ಕನ್ನಡ ಸಾಹಿತ್ಯ ಸಮ್ಮೇಳನ (ಸಂಗ್ರಹ ಚಿತ್ರ) 
ರಾಜ್ಯ

ಕಸಾಪ ನಾಯಕತ್ವ ಬಿಕ್ಕಟ್ಟು: ಅತಂತ್ರ ಸ್ಥಿತಿಯಲ್ಲಿ ಬಳ್ಳಾರಿ ಕನ್ನಡ ಸಾಹಿತ್ಯ ಸಮ್ಮೇಳನ..!

2025ರ ಡಿಸೆಂಬರ್‌ನಲ್ಲಿ ನಡೆಯಬೇಕಿದ್ದ ಈ ಸಮ್ಮೇಳನವು, ಸದ್ಯ ಪರಿಷತ್ತಿನಲ್ಲಿ ಚುನಾಯಿತ ಆಡಳಿತ ಮಂಡಳಿ ಇಲ್ಲದ ಕಾರಣ ಸಮ್ಮೇಳನಕ್ಕಾಗಿ ಸಾಹಿತ್ಯಾಸಕ್ತರು ಮತ್ತಷ್ಟು ಕಾಯುವ ಪರಿಸ್ಥಿತಿ ಎದುರಾಗಿದೆ.

ಬಳ್ಳಾರಿ: ಬಳ್ಳಾರಿಯಲ್ಲಿ ಆಯೋಜಿಸಲು ಉದ್ದೇಶಿಸಲಾಗಿದ್ದ 88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವು ಮತ್ತಷ್ಟು ವಿಳಂಬವಾಗುವುದು ಅಧಿಕೃತವಾಗಿದೆ. ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ (ಕಸಾಪ) ಸದ್ಯ ಉಂಟಾಗಿರುವ ಆಡಳಿತಾತ್ಮಕ ಮತ್ತು ನಾಯಕತ್ವದ ಬಿಕ್ಕಟ್ಟೇ ಈ ಮಹತ್ವದ ಸಾಂಸ್ಕೃತಿಕ ಉತ್ಸವ ನೆನೆಗುದಿಗೆ ಬೀಳಲು ಪ್ರಮುಖ ಕಾರಣವಾಗಿದೆ.

2025ರ ಡಿಸೆಂಬರ್‌ನಲ್ಲಿ ನಡೆಯಬೇಕಿದ್ದ ಈ ಸಮ್ಮೇಳನವು, ಸದ್ಯ ಪರಿಷತ್ತಿನಲ್ಲಿ ಚುನಾಯಿತ ಆಡಳಿತ ಮಂಡಳಿ ಇಲ್ಲದ ಕಾರಣ ಸಾಹಿತ್ಯಾಸಕ್ತರು ಸಮ್ಮೇಳನಕ್ಕಾಗಿ ಮತ್ತಷ್ಟು ಕಾಯುವ ಪರಿಸ್ಥಿತಿ ಎದುರಾಗಿದೆ.

ಕಳೆದ 88ನೇ ಕನ್ನಡ ಸಾಹಿತ್ಯ ಸಮ್ಮೇಳನವು 2024ರ ಡಿಸೆಂಬರ್‌ನಲ್ಲಿ ಮಂಡ್ಯದಲ್ಲಿ ನಡೆದಿತ್ತು. ಬಳ್ಳಾರಿಯಲ್ಲಿ ನಡೆಯಬೇಕಿದ್ದ ಮುಂದಿನ ಸಮ್ಮೇಳನದ ಅಧ್ಯಕ್ಷತೆ ವಹಿಸಲು ಅಂತಾರಾಷ್ಟ್ರೀಯ ಬೂಕರ್ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್ ಅವರ ಹೆಸರನ್ನೂ ಅಂತಿಮಗೊಳಿಸಲಾಗಿತ್ತು.

ಕನ್ನಡ ಸಾಹಿತ್ಯ ಪರಿಷತ್ತಿನ ಹಿಂದಿನ ಅಧ್ಯಕ್ಷ ಮಹೇಶ್ ಜೋಶಿ ಅವರ ಅಧಿಕಾರಾವಧಿಯಲ್ಲಿ ಹಣಕಾಸಿನ ಅಕ್ರಮಗಳು ಮತ್ತು ಅಧಿಕಾರ ದುರ್ಬಳಕೆಯ ಆರೋಪಗಳು ಕೇಳಿಬಂದಿದ್ದವು. ಈ ಬೆಳವಣಿಗೆಗಳ ಬಳಿಕ ರಾಜ್ಯ ಸರ್ಕಾರವು 2025ರ ಸೆಪ್ಟೆಂಬರ್‌ನಲ್ಲಿ ಚುನಾಯಿತ ಆಡಳಿತ ಮಂಡಳಿಯನ್ನು ಬದಿಗಿಟ್ಟು ಆಡಳಿತಾಧಿಕಾರಿಯನ್ನು ನೇಮಿಸಿತ್ತು.

ಪ್ರಸ್ತುತ ಪರಿಷತ್ತಿನಲ್ಲಿ ಚುನಾಯಿತ ಆಡಳಿತ ಮಂಡಳಿ ಇಲ್ಲ. ಬದಲಿಗೆ ಸರ್ಕಾರ ನೇಮಿಸಿರುವ ಆಡಳಿತಾಧಿಕಾರಿಯ ಮೂಲಕ ಕಾರ್ಯನಿರ್ವಹಿಸಲಾಗುತ್ತಿದೆ. ಸಮ್ಮೇಳನವನ್ನು ಕರೆಯಲು ಚುನಾಯಿತ ಆಡಳಿತ ಮಂಡಳಿ ಅಗತ್ಯವಿದೆ ಎಂದು ಮೂಲಗಳು ಹೇಳಿವೆ.

ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ 4.5 ಲಕ್ಷಕ್ಕೂ ಹೆಚ್ಚು ನೋಂದಾಯಿತ ಮತದಾರರಿದ್ದಾರೆ. ಆದರೆ, ಮೂರು ವರ್ಷಗಳ ಸದಸ್ಯತ್ವ ಹೊಂದಿರುವವರಿಗೆ ಮಾತ್ರ ಮತದಾನದ ಅರ್ಹತೆ ಇದೆ. ಸದ್ಯ ಮತದಾರರ ಪಟ್ಟಿಯ ಪರಿಷ್ಕರಣೆ ಪ್ರಕ್ರಿಯೆ ನಡೆಯುತ್ತಿದೆ ಎಂದು ಮೂಲಗಳು ತಿಳಿಸಿವೆ.

ರಾಜ್ಯ ಸರ್ಕಾರ ಇತ್ತೀಚೆಗೆ ಚುನಾವಣಾಧಿಕಾರಿಯನ್ನು ನೇಮಿಸಿದೆ. ಪರಿಷತ್ತಿನ ಹಿಂದಿನ ಚುನಾವಣೆಗಳು 2021ರಲ್ಲಿ ನಡೆದಿದ್ದವು. ಆಗ ಮಹೇಶ್ ಜೋಶಿ ಅಧ್ಯಕ್ಷರಾಗಿ ಆಯ್ಕೆಯಾಗಿದ್ದರು. ಅಧ್ಯಕ್ಷರ ಅಧಿಕಾರಾವಧಿ ಐದು ವರ್ಷಗಳಾಗಿತ್ತು ಎಂದು ಮೂಲಗಳು ತಿಳಿಸಿವೆ.

ಈ ಕುರಿತು ಪ್ರತಿಕ್ರಿಯೆ ಪಡೆಯಲು ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ್ ತಂಗಡಗಿ ಅವರನ್ನು ಸಂಪರ್ಕಿಸಲು ಪ್ರಯತ್ನಿಸಿದರೂ ಅವರಿಂದ ಪ್ರತಿಕ್ರಿಯೆ ಲಭ್ಯವಾಗಿಲ್ಲ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಕಾಗ್ನಿಜಂಟ್, ಇನ್ಫೋಸಿಸ್, ಟಿಸಿಎಸ್, ವಿಪ್ರೋ ಎಚ್‌ಸಿಎಲ್ ಗೆ ಅಮೆರಿಕ ಶಾಕ್: ಗ್ರೀನ್ ಕಾರ್ಡ್ ಕಾರ್ಯಕ್ರಮದಿಂದ ಅಮಾನತು!

Sting operation ಮೂಲಕ ನಿಮ್ಮನ್ನು ಸಿಲುಕಿಸಲು ಯತ್ನಿಸಿರುವುದು ನಿಜವೇ ಆಗಿದ್ದರೆ ತನಿಖೆಗೆ ಆದೇಶಿಸಿ: ಸಿಎಂ ಡಿಕೆ.ಶಿವಕುಮಾರ್'ಗೆ HDK ಸವಾಲು

ಮತ ಕಳ್ಳತನದಿಂದಲೇ ಮೋದಿ ಪ್ರಧಾನಿಯಾಗಿದ್ದು, ಗೆಲ್ಲಲಾಗದ ರಾಜ್ಯಗಳಲ್ಲೂ BJP ಗೆಲುವು: ಅಭಿಜೀತ್ ದೀಪ್ಕೆ

ರಾಜ್ಯದ ಬಾಕಿ ಹಣದ ಬಗ್ಗೆ ನಿರ್ಮಲಾ ಸೀತಾರಾಮನ್ ಜೊತೆ ಚರ್ಚೆ: GST ಮಂಡಳಿ ಸಭೆ ಬಳಿಕ CM ಡಿಕೆ.ಶಿವಕುಮಾರ್ ಹರ್ಷ

ಉತ್ತರ ಭಾರತ ವ್ಯಕ್ತಿಯಿಂದ ಡಿಕೆಶಿ ಸಿಲುಕಿಸಲು ಯತ್ನ: ಸಚಿವ ಸತೀಶ್ ಜಾರಕಿಹೊಳಿ