ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ರಾಜ್ಯ

ಮಹಾಲಯ ಅಮಾವಾಸ್ಯೆಯಂದು ಪಿಡಬ್ಲೂಡಿ ಕಚೇರಿಯಲ್ಲಿ ವಾಮಾಚಾರ!

ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಕಚೇರಿಯ ಮೇಲ್ಭಾಗದಲ್ಲಿದ್ದ ಹುಣಸೆ ಮರದಲ್ಲಿ ಮಾನವ ಆಕೃತಿಯ ಕಪ್ಪು ಗೊಂಬೆಯನ್ನು ನೇತುಹಾಕಲಾಗಿತ್ತು. ಇದರಿಂದ ಸ್ಥಳದಲ್ಲಿ ಕೆಲ ಕಾಲ ಆತಂಕಕಾರಿ ವಾತಾವರಣ ಉಂಟಾಗಿತ್ತು.

PWD ಕಚೇರಿಯಲ್ಲಿ ವಾಮಾಚಾರ — online desk
Srinivas Rao BV
Updated On : 10 Oct 2026, 8:06 pm

ರಾಯಚೂರು: ಮಹಾಲಯ ಅಮಾವಾಸ್ಯೆಯ ದಿನದಂದು ರಾಯಚೂರಿನ ಲೋಕೋಪಯೋಗಿ ಇಲಾಖೆ (ಪಿಡಬ್ಲ್ಯೂಡಿ) ಕಚೇರಿಯಲ್ಲಿ ವಾಮಾಚಾರ ನಡೆದಿರುವ ಘಟನೆ ಬೆಳಕಿಗೆ ಬಂದಿದೆ.

ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಕಚೇರಿಯ ಮೇಲ್ಭಾಗದಲ್ಲಿದ್ದ ಹುಣಸೆ ಮರದಲ್ಲಿ ಮಾನವ ಆಕೃತಿಯ ಕಪ್ಪು ಗೊಂಬೆಯನ್ನು ನೇತುಹಾಕಲಾಗಿತ್ತು. ಇದರಿಂದ ಸ್ಥಳದಲ್ಲಿ ಕೆಲ ಕಾಲ ಆತಂಕಕಾರಿ ವಾತಾವರಣ ಉಂಟಾಗಿತ್ತು.

Also Read

ಧರ್ಮಸ್ಥಳ ಪ್ರಕರಣ: ಬಂಗ್ಲೆಗುಡ್ಡೆ ಕಾಡಿನಲ್ಲಿ ತಲೆಬುರುಡೆ ಪತ್ತೆ; ವಾಮಾಚಾರ ಶಂಕೆ?

ಸೌಲಭ್ಯಗಳ ಪರಿಶೀಲನೆಗೆ ತೆರಳಿದ್ದ ಸಿಬ್ಬಂದಿಯೊಬ್ಬರಿಗೆ ಈ ಗೊಂಬೆ ಮೊದಲಿಗೆ ಕಂಡಿದ್ದು, ನಂತರ ಹಿರಿಯ ಅಧಿಕಾರಿಗಳಿಗೆ ಮಾಹಿತಿ ನೀಡಲಾಯಿತು.

Advertisement

Advertisement

ತಕ್ಷಣವೇ ಸಿಬ್ಬಂದಿ ಈ ಗೊಂಬೆಯನ್ನು ಸುಟ್ಟು ಹಾಕಿದ್ದಾರೆ. ಸೂಕ್ತ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವಂತೆ ಸ್ಥಳೀಯರು ಒತ್ತಾಯಿಸಿದ್ದಾರೆ. ಸಿಸಿಟಿವಿ ದೃಶ್ಯಾವಳಿಗಳನ್ನು ಸಹ ಪರಿಶೀಲಿಸಲಾಗುತ್ತಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments