ಪ್ರಜ್ವಲ್ ರೇವಣ್ಣ 
ರಾಜ್ಯ

ಪ್ರಜ್ವಲ್​​ ರೇವಣ್ಣಗೆ ಬಿಗ್ ಶಾಕ್; ಪರಪ್ಪನ ಅಗ್ರಹಾರದಿಂದ ಬೆಳಗಾವಿಯ ಹಿಂಡಲಗಾ ಜೈಲಿಗೆ ಮಾಜಿ ಸಂಸದನ ಶಿಫ್ಟ್!

ಇತ್ತೀಚಿಗೆ ಕೇಂದ್ರ ಅಪರಾಧ ವಿಭಾಗದ(ಸಿಸಿಬಿ) ಪೊಲೀಸ್ ತಂಡ ಪರಪ್ಪನ ಅಗ್ರಹಾರ ಜೈಲಿನ ಮೇಲೆ ಹಠಾತ್ ದಾಳಿ ನಡೆಸಿ, ಪರಿಶೀಲನೆ ನಡೆಸಿತ್ತು. ಈ ವೇಳೆ ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಪ್ರಜ್ವಲ್ ರೇವಣ್ಣ ಮತ್ತು ಇನ್ನೊಬ್ಬ ವಿಚಾರಣಾಧೀನ ಕೈದಿ ಬಳಿ ಮೊಬೈಲ್ ಫೋನ್‌ ಹಾಗೂ ಪೆನ್ ಡ್ರೈವ್ ಪತ್ತೆಯಾಗಿತ್ತು.

ಬೆಂಗಳೂರು: ಅತ್ಯಾಚಾರ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಹಾಸನ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಿಂದ ಬೆಳಗಾವಿಯ ಹಿಂಡಲಗಾ ಜೈಲಿಗೆ ಶಿಫ್ಟ್ ಮಾಡಲಾಗುತ್ತಿದೆ.

ಮಾಜಿ ಸಂಸದ ಪ್ರಜ್ವಲ್​​ ರೇವಣ್ಣ ಇದ್ದ ಸೆಲ್​ನಲ್ಲಿ ಮೊಬೈಲ್​ ಪತ್ತೆಯಾದ್ದ ಬೆನ್ನಲ್ಲೇ ಕಾರಾಗೃಹ ಇಲಾಖೆ ಡಿಜಿಪಿ ಅಲೋಕ್​ಕುಮಾರ್ ಅವರು ಶುಕ್ರವಾರ ಈ ಆದೇಶ ಹೊರಡಿಸಿದ್ದಾರೆ.

ಪರಪ್ಪನ ಅಗ್ರಹಾರ ಸೆಂಟ್ರಲ್ ಜೈಲಿನಲ್ಲಿರುವ ಪ್ರಜ್ವಲ್​ ರೇವಣ್ಣ ಅವರನ್ನು ಬೆಳಗಾವಿಯ ಹಿಂಡಲಗಾ ಜೈಲಿಗೆ ಶಿಫ್ಟ್​ ಮಾಡಲು ಡಿಜಿಪಿ ಅಲೋಕ್ ಕುಮಾರ್ ಅವರು ಸೂಚಿಸಿದ್ದಾರೆ.

ಪ್ರಜ್ವಲ್ ರೇವಣ್ಣ ಅವರನ್ನು ಶಿಫ್ಟ್​ ಮಾಡುವ ಬಗ್ಗೆ ಬೆಳಗಾವಿಯ ಹಿಂಡಲಗಾ ಜೈಲಿಗೆ ಅಧಿಕೃತ ಇ-ಮೇಲ್ ಮಾಡಲಾಗಿದೆ. ಅಲ್ಲದೆ ಜೈಲು ಮುಖ್ಯ ಅಧೀಕ್ಷಕರಿಗೆ ಈ ಕುರಿತು ಮಾಹಿತಿ ನೀಡಲಾಗಿದ್ದು, ಆದಷ್ಟು ಬೇಗ ಹಿಂಡಲಗಾ ಜೈಲಿಗೆ ಪ್ರಜ್ವಲ್​​ ಶಿಫ್ಟ್​ ಮಾಡುವ ಸಾಧ್ಯತೆ ಇದೆ. ಯಾವಾಗ ಬೇಕಾದ್ರೂ ಎಸ್ಕಾರ್ಟ್ ಮೂಲಕ ಶಿಫ್ಟ್​ ಮಾಡಬಹುದು. ಹೀಗಾಗಿ ಈ ಬಗ್ಗೆ ಸಿದ್ಧತೆ ಮಾಡಿಕೊಳ್ಳುವಂತೆ ಜೈಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.

ಇತ್ತೀಚಿಗೆ ಕೇಂದ್ರ ಅಪರಾಧ ವಿಭಾಗದ(ಸಿಸಿಬಿ) ಪೊಲೀಸ್ ತಂಡ ಪರಪ್ಪನ ಅಗ್ರಹಾರ ಜೈಲಿನ ಮೇಲೆ ಹಠಾತ್ ದಾಳಿ ನಡೆಸಿ, ಪರಿಶೀಲನೆ ನಡೆಸಿತ್ತು. ಈ ವೇಳೆ ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಪ್ರಜ್ವಲ್ ರೇವಣ್ಣ ಮತ್ತು ಇನ್ನೊಬ್ಬ ವಿಚಾರಣಾಧೀನ ಕೈದಿ ಬಳಿ ಮೊಬೈಲ್ ಫೋನ್‌ ಹಾಗೂ ಪೆನ್ ಡ್ರೈವ್ ಪತ್ತೆಯಾಗಿತ್ತು. ಇದು ತೀವ್ರ ಚರ್ಚೆಗೆ ಗ್ರಾಸವಾಗಿತ್ತು.

ಸಿಸಿಬಿ ಪೊಲೀಸರು ಈ ಕೈದಿಗಳಿಂದ ಮೊಬೈಲ್ ಫೋನ್, ಚಾರ್ಜರ್, ಪೆನ್ ಡ್ರೈವ್ ಮತ್ತು ನೋಟ್‌ಬುಕ್ ಅನ್ನು ವಶಪಡಿಸಿಕೊಂಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತೀಯ ಮೂಲದ ನ್ಯಾಯಶಾಸ್ತ್ರಜ್ಞೆಗೆ ಈ ಬಾರಿಯ ನೊಬೆಲ್ ಶಾಂತಿ ಪ್ರಶಸ್ತಿ; ನವನೀತ್ ನವಿ ಪಿಳ್ಳೈಗೆ ಒಲಿದ ನೊಬೆಲ್ ಶಾಂತಿ ಗರಿ

CJP ಪ್ರತಿಭಟನೆ ಹಿನ್ನೆಲೆಯಲ್ಲಿ ರೈಲುಗಳ ರದ್ದತಿ: ಯುವಕರಿಗೆ ಹೆದರುವುದಾದರೆ ಇಡೀ ದೇಶವನ್ನೇ ಬಂದ್ ಮಾಡಿ; ಕೇಂದ್ರದ ವಿರುದ್ಧ ಅಭಿಜಿತ್ ದೀಪ್ಕೆ ಆಕ್ರೋಶ

Cockroach Janta Partyಗೆ ಬಿಗ್ ಶಾಕ್: ಜಂತರ್ ಮಂತರ್ ಪ್ರತಿಭಟನೆಗೆ ಅನುಮತಿ ನಿರಾಕರಿಸಿದ ದೆಹಲಿ ಪೊಲೀಸರು, 57 ಮೆಟ್ರೋ ನಿಲ್ದಾಣಗಳು ಬಂದ್..!

ಮತದಾರರ ಪಟ್ಟಿ ಪರಿಷ್ಕರಣೆ: ಕರ್ನಾಟಕದಲ್ಲಿ 1.10 ಲಕ್ಷ ಫಾರಂ-7 ಅರ್ಜಿ ಸ್ವೀಕೃತಿ, 40.88 ಲಕ್ಷ ನೋಟಿಸ್ ವಿಚಾರಣೆ ಪೂರ್ಣ: ಅ.27ಕ್ಕೆ ಅಂತಿಮ ಪಟ್ಟಿ ಪ್ರಕಟ

ಕನ್ನಡಿಗರ ಆತ್ಮೀಯತೆ, ವಾತ್ಸಲ್ಯ, ದಯೆ ನಿಜಕ್ಕೂ ನನ್ನ....: ಬೆಂಗಳೂರು ಭೇಟಿ ಬಗ್ಗೆ ಅಭಿಜೀತ್ ದೀಪ್ಕೆ ಭಾವುಕ ಪೋಸ್ಟ್!