ಸಂಗ್ರಹ ಚಿತ್ರ 
ರಾಜ್ಯ

ಮತಗಳ್ಳತನದ ವಿರುದ್ಧ 'ಕೈ' ಸಮರ: ಅಕ್ಟೋಬರ್ 10ರಿಂದ ‘ಮತ ಉಳಿಸಿ, ದೇಶ ಉಳಿಸಿ’ ಪಾದಯಾತ್ರೆ ಆರಂಭ..!

ರಾಜ್ಯದ ಪ್ರತಿ ಬ್ಲಾಕ್‌ನಲ್ಲಿ 5 ಕಿ.ಮೀ.ಗಿಂತ ಹೆಚ್ಚು ದೂರದಲ್ಲಿ ಪಾದಯಾತ್ರಾಗಳು ನಡೆಯಲಿದ್ದು, ಮಹಾತ್ಮ ಗಾಂಧಿ ಅಥವಾ ಡಾ. ಬಿ.ಆರ್. ಅಂಬೇಡ್ಕರ್ ಪ್ರತಿಮೆಯಿಂದ ಪ್ರಾರಂಭವಾಗಿ ಆಯಾ ಜಿಲ್ಲಾಧಿಕಾರಿ ಕಚೇರಿಯ ಬಳಿ ಕೊನೆಗೊಳ್ಳಲಿದೆ.

ಬೆಂಗಳೂರು: ಮತಗಳ್ಳತನದ ಆರೋಪಗಳ ಕುರಿತು ಜನರಲ್ಲಿ ಜಾಗೃತಿ ಮೂಡಿಸಲು ರಾಜ್ಯ ಕಾಂಗ್ರೆಸ್ ‘ಮತ ಉಳಿಸಿ, ದೇಶ ಉಳಿಸಿ’ ಅಭಿಯಾನ ಹಮ್ಮಿಕೊಂಡಿದೆ.

ಅಕ್ಟೋಬರ್ 10ರಿಂದ 20ರವರೆಗೆ ರಾಜ್ಯದಾದ್ಯಂತ ಬ್ಲಾಕ್ ಮಟ್ಟದಲ್ಲಿ ಪಾದಯಾತ್ರೆಗಳನ್ನು ನಡೆಸಲು ಪಕ್ಷ ನಿರ್ಧರಿಸಿದೆ.

ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಅವರು, ರಾಜ್ಯದ ಪ್ರತಿ ಬ್ಲಾಕ್‌ನಲ್ಲಿ 5 ಕಿ.ಮೀ.ಗಿಂತ ಹೆಚ್ಚು ದೂರದಲ್ಲಿ ಪಾದಯಾತ್ರಾಗಳು ನಡೆಯಲಿದ್ದು, ಮಹಾತ್ಮ ಗಾಂಧಿ ಅಥವಾ ಡಾ. ಬಿ.ಆರ್. ಅಂಬೇಡ್ಕರ್ ಪ್ರತಿಮೆಯಿಂದ ಪ್ರಾರಂಭವಾಗಿ ಆಯಾ ಜಿಲ್ಲಾಧಿಕಾರಿ ಕಚೇರಿಯ ಬಳಿ ಕೊನೆಗೊಳ್ಳಲಿದೆ ಎಂದು ಹೇಳಿದರು.

ಬ್ಲಾಕ್ ಮಟ್ಟದ ಹಿರಿಯ ನಾಯಕರು ಪಾದಯಾತ್ರೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಬಳಿಕ ಪಕ್ಷದ ಕಾರ್ಯಕರ್ತರು ಜಿಲ್ಲಾಧಿಕಾರಿಗಳನ್ನು ಭೇಟಿ ಮಾಡಿ, ರಾಷ್ಟ್ರಗೀತೆ ಹಾಡಿ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ಪ್ರತಿಕೃತಿಯನ್ನು ದಹಿಸಲಿದ್ದಾರೆ. ದಸರಾ ಸಂದರ್ಭದಲ್ಲಿ ಮತಗಳ್ಳತನದ ಪರಿಣಾಮಗಳ ಕುರಿತು ಜನರಲ್ಲಿ ಜಾಗೃತಿ ಮೂಡಿಸಲಿದ್ದೇವೆ ಎಂದು ತಿಳಿಸಿದರು.

ಅಕ್ಟೋಬರ್ 25ರಿಂದ ನವೆಂಬರ್ 25ರವರೆಗೆ ಸಾರ್ವಜನಿಕ ಸಭೆಗಳು, ಪತ್ರಿಕಾಗೋಷ್ಠಿಗಳು ಸೇರಿದಂತೆ ಹಲವು ಕಾರ್ಯಕ್ರಮಗಳನ್ನು ಕಾಂಗ್ರೆಸ್ ಆಯೋಜಿಸಲಿದೆ. ರಾಜ್ಯ ನಾಯಕರು ತಮ್ಮ ತಮ್ಮ ಜಿಲ್ಲೆಗಳಲ್ಲಿ ನಡೆಯುವ ಪ್ರತಿಭಟನೆಗಳಲ್ಲಿ ಭಾಗವಹಿಸಲಿದ್ದಾರೆ. ಮತದಾರರ ಪಟ್ಟಿಯಲ್ಲಿನ ಅಕ್ರಮಗಳನ್ನು ತಡೆಯುವ ಉದ್ದೇಶದಿಂದ ಬ್ಲಾಕ್ ಅಧ್ಯಕ್ಷರು ಹಾಗೂ ಬೂತ್ ಮಟ್ಟದ ಏಜೆಂಟ್‌-2 (ಬಿಎಲ್‌ಎ-2)ಗಳಿಗೆ ತರಬೇತಿ ನೀಡಲಾಗುವುದು ಎಂದು ಹೇಳಿದರು.

ಮತದಾರರ ಪಟ್ಟಿಯಿಂದ ಫಾರ್ಮ್‌-7 ಹಾಗೂ ಇತರ ಅರ್ಜಿಗಳ ಮೂಲಕ ಹೆಸರುಗಳನ್ನು ಅಳಿಸಲಾಗಿರುವ ಮತದಾರರನ್ನು ಗುರುತಿಸಿ, ಅವರೊಂದಿಗೆ ಸಭೆಗಳನ್ನು ನಡೆಸಲಾಗುವುದು. ಎಎಸ್‌ಡಿಡಿಒ ಪ್ರಕ್ರಿಯೆಯ ಮೂಲಕ ಹೆಸರುಗಳನ್ನು ತೆಗೆದುಹಾಕಿರುವ ಪ್ರಕರಣಗಳನ್ನು ಪಂಚಾಯಿತಿ ಮಟ್ಟದಲ್ಲಿ ಸಮೀಕ್ಷೆ ನಡೆಸಿ ಪರಿಶೀಲಿಸಲಾಗುವುದು. ರಾಜ್ಯದ ಹಲವು ಭಾಗಗಳಲ್ಲಿ ಮತದಾರರ ಪಟ್ಟಿಯನ್ನು ತಿರುಚುವ ಪ್ರಯತ್ನಗಳು ನಡೆಯುತ್ತಿವೆ ಎಂದು ತಿಳಿಸಿದರು.

ಇದೇ ವೇಳೆ ವಿಜಯಪುರದ ಉದಾಹರಣೆ ನೀಡಿದ ಅವರು, ಜೀವಂತ ಮಹಿಳೆಯರ ಹೆಸರುಗಳನ್ನು ಮೃತಪಟ್ಟವರ ಪಟ್ಟಿಯಲ್ಲಿ ಸೇರಿಸಿ, ಮರಣ ಪ್ರಮಾಣಪತ್ರಗಳನ್ನು ಸಲ್ಲಿಸಲಾಗಿದೆ ಎಂದು ದೂರಿದರು.

ಮಲ್ಲೇಶ್ವರಂನಲ್ಲಿ ಇಂತಹ ಅಕ್ರಮಗಳಿಂದ ಪ್ರಭಾವಿತವಾಗಿರುವ 1,211 ಮತಗಳನ್ನು ಗುರುತಿಸಲಾಗಿದೆ ಎಂದು ಹೇಳಿದ ಅವರು, ವಿವಿಧ ಮತಗಟ್ಟೆಗಳಲ್ಲಿ ಒಂದೇ ದಿನ 1,108 ಅರ್ಜಿಗಳನ್ನು ಸಲ್ಲಿಸಲಾಗಿದೆ ಎಂದು ಆರೋಪಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಕಾಗ್ನಿಜಂಟ್, ಇನ್ಫೋಸಿಸ್, ಟಿಸಿಎಸ್, ವಿಪ್ರೋ ಎಚ್‌ಸಿಎಲ್ ಗೆ ಅಮೆರಿಕ ಶಾಕ್: ಗ್ರೀನ್ ಕಾರ್ಡ್ ಕಾರ್ಯಕ್ರಮದಿಂದ ಅಮಾನತು!

Sting operation ಮೂಲಕ ನಿಮ್ಮನ್ನು ಸಿಲುಕಿಸಲು ಯತ್ನಿಸಿರುವುದು ನಿಜವೇ ಆಗಿದ್ದರೆ ತನಿಖೆಗೆ ಆದೇಶಿಸಿ: ಸಿಎಂ ಡಿಕೆ.ಶಿವಕುಮಾರ್'ಗೆ HDK ಸವಾಲು

ಮತ ಕಳ್ಳತನದಿಂದಲೇ ಮೋದಿ ಪ್ರಧಾನಿಯಾಗಿದ್ದು, ಗೆಲ್ಲಲಾಗದ ರಾಜ್ಯಗಳಲ್ಲೂ BJP ಗೆಲುವು: ಅಭಿಜೀತ್ ದೀಪ್ಕೆ

ರಾಜ್ಯದ ಬಾಕಿ ಹಣದ ಬಗ್ಗೆ ನಿರ್ಮಲಾ ಸೀತಾರಾಮನ್ ಜೊತೆ ಚರ್ಚೆ: GST ಮಂಡಳಿ ಸಭೆ ಬಳಿಕ CM ಡಿಕೆ.ಶಿವಕುಮಾರ್ ಹರ್ಷ

ಉತ್ತರ ಭಾರತ ವ್ಯಕ್ತಿಯಿಂದ ಡಿಕೆಶಿ ಸಿಲುಕಿಸಲು ಯತ್ನ: ಸಚಿವ ಸತೀಶ್ ಜಾರಕಿಹೊಳಿ