ್ನಿಲ್ಲ

"ಜೀವಕ್ಕೆ ಕುತ್ತು ತರುವ ಹಾದಿ": ರಷ್ಯಾ ಸೇನಾ ನೇಮಕಾತಿ ಆಮಿಷಗಳಿಗೆ ಬಲಿಯಾಗದಂತೆ ನಾಗರಿಕರಿಗೆ ಭಾರತ ಕಟ್ಟುನಿಟ್ಟಿನ ಸೂಚನೆ, 69 ಭಾರತೀಯರ ಬಿಡುಗಡೆಗೆ ಪಟ್ಟು..!

CM ಡಿ.ಕೆ. ಶಿವಕುಮಾರ್‌ಗಾಗಿ IndiGo flight ಲೇಟ್? VVIP ಸಂಸ್ಕೃತಿ ವಿರುದ್ಧ ಪ್ರಯಾಣಿಕರ ಆಕ್ರೋಶ..!

ಬರಗಾಲದ ಬೆನ್ನಲ್ಲೇ ಬೆಲೆ ಏರಿಕೆ ಬರೆ: ಮಧ್ಯಮ ವರ್ಗದವರಿಗೆ ಆರ್ಥಿಕ ಹೊಡೆತ, ಅಕ್ಕಿ ದರ ಗಗನಕ್ಕೆ..!

ಬರ ಎಫೆಕ್ಟ್: ರೈತರ ನೆರವಿಗೆ ಧಾವಿಸಿದ ಸರ್ಕಾರ; 1,250 ಕೋಟಿ ರೂ. ಮೊದಲ ಕಂತು ಬಿಡುಗಡೆ..!